ಲಾಠಿಚಾರ್ಜ್ ಪ್ರಜಾಪ್ರಭುತ್ವ ವಿರುದ್ಧದ ನಡೆ

ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್ ಖಂಡಿಸಿ ಕೊಪ್ಪಳದಲ್ಲಿ ನಡೆದ ಪ್ರತಿಭಟನೆಯಲ್ಲಿ ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಶರಣು ಪಾಟೀಲ್ ಮಾತನಾಡಿದರು. ಪ್ರಮುಖರಾದ ಬಸವರಾಜ್ ಶೀಲವಂತರ, ಶರಣು ಗಡ್ಡಿ, ಸುಬಾನ್ ನೀರಲಗಿ, ಶಿವಕುಮಾರ್, ಮಂಗಳೇಶ್ ರಾಥೋಡ್, ಹೊನ್ನೂರು, ಮಹಾಂತೇಶ್ ಕೊತಬಾಳ, ಎಸ್.ಎ. ಗಫಾರ್ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಶರಣು ಪಾಟೀಲ್ ಹೇಳಿಕೆ
ಕೊಪ್ಪಳ: ದೆಹಲಿಯಲ್ಲಿ ಪ್ರತಿಭಟನಾಕಾರರ ಮೇಲೆ ನಡೆದ ಲಾಠಿಚಾರ್ಜ್ ಹಾಗೂ ಅಶ್ರುವಾಯು ಶೆಲ್ ದಾಳಿ ಖಂಡಿಸಿ ಎಐಡಿವೈಒ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಮಂಗಳವಾರ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಶರಣು ಪಾಟೀಲ್ ಮಾತನಾಡಿ, ಶಾಂತಿಯುತವಾಗಿ ನಡೆಯಬೇಕಿದ್ದ ಸಂಸತ್ ಮೆರವಣಿಗೆಯನ್ನು ಆರಂಭಕ್ಕೂ ಮುನ್ನವೇ ಪೊಲೀಸರು ಬಲವಂತವಾಗಿ ತಡೆದು ಲಾಠಿಚಾರ್ಜ್ ಹಾಗೂ ಅಶ್ರುವಾಯು ಶೆಲ್ ಪ್ರಯೋಗಿಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ದೂರಿದರು.
ಪ್ರಗತಿಪರ ಸಂಘಟನೆಗಳ ಜಿಲ್ಲಾ ಸಂಚಾಲಕ ಬಸವರಾಜ್ ಶೀಲವಂತರ ಮಾತನಾಡಿ, ಯುವಜನರಿಗೆ ನ್ಯಾಯಸಮ್ಮತ ಪರೀಕ್ಷಾ ವ್ಯವಸ್ಥೆ ಹಾಗೂ ಉದ್ಯೋಗ ಒದಗಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಈ ವೈಫಲ್ಯಗಳನ್ನು ಮರೆಮಾಚಲು ಪ್ರತಿಭಟನೆಗಳನ್ನು ಹತ್ತಿಕ್ಕುವ ಮಾರ್ಗ ಅನುಸರಿಸಲಾಗುತ್ತಿದೆ. ಜಂತರ್ ಮಂತರ್‌ಗೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಿರುವುದು ಸರ್ಕಾರದ ದಮನಕಾರಿ ಮನೋಭಾವಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.
ಪ್ರಮುಖರಾದ ಎ. ಶರಣು ಗಡ್ಡಿ, ಸುಬಾನ್ ನೀರಲಗಿ, ಶಿವಕುಮಾರ್, ಮಂಗಳೇಶ್ ರಾಥೋಡ, ಹೊನ್ನೂರು, ಮಹಾಂತೇಶ್ ಕೊತಬಾಳ, ಎಸ್.ಎ. ಗಫಾರ್, ಚನ್ನಬಸಪ್ಪ ಪಾಸ್ಟರ್, ಮಕ್ಬಲ್ ಸಾಬ್, ಧರ್ಮರಾಜ್ ಗೋನಾಳ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net