ಜಗತ್ತಿನ ಎಲ್ಲ ಭಾಷೆಗಳನ್ನು ಕಲಿಯೋದು ಹೇಗೆ ಗೊತ್ತಾ?

ಗಂಗಾವತಿ ತಾಲೂಕಿನ ಶ್ರೀರಾಮನಗರದ ಸಿಎನ್‌ಆರ್ ಸರ್ಕಾರಿ ಪದವಿ ಕಾಲೇಜಿನಲ್ಲಿ ಸೆವೆನ್ತ್ ಸೆನ್ಸ್ ಪೀಪಲ್ ಡೆವಲಪ್ಮೆಂಟ್ ಸೊಲ್ಯೂಷನ್ಸ್ ಮತ್ತು ಇಂಗ್ಲಿಷ್ ವಿಭಾಗದಿಂದ ಹಮ್ಮಿಕೊಂಡಿದ್ದ ಆನ್‌ಲೈನ್ ಎಸ್‌ಇಎಪಿ ತರಬೇತಿ ಕಾರ್ಯಾಗಾರದಲ್ಲಿ ಮಾಹಿತಿ ಪತ್ರವನ್ನು ಪ್ರಾಚಾರ್ಯ ಪ್ರೊ.ಸುಂಕೇಶ್ವರ ಕರಿಗೂಳಿ ಗುರುವಾರ ಬಿಡುಗಡೆಗೊಳಿಸಿದರು. ತರಬೇತುದಾರರಾದ ಪಲ್ಲವಿ, ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಡಾ.ಸರರಾಜ್ ಅಹ್ಮದ್ ಇತರರಿದ್ದರು.

Published on
ಗಂಗಾವತಿ: ಆನ್‌ಲೈನ್ ಕೋರ್ಸ್‌ಗಳ ಮೂಲಕ ಗ್ರಾಮೀಣ ವಿದ್ಯಾರ್ಥಿಗಳು ಎಲ್ಲ ಭಾಷೆಗಳನ್ನು ಕಲಿಯಲು ಸಮರ್ಥರಾಗಿದ್ದು, ಇಂಗ್ಲಿಷ್ ಕಲಿಕೆ ಬಗ್ಗೆ ಹಿಂಜರಿಕೆ ಬೇಡ ಎಂದು ಪ್ರಾಚಾರ್ಯ ಪ್ರೊ. ಸುಂಕೇಶ್ವರ ಕರಿಗೂಳಿ ಹೇಳಿದರು.
ತಾಲೂಕಿನ ಶ್ರೀರಾಮನಗರದ ಸಿಎನ್‌ಆರ್ ಸರ್ಕಾರಿ ಪದವಿ ಕಾಲೇಜಿನಲ್ಲಿ ಬೆಂಗಳೂರಿನ ಸೆವೆನ್ತ್ ಸೆನ್ಸ್ ಪೀಪಲ್ ಡೆವಲಪ್ಮೆಂಟ್ ಸೊಲ್ಯೂಷನ್ಸ್, ವಾದ್ವಾನಿ ಎಐ ಮತ್ತು ಕಾಲೇಜಿನ ಇಂಗ್ಲಿಷ್ ವಿಭಾಗದಿಂದ ಗುರುವಾರ ಹಮ್ಮಿಕೊಂಡಿದ್ದ ಆನ್‌ಲೈನ್ ಎಸ್‌ಇಎಪಿ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. 
ತರಬೇತಿ ಹಾಗೂ ಪ್ರಮಾಣಪತ್ರ ಕೋರ್ಸ್‌ಗಾಗಿ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳು ಎರಡು ತಿಂಗಳು ವ್ಯಾಸಂಗ ಮಾಡಿ ಪ್ರಮಾಣಪತ್ರ ಪಡೆಯಬಹುದಾಗಿದೆ ಎಂದರು.
ಬೆಂಗಳೂರಿನ ತರಬೇತುದಾರರಾದ ಪಲ್ಲವಿ, ತರಬೇತಿ ಕಾರ್ಯವಿಧಾನ, ನೋಂದಣಿ ಕುರಿತು ಮಾಹಿತಿ ನೀಡಿದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಡಾ.ಸರರಾಜ್ ಅಹ್ಮದ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಹಾಯಕ ಪ್ರಾಧ್ಯಾಪಕರಾದ ವೀರೇಶ, ರವಿಕುಮಾರ, ಡಾ. ವಿರೂಪಾಕ್ಷ, ಡಾ.ಶಶಿಕುಮಾರ, ಶಂಕ್ರಪ್ಪ, ಪೆನಜಾ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net