ಕುಷ್ಟಗಿ: ತಾಲೂಕಿನ ಹಿರೇಬನ್ನಿಗೋಳ ಗ್ರಾಮದ ಉಪನ್ಯಾಸಕ ಶರಣಪ್ಪ ಗೋಣಿ ಅವರ ಸೇವೆಯನ್ನು ಪರಿಗಣಿಸಿ ಬೆಂಗಳೂರಿನ ಶ್ರೀ ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗಕಲಾವಿದರ ಸಾಧಕರ ಶ್ರೀಮಾತಾ ಪ್ರಕಾಶನದಿಂದ ರಾಜ್ಯಮಟ್ಟದ ಉತ್ತಮ ಉಪನ್ಯಾಸಕ ಸೇವಾರತ್ನ ಪ್ರಶಸ್ತಿ ಲಭಿಸಿದೆ.
ಇತ್ತೀಚೆಗೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಚಾಮರಾಜಪೇಟೆಯ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.