ಕಾರ್ಮಿಕರಿಗೆ ಕೂಲಿ ನೀಡಿ

ಪರಿಸರ ದಿನಾಚರಣೆಗೆ ಕರೆದೊಯ್ಯುವ ಕಾರ್ಮಿಕರಿಗೆ ಒಂದು ದಿನದ ಕೂಲಿ ನೀಡುವಂತೆ ಒತ್ತಾಯಿಸಿ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕ ಸಂಘದ ಜಿಲ್ಲಾ ಪದಾಧಿಕಾರಿಗಳು ಸೋಮವಾರ ಕೊಪ್ಪಳದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗಗೆ ಮನವಿ ಸಲ್ಲಿಸಿದರು. ಸಂಘದ ಜಿಲ್ಲಾಧ್ಯಕ್ಷ ಶರಣು ಗಡ್ಡಿ, ಜಿಲ್ಲಾ ಮುಖಂಡರಾದ ಕುಮಾರ ದೊಡ್ಡಗೌಡರ್​, ನಾಗರಾಜ್​ ಹುಲಿಗಿ, ಯಲ್ಲಪ್ಪ ಬೆಟಗೇರಿ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಕಾರ್ಮಿಕ ಸಂಘದಿಂದ ಮನವಿ
ಕೊಪ್ಪಳ : ಬೆಂಗಳೂರಿನಲ್ಲಿ ಬಿಡಿಎಯಿಂದ ಜೂ.27ರಂದು 7.5 ಲಕ್ಷ ಸಸಿ ನೆಡುವ ಕಾರ್ಯಕ್ರಮಕ್ಕೆ ಬರುವ ಕಾರ್ಮಿಕರಿಗೆ ಒಂದು ದಿನದ ಕೂಲಿ ನೀಡುವಂತೆ ಒತ್ತಾಯಿಸಿ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕ ಸಂಘದ ಜಿಲ್ಲಾ ಪದಾಧಿಕಾರಿಗಳು ಸೋಮವಾರ ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗಗೆ ಮನವಿ ಸಲ್ಲಿಸಿದರು.
ಪರಿಸರದ ಬಗ್ಗೆ ಅರಿವು ಮೂಡಿಸುತ್ತಿರುವುದು ಉತ್ತಮ ಕೆಲಸ. ರಾಜ್ಯದ ವಿವಿಧ ಭಾಗಗಳಿಂದ ಸುಮಾರು 13,750 ಕಟ್ಟಡ ಕಾರ್ಮಿಕರನ್ನು ಭಾಗವಹಿಸಲು ಆಹ್ವಾನಿಸಿರುವುದಾಗಿ ತಿಳಿದುಬಂದಿದೆ. ಆಗಮಿಸುವ ಕಾರ್ಮಿಕರಿಗೆ ಉಪಾಹಾರ, ಮಧ್ಯಾಹ್ನ ಊಟ, ಬಸ್​ ವ್ಯವಸ್ಥೆ ಮಾಡುವುದಾಗಿ ತಿಳಿಸಲಾಗಿದೆ. ಆದರೆ, ಕಟ್ಟಡ ಕಾರ್ಮಿಕರು ದಿನಗೂಲಿ ಆಧರಿಸಿ ಜೀವನ ನಡೆಸುತ್ತಾರೆ. ಅವರಿಗೆ ಒಂದು ದಿನದ ಕೂಲಿ ನೀಡಬೇಕು. ಕಾರ್ಯಕ್ರಮಕ್ಕೆ ಸರ್ಕಾರದ ಹಣ ಬಳಸಬೇಕು. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಹಣ ಬಳಸಬಾರದು ಎಂದು ಒತ್ತಾಯಿಸಿದರು.
ಸಂಘದ ಜಿಲ್ಲಾಧ್ಯಕ್ಷ ಶರಣು ಗಡ್ಡಿ, ಜಿಲ್ಲಾ ಮುಖಂಡರಾದ ಕುಮಾರ ದೊಡ್ಡಗೌಡರ್​, ನಾಗರಾಜ್​ ಹುಲಿಗಿ, ಯಲ್ಲಪ್ಪ ಬೆಟಗೇರಿ, ಆಂಜನೇಯ, ಶರೀಫ್​ ಸಾಬ್​, ಮಲ್ಲಪ್ಪ ಮಾದಿನೂರು ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net