ಶಿಲಾಸ್ಮಾರಕಗಳ ಅಭಿವೃದ್ಧಿ ಕೈಗೊಳ್ಳಲಿ

ಗಂಗಾವತಿಯಲ್ಲಿ ಹಮ್ಮಿಕೊಂಡಿದ್ದ ಹಿರೇಬೆಣಕಲ್ ಮೋರೆರ್ ಸಾಂಸ್ಕೃತಿಕ ಸಂಭ್ರಮವನ್ನು ಮಾಜಿ ಎಂಎಲ್‌ಸಿ ಎಚ್.ಆರ್. ಶ್ರೀನಾಥ ಉದ್ಘಾಟಿಸಿದರು. ಮಾಜಿ ಶಾಸಕ ಪರಣ್ಣ ಮುನವಳ್ಳಿ, ಮಾಜಿ ಸಂಸದ ಎಸ್.ಶಿವರಾಮನಗೌಡ ಇತರರಿದ್ದರು.
ಗಂಗಾವತಿಯಲ್ಲಿ ಹಮ್ಮಿಕೊಂಡಿದ್ದ ಹಿರೇಬೆಣಕಲ್ ಮೋರೆರ್ ಸಾಂಸ್ಕೃತಿಕ ಸಂಭ್ರಮವನ್ನು ಮಾಜಿ ಎಂಎಲ್‌ಸಿ ಎಚ್.ಆರ್. ಶ್ರೀನಾಥ ಉದ್ಘಾಟಿಸಿದರು. ಮಾಜಿ ಶಾಸಕ ಪರಣ್ಣ ಮುನವಳ್ಳಿ, ಮಾಜಿ ಸಂಸದ ಎಸ್.ಶಿವರಾಮನಗೌಡ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮಾಜಿ ಎಂಎಲ್‌ಸಿ ಎಚ್.ಆರ್. ಶ್ರೀನಾಥ ಆಗ್ರಹ
  • ಗಂಗಾವತಿ ಹಿರೇಬೆಣಕಲ್ ಸಾಂಸ್ಕೃತಿಕ ಸಂಭ್ರಮ
ಗಂಗಾವತಿ: ತಾಲೂಕಿನ ಸುತ್ತಲಿರುವ ಏಳು ಬೆಟ್ಟಗಳ ಸಾಲಿನಲ್ಲಿ ಅದ್ಭುತ ಶಿಲಾಸ್ಮಾರಕಗಳಿದ್ದು, ಇವುಗಳನ್ನು ಪ್ರವಾಸೋದ್ಯಮ ಪೂರಕವಾಗಿ ಅಭಿವೃದ್ಧಿಗೊಳಿಸುವ ಅಗತ್ಯವಿದೆ ಎಂದು ಮಾಜಿ ಎಂಎಲ್‌ಸಿ ಎಚ್.ಆರ್.ಶ್ರೀನಾಥ ಹೇಳಿದರು.
ಕೊಟ್ಟೂರು ಬಸವೇಶ್ವರ ವೇದಿಕೆಯಲ್ಲಿ ಹಿರೇಬೆಣಕಲ್ ಮೋರೆರ್ ಸಾಂಸ್ಕೃತಿಕ ಪ್ರತಿಷ್ಠಾನ, ಗಂಗಾವತಿ ಚಾರಣ ಬಳಗ, ಪರಿಸರ ಸೇವಾ ಟ್ರಸ್ಟ್ ಹಾಗೂ ಕಿಷ್ಕಿಂಧಾ ಯುವ ಚಾರಣ ಬಳಗದ ಸಹಯೋಗದಲ್ಲಿ ಆಯೋಜಿಸಿದ್ದ ಹಿರೇಬೆಣಕಲ್ ಮೋರೆರ್ ಸಾಂಸ್ಕೃತಿಕ ಸಂಭ್ರಮ ಉದ್ಘಾಟಿಸಿ ಮಾತನಾಡಿದರು. ಮೋರೆರ್ ಬೆಟ್ಟಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ದಕ್ಷಿಣ ಭಾರತದಲ್ಲೇ ಇದು ವಿಶೇಷ ಸ್ಥಾನ ಪಡೆದಿದೆ. ಇಂತಹ ಅಮೂಲ್ಯ ನೈಸರ್ಗಿಕ ಸಂಪತ್ತು ಹೊಂದಿರುವ ಬೆಟ್ಟದ ವ್ಯಾಪ್ತಿಯಲ್ಲಿ ಅಣುಸ್ಥಾವರ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಹುನ್ನಾರ ನಡೆಸುತ್ತಿದ್ದು, ಇದನ್ನು ಪ್ರತಿಯೊಬ್ಬರೂ ಒಕ್ಕೊರಲಿನಿಂದ ವಿರೋಧಿಸಬೇಕಿದೆ ಎಂದರು.
ಮಾಜಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ಇತಿಹಾಸವನ್ನು ಸಾರುವ ಶಿಲಾಸ್ಮಾರಕಗಳ ರಕ್ಷಣೆ ಮತ್ತು ಅಭಿವೃದ್ಧಿ ಸರ್ಕಾರದ ಜವಾಬ್ದಾರಿ. ಸಂಬಂಧಪಟ್ಟ ಇಲಾಖೆಯು ಇಲ್ಲಿ ಪ್ರವಾಸೋದ್ಯಮ ಪೂರಕ ಯೋಜನೆಗಳನ್ನು ಹಮ್ಮಿಕೊಳ್ಳಬೇಕು ಎಂದರು.
ಇದೇ ವೇಳೆ ಹಿರೇಬೆಣಕಲ್ ಮೋರೆರ್ ಶಿಲಾಸಮಾಧಿಗಳ ಪ್ರಸ್ತುತ ಸ್ಥಿತಿಗತಿ ಕುರಿತ ಡ್ರೋನ್ ದೃಶ್ಯಗಳ ಪ್ರದರ್ಶನ, ಅಂಚೆ ಚೀಟಿ ಬಿಡುಗಡೆ, ಸಾಧಕರ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ತಲೇಖಾನ ಹಿರೇಮಠದ ವೀರಭದ್ರ ಶರಣರು, ಮಾಜಿ ಸಂಸದ ಎಸ್.ಶಿವರಾಮನಗೌಡ, ಮಾಜಿ ಶಾಸಕ ಎಚ್.ಎಸ್.ಮುರಳೀಧರ, ಇತಿಹಾಸ ಸಂಶೋಧಕ ಡಾ.ಶರಣಬಸಪ್ಪ ಕೋಲ್ಕಾರ್, ರಾಜವಂಶಸ್ಥೆ ಲಲಿತಾರಾಣಿರಾಯಲು, ಹಾಸ್ಯಭಾಷಣಕಾರ ಗಂಗಾವತಿ ಬೀಚಿ ಬಿ.ಪ್ರಾಣೇಶ, ಮಿಮಿಕ್ರಿ ಕಲಾವಿದ ನರಸಿಂಹ ಜೋಶಿ, ಪತ್ರಕರ್ತ ರಾಮಮೂರ್ತಿ ನವಲಿ, ಪ್ರತಿಷ್ಠಾನದ ಸಂಚಾಲಕ ಮಂಜುನಾಥ ಗುಡ್ಲಾನೂರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net