ಅವಳಿ ತಾಲೂಕಿನ 24 ಕೆರೆಗಳಿಗೆ ಕೃಷ್ಣೆಯ ನೀರು

ಯಲಬುರ್ಗಾ ತಾಲೂಕಿನ ಬಂಡಿ ಗ್ರಾಮದ ಕೆರೆಗೆ ಕೃಷ್ಣಾ ನದಿ ನೀರು ಬರುತ್ತಿರುವ ದೃಶ್ಯ.
ಯಲಬುರ್ಗಾ ತಾಲೂಕಿನ ಬಂಡಿ ಗ್ರಾಮದ ಕೆರೆಗೆ ಕೃಷ್ಣಾ ನದಿ ನೀರು ಬರುತ್ತಿರುವ ದೃಶ್ಯ.
Published on

ಪ್ರಮುಖ ಮುಖ್ಯಾಂಶಗಳು

  • ಸಚಿವ ರಾಯರಡ್ಡಿ ಪತ್ರಕ್ಕೆ ಸ್ಪಂದನೆ
  • ಯಲಬುರ್ಗಾ ಕ್ಷೇತ್ರದ ರೈತರಲ್ಲಿ ಸಂತಸ
ಯಲಬುರ್ಗಾ: ಕೃಷ್ಣಾ ನದಿಯಿಂದ ಯಲಬುರ್ಗಾ ಹಾಗೂ ಕುಕನೂರು ತಾಲೂಕಿನ 24 ಕೆರೆಗಳಿಗೆ ಶನಿವಾರದಿಂದ ನೀರು ಹರಿಸಲಾಗಿದೆ. ಇದರಿಂದ ರೈತರು ಹಾಗೂ ಸಾರ್ವಜನಿಕರ ಮೊಗದಲ್ಲಿ ಸಂತಸ ಮೂಡಿದೆ.
ಕೆರೆ ತುಂಬಿಸುವ ಯೋಜನೆಯಡಿ ಅವಳಿ ತಾಲೂಕಿನ ಕೆರೆಗಳಿಗೆ ಕೃಷ್ಣಾ ನದಿ ನೀರು ಹರಿಸಲಾಗುತ್ತಿದೆ. ಮಳೆ ಕೊರತೆಯಿಂದ ಬತ್ತಿಹೋಗಿದ್ದ ಕೆರೆಗಳಿಗೆ ಮರು ಜೀವ ಬಂದಂತಾಗಿದ್ದು, ಅಂತರ್ಜಲ ಮಟ್ಟ ಹೆಚ್ಚಳ, ಜನಜಾನುವಾರುಗಳು ಹಾಗೂ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.
ಸಚಿವ ರಾಯರಡ್ಡಿಯಿಂದ ಪತ್ರ: ಗದಗ, ಕೊಪ್ಪಳ ಹಾಗೂ ಬಾಗಲಕೋಟೆ ಜಿಲ್ಲೆಗಳ ವ್ಯಾಪ್ತಿಯ 76 ಕೆರೆಗಳಿಗೆ ನೀರು ಹರಿಸುವಂತೆ ಸಚಿವ ಬಸವರಾಜ ರಾಯರಡ್ಡಿ ಅವರು ಜು.25ರಂದು ನೀರಾವರಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿರುವ ನೀರಾವರಿ ಇಲಾಖೆ ಹಾಗೂ ಕೆಬಿಜೆಎನ್‌ಎಲ್ ಅಧಿಕಾರಿಗಳು ಕೆರೆಗಳಿಗೆ ನೀರು ಹರಿಸಿದ್ದು, ರೈತ ಸಮೂಹ ಸಂತಸ ವ್ಯಕ್ತಪಡಿಸಿದೆ.
"

ನೀರಾವರಿ ಸಚಿವರು ಹಾಗೂ ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು ಮನವಿ ಮಾಡಿದ್ದೆ. ಇದಕ್ಕೆ ಸ್ಪಂದಿಸಿ ಯಲಬುರ್ಗಾ-ಕುಕನೂರು ತಾಲೂಕಿನ 24 ಕೆರೆಗಳಿಗೆ ನೀರು ಹರಿಸಲಾಗುತ್ತಿದೆ. ಶೀಘ್ರದಲ್ಲೇ ಹೊಸದಾಗಿ 34 ಕೆರೆಗಳಿಗೆ ನೀರು ಹರಿಸುವ ಕೆಲಸವೂ ನಡೆಯಲಿದೆ.

— > ಬಸವರಾಜ ರಾಯರಡ್ಡಿ, ಸಚಿವ

"

ಸಚಿವ ಬಸವರಾಜ ರಾಯರಡ್ಡಿ ಅವರು ಕ್ಷೇತ್ರದ 24 ಕೆರೆಗಳಿಗೆ ನೀರು ಹರಿಸುವಂತೆ ಪತ್ರ ಬರೆದಿದ್ದರು. ಅದರಂತೆ ಕೃಷ್ಣಾ ನದಿಯಿಂದ ನೀರು ಹರಿಸಲಾಗಿದೆ. ಶೀಘ್ರದಲ್ಲೇ ಎಲ್ಲ ಕೆರೆಗಳಿಗೆ ನಿರಂತರವಾಗಿ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು.

— > ಚನ್ನಪ್ಪ ಎಸ್.ಒ., ಕೆಬಿಜೆಎನ್‌ಎಲ್ ಅಧಿಕಾರಿ, ಯಲಬುರ್ಗಾ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net