ಕೂಲಿಕಾರರು ಆರೋಗ್ಯಕ್ಕೆ ಆದ್ಯತೆ ನೀಡಲಿ

ಯಲಬುರ್ಗಾ ತಾಲೂಕಿನ ವಣಗೇರಿ ಗ್ರಾಮದ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ತಾಪಂ ಇಒ ನೀಲಗಂಗಾ ಬಬಲಾದ ಕೂಲಿ ಕಾರ್ಮಿಕರೊಂದಿಗೆ ಮಾತನಾಡಿದರು. ತಾಲೂಕು ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ, ಕಂಪ್ಯೂಟರ್ ಆಪರೇಟರ್ ಶರಣಪ್ಪ ಇತರರಿದ್ದರು.
ಯಲಬುರ್ಗಾ ತಾಲೂಕಿನ ವಣಗೇರಿ ಗ್ರಾಮದ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ತಾಪಂ ಇಒ ನೀಲಗಂಗಾ ಬಬಲಾದ ಕೂಲಿ ಕಾರ್ಮಿಕರೊಂದಿಗೆ ಮಾತನಾಡಿದರು. ತಾಲೂಕು ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ, ಕಂಪ್ಯೂಟರ್ ಆಪರೇಟರ್ ಶರಣಪ್ಪ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ತಾಪಂ ಇಒ ನೀಲಗಂಗಾ ಬಬಲಾದ ಸಲಹೆ
  • ಯಲಬುರ್ಗಾ ಎನ್‌ಎಂಎಂಎಸ್ ಹಾಜರಾತಿ ಪರಿಶೀಲನೆ
ಯಲಬುರ್ಗಾ: ನರೇಗಾದಡಿ ಬೇಸಿಗೆಯ ಎರಡು ತಿಂಗಳು ನಿರಂತರ ಕೆಲಸ ಕೊಡಲು ದುಡಿಯೋಣ ಬಾ-230 ಅಭಿಯಾನ ಮಾಡುತ್ತಿದ್ದು, ಎಲ್ಲ ಅಕುಶಲ ಕೂಲಿಕಾರರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಪಂ ಇಒ ನೀಲಗಂಗಾ ಬಬಲಾದ ಹೇಳಿದರು.
ತಾಲೂಕಿನ ವಣಗೇರಿ ಗ್ರಾಮದಲ್ಲಿ ನಡೆದ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಎನ್‌ಎಂಎಂಎಸ್ ಹಾಜರಾತಿ ಪರಿಶೀಲಿಸಿ ಮಾತನಾಡಿದರು. ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಸಕ್ರಿಯವಾಗಿ ಭಾಗವಹಿಸಬೇಕು. ಸರ್ಕಾರದ ವಿಶೇಷ ಯೋಜನೆಗಳ ಲಾಭ ಪಡೆದುಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು.
ಗ್ರಾಪಂಗಳು ಮಹಿಳಾಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಾ ಆರ್ಥಿಕವಾಗಿ ಸಬಲರನ್ನಾಗಿಸುವಲ್ಲಿ ಸಾಕಷ್ಟು ಪ್ರಯತ್ನ ಮಾಡುತ್ತಿವೆ. ಹೀಗಾಗಿ ಕೂಲಿಕಾರರು ಕೆಲಸ ಮಾಡುವ ಸಂದರ್ಭದಲ್ಲಿ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಬಿಸಿಲಿನ ವೇಳೆ ಹೊರಗಡೆ ಬರಬಾರದು. ಹೆಚ್ಚು ನೀರು ಕುಡಿಯಬೇಕು ಎಂದು ಸಲಹೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net