ತರಬೇತಿ ಕೇಂದ್ರ ಹಾಗೂ ಸುತ್ತಲಿನ ಪ್ರದೇಶದಲ್ಲಿ ಚಿರತೆ ಸಂಚಾರ ಪತ್ತೆಯಾದ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು, ಕಾಸನಕಂಡಿ ಬಳಿ ಬೋನು ಅಳವಡಿಸಿದ್ದರು. ಗುರುವಾರ ಬೆಳಗ್ಗೆ 2 ವರ್ಷದ ಚಿರತೆ ಬೋನಿನಲ್ಲಿ ಸೆರೆಯಾಗಿದ್ದು, ಆರೋಗ್ಯವಾಗಿದೆ ಎಂದು ತಿಳಿಸಿದ್ದಾರೆ. ವಿಜಯನಗರ ಜಿಲ್ಲೆಯ ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನವನಕ್ಕೆ ರವಾನಿಸಲಾಗಿದೆ.