ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಎಸ್ಸಿಪಿ-&ಟಿಎಸ್ಪಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಡಿಸಿ ಡಾ. ಸುರೇಶ ಬಿ. ಇಟ್ನಾಳ ಮಾತನಾಡಿದರು. ಜಿಪಂ ಸಿಇಒ ವರ್ಣಿತ್ ನೇಗಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಜೆ.ಡಿ ಕೃಷ್ಣಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೂಗಲದ, ಪಶುವೈದ್ಯಕಿಯ ಸೇವಾ ಇಲಾಖೆ ಉಪನಿರ್ದೇಶಕ ಡಾ. ಪಿ.ಎಂ.ಮಲ್ಲಯ್ಯ ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಡಿಸಿ ಡಾ.ಸುರೇಶ್ ಇಟ್ನಾಳ ಸೂಚನೆ
ಎಸ್ಸಿಪಿ-ಟಿಎಸ್ಪಿ ಪ್ರಗತಿ ಪರಿಶೀಲನಾ ಸಭೆ
ಕೊಪ್ಪಳ : ವಿವಿಧ ಇಲಾಖೆಗಳ ಮೂಲಕ ಎಸ್ಸಿಪಿ&ಟಿಎಸ್ಪಿ ಯೋಜನೆಗಳಡಿ ಮೀಸಲಾದ ಅನುದಾನವು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಡಿಸಿ ಡಾ. ಸುರೇಶ್ ಬಿ. ಇಟ್ನಾಳ ಸೂಚಿಸಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಎಸ್ಸಿಪಿ-&ಟಿಎಸ್ಪಿ ಯೋಜನೆಗಳ ಪ್ರಗತಿ ಪರಿಶೀಲನೆ, ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.
ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬವಾಗದಂತೆ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ. ಬಾಕಿ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಿ. ಈ ಅನುದಾನದ ಸಮರ್ಪಕ ಬಳಕೆಗೆ ಆದ್ಯತೆ ನೀಡಬೇಕು. ಯೋಜನೆಯ ಮೂಲ ಧ್ಯೇಯ ಮತ್ತು ಮಾನದಂಡಗಳಿಗೆ ಅನುಸಾರವಾಗಿ ಇಲಾಖೆಗಳು ಕಾರ್ಯನಿರ್ವಹಿಸಬೇಕು. ಬಿಡುಗಡೆಯಾದ ಅನುದಾನವನ್ನು ಯಾವ ಉದ್ದೇಶಕ್ಕೆ ಬಳಸಲಾಗಿದೆ, ಯಾವ ಪ್ರದೇಶದಲ್ಲಿ ಕಾಮಗಾರಿ ಮಾಡಲಾಗಿದೆ ಎನ್ನುವ ಮಾಹಿತಿ ಸ್ಪಷ್ಟವಾಗಿ ನೀಡಬೇಕು ಎಂದು ತಿಳಿಸಿದರು.
ಜಿಪಂ ಸಿಇಒ ವರ್ಣಿತ್ ನೇಗಿ ಮಾತನಾಡಿ, ಎಸ್ಸಿಪಿ-&ಟಿಎಸ್ಪಿ ಯೋಜನೆಗಳಡಿ ಕೈಗೊಳ್ಳಲಾಗುತ್ತಿರುವ ಕಾರ್ಯಕ್ರಮಗಳು ನಿಗದಿತ ಗುರಿಯಂತೆ ಅನುಷ್ಠಾವಾಗಬೇಕು. ಅರ್ಹ ಫಲಾನುಭವಿಗಳನ್ನು ಗುರುತಿಸಿ, ಸರ್ಕಾರದ ಸೌಲಭ್ಯ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಿ ಎಂದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಜೆ.ಡಿ ಕೃಷ್ಣಮೂರ್ತಿ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಕೃಷ್ಣ ಉಕ್ಕುಂದ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೂಗಲದ, ಪಶು ಪಾಲನಾ ಮತ್ತು ಪಶುವೈದ್ಯಕಿಯ ಸೇವಾ ಇಲಾಖೆ ಉಪನಿರ್ದೇಶಕ ಡಾ. ಪಿ.ಎಂ.ಮಲ್ಲಯ್ಯ, ಆಹಾರ ಇಲಾಖೆ ಉಪನಿರ್ದೇಶಕ ವಿಶ್ವನಾಥ, ಮಹಿಳ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಅಮರೇಶ, ಡಿಡಿಪಿಯು ಜಗದೀಶ ಇತರರಿದ್ದರು.
ಇಲಾಖವಾರು ಪರಿಶೀಲನೆ
ಬುಡಕಟ್ಟು ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಇಲಾಖಾ ವಾರು ಜುಲೈ 2026ರ ಅಂತ್ಯದವರೆಗಿನ ಪ್ರಗತಿ ಪರಿಶೀಲನೆ ನಡೆಯಿತು.