ದೇಶ ದ್ರೋಹಿಗಳಿಂದ ವಿದ್ಯಾರ್ಥಿ ಶಕ್ತಿ ಒಡೆಯಲು ಹುನ್ನಾರ

ಗಂಗಾವತಿಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಮ್ಮಿಕೊಂಡಿದ್ದ ಕರ್ನಾಟಕ ಉತ್ತರ ಪ್ರಾಂತ ಕಾರ್ಯಕಾರಿಣಿ ಸಭೆಯಲ್ಲಿ ಪರಿಷತ್ ದಕ್ಷಿಣ ಮಧ್ಯ ಕ್ಷೇತ್ರದ ಸಂ.ಕಾರ್ಯದರ್ಶಿ ಶಿವಕುಮಾರ ಚಿರಗೆ, ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ, ಪ್ರಾಂತ ಸಂಘಟನಾ ಕಾರ್ಯದರ್ಶಿ ವೆಂಕಟೇಶ ಡಾಂಗೆ, ಸಹ ಕಾರ್ಯದರ್ಶಿ ಸುಜ್ಞಾತಾ ಕುಲಕರ್ಣಿ ಇತರರಿದ್ದರು.
ಗಂಗಾವತಿಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಮ್ಮಿಕೊಂಡಿದ್ದ ಕರ್ನಾಟಕ ಉತ್ತರ ಪ್ರಾಂತ ಕಾರ್ಯಕಾರಿಣಿ ಸಭೆಯಲ್ಲಿ ಪರಿಷತ್ ದಕ್ಷಿಣ ಮಧ್ಯ ಕ್ಷೇತ್ರದ ಸಂ.ಕಾರ್ಯದರ್ಶಿ ಶಿವಕುಮಾರ ಚಿರಗೆ, ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ, ಪ್ರಾಂತ ಸಂಘಟನಾ ಕಾರ್ಯದರ್ಶಿ ವೆಂಕಟೇಶ ಡಾಂಗೆ, ಸಹ ಕಾರ್ಯದರ್ಶಿ ಸುಜ್ಞಾತಾ ಕುಲಕರ್ಣಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಎಬಿವಿಪಿ ದಕ್ಷಿಣ ಮಧ್ಯ ಕ್ಷೇತ್ರದ ಸಂ.ಕಾರ್ಯದರ್ಶಿ ಶಿವಕುಮಾರ ಚಿರಗೆ ಹೇಳಿಕೆ
  • ಕರ್ನಾಟಕ ಉತ್ತರ ಪ್ರಾಂತ ಕಾರ್ಯಕಾರಿಣಿ ಸಭೆ
ಗಂಗಾವತಿ: ಶೈಕ್ಷಣಿಕ ಪರ ಹೋರಾಟ, ಸಮಾಜಮುಖಿ ಚಟುವಟಿಕೆಗಳ ಮೂಲಕ ವಿದ್ಯಾರ್ಥಿ ಪರಿಷತ್ ಜನರಿಗೆ ಹತ್ತಿರವಾಗುತ್ತಿದ್ದು, ದೇಶದ ರಕ್ಷಣೆಯಲ್ಲಿ ಮಂಚೂಣಿಯಲ್ಲಿದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ದಕ್ಷಿಣ ಮಧ್ಯ ಕ್ಷೇತ್ರದ ಸಂ.ಕಾರ್ಯದರ್ಶಿ ಶಿವಕುಮಾರ ಚಿರಗೆ ಹೇಳಿದರು.
ಇಲ್ಲಿನ ವಿದ್ಯಾನಗರದ ಅಮರ್ ಗಾರ್ಡನ್‌ನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶನಿವಾರ ಹಮ್ಮಿಕೊಂಡಿದ್ದ ಕರ್ನಾಟಕ ಉತ್ತರ ಪ್ರಾಂತ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದರು.
ನೇಪಾಳ ಮಾದರಿಯಲ್ಲಿ ಜೆನ್-ಜೀ ವಿಚಾರ ಮುಂದಿಟ್ಟು ದೇಶ ದ್ರೋಹಿಗಳು ವಿದ್ಯಾರ್ಥಿ ಶಕ್ತಿ ಒಡೆಯಲು ಯತ್ನಿಸುತ್ತಿದ್ದು, ವಾಸ್ತವಿಕತೆ ಜನರಿಗೆ ತಿಳಿಸುವ ಜವಾಬ್ದಾರಿ ಪರಿಷತ್ ಸದಸ್ಯರ ಮೇಲಿದೆ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಎಬಿವಿಪಿ ಪರಿಣಾಮಕಾರಿ ಹೋರಾಟ ನಡೆಸಿದ್ದು, ಜನರಿಗೆ ಸಂವಿಧಾನದ ಮಹತ್ವ ತಿಳಿಸುವ ಕಾರ್ಯ ಮಾಡುತ್ತಿದೆ. ಪರಿಷತ್ ಬಗ್ಗೆ ವಿದೇಶದಲ್ಲೂ ಉತ್ತಮ ಅಭಿಪ್ರಾಯವಿದ್ದು, ಇತ್ತೀಚಿಗೆ ವಿದೇಶದ ಪ್ರತಿನಿಧಿಗಳು ಪರಿಷತ್ ಕಾರ್ಯವೈಖರಿಯನ್ನು ಅಧ್ಯಯನ ಮಾಡಿ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.
ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಮಾತನಾಡಿ, ಶಿಕ್ಷಣ ಕ್ಷೇತ್ರವನ್ನು ರಾಜ್ಯ ಸರ್ಕಾರ ಕಡೆಗಣಿಸಿದ್ದು, ವಿದ್ಯಾರ್ಥಿವೇತನ ಸೇರಿ ಮೂಲ ಸೌಕರ್ಯ ಒದಗಿಸುವಲ್ಲಿ ವಿಲವಾಗಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯವಿಲ್ಲ, ವಿವಿಗಳಿಗೆ ಅನುದಾನ ನೀಡುತ್ತಿಲ್ಲ ಎಂದರು.
ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಎರಡು ದಿನದ ಸಭೆಯಲ್ಲಿ ಶೈಕ್ಷಣಿಕ ಸೇರಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿ, ಹೋರಾಟದ ನಿರ್ಣಯ ಕೈಗೊಳ್ಳಲಾಗುತ್ತಿದೆ. ಪ್ರಾಂತ ಸಂಘಟನಾ ಕಾರ್ಯದರ್ಶಿ ವೆಂಕಟೇಶ ಡಾಂಗೆ, ರಾಜ್ಯ ಸಹ ಕಾರ್ಯದರ್ಶಿ ಸುಜ್ಞಾತಾ ಕುಲಕರ್ಣಿ ಸೇರಿ ವಿವಿಧ ಜಿಲ್ಲೆಯ ಪ್ರತಿನಿಧಿಗಳಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net