ಜಂಪ್‌ರೋಪ್‌ದಿಂದ ಮಾನಸಿಕ ಒತ್ತಡ ಕಡಿಮೆ

ಹನುಮಸಾಗರದ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಸಪಪೂ ಕಾಲೇಜಿನ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪಿಯು ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಜಂಪ್‌ರೋಪ್ ಕ್ರೀಡಾಕೂಟಕ್ಕೆ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಶಾಸಕ ದೊಡ್ಡನಗೌಡ ಎಚ್.ಪಾಟೀಲ್ ಚಾಲನೆ ನೀಡಿದರು. ಕೆಪಿಸಿಸಿ ಉಪಾಧ್ಯಕ್ಷ ಬಸವರಾಜ ದ್ಯಾವಣ್ಣನವರ, ಪ್ರಾಚಾರ್ಯರಾದ ಭೀಮಪ್ಪ ಗೊಲ್ಲರ, ಅನಿಲ ಸಂಗಮ, ಗ್ರಾಪಂ ಅಧ್ಯಕ್ಷ ರುದ್ರಗೌಡ ಗೌಡಪ್ಪನವರ, ಗ್ರಾಪಂ ಉಪಾಧ್ಯಕ್ಷೆ ಗೌರಮ್ಮ ವಾಲ್ಮೀಕಿ ಇತರರಿದ್ದರು.

Published on
ಹನುಮಸಾಗರ: ನಿರಂತರ ಪ್ರಯತ್ನದಿಂದ ಕ್ರೀಡೆಯಲ್ಲಿ ಸಾಧನೆ ಸಾಧ್ಯ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಶಾಸಕ ದೊಡ್ಡನಗೌಡ ಎಚ್. ಪಾಟೀಲ್ ಹೇಳಿದರು.
ಸಪಪೂ ಕಾಲೇಜಿನ ನೇತೃತ್ವದಲ್ಲಿ ಪಟ್ಟಣದ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪಿಯು ಕಾಲೇಜು ವಿದ್ಯಾರ್ಥಿಗಳ ಜಂಪ್ ರೋಪ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳು ಸೋಲು ಗೆಲುವುಗಳನ್ನು ಸಮನಾಗಿ ಸ್ವೀಕರಿಸಬೇಕು. ದೈಹಿಕವಾಗಿ ಸದೃಢವಾಗಿ ಬೆಳೆಯಲು ಹಾಗೂ ಮಾನಸಿಕ ಒತ್ತಡ ಕಡಿಮೆ ಮಾಡಲು ಜಂಪ್ ರೋಪ್ ಕ್ರೀಡೆ ಸಹಕಾರಿಯಾಗಿದೆ ಎಂದರು.
ಪಪೂ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ಜಗದೀಶ ಜಿ.ಎಚ್. ಮಾತನಾಡಿ, ಹನುಮಸಾಗರದಲ್ಲಿ ಹುಟ್ಟಿ ಬೆಳೆದ ಜಂಪರೋಪ್ ಕ್ರೀಡೆ ಇಂದು ರಾಜ್ಯ, ಅಂತರರಾಜ್ಯ, ರಾಷ್ಟ್ರ, ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಚಯವಾಗಿರುವುದು ಹೆಮ್ಮೆಯ ವಿಷಯ ಎಂದರು. 25 ಜಿಲ್ಲೆಗಳ ಪಿಯು ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net