ಬೋಚನಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟಕ್ಕೆ ಬಿಇಒ ಶೇಖರ ಹೊರಪೇಟೆ ಚಾಲನೆ ನೀಡಿದರು. ಅಕ್ಷರ ದಾಸೋಹ ಸಹ ನಿರ್ದೇಶಕ ಎಸ್.ಬಿ.ಕುರಿ, ಇಸಿಒ ಮಹಾದೇವಪ್ಪ, ಜಿಲ್ಲಾ ಶಿಸಂ ಕಾರ್ಯದರ್ಶಿ ಹನುಮಂತಪ್ಪ ಕುರಿ, ತಾಲೂಕು ಸಂಘದ ನಿರ್ದೇಶಕ ರಮೇಶ, ಗುರುಸ್ವಾಮಿ, ಮಲ್ಲಪ್ಪ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವಿರೂಪಾಕ್ಷಪ್ಪ ಬಾಗೋಡಿ, ತಾಲೂಕು ಅಧ್ಯಕ್ಷ ಅಶೋಕ ಅಲ್ಲೀಪುರ ಇತರರಿದ್ದರು.
ಅಳವಂಡಿ: ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸುತ್ತವೆ ಎಂದು ಬಿಇಒ ಶೇಖರ ಹೊರಪೇಟಿ ತಿಳಿಸಿದರು. ಬೋಚನಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟಕ್ಕೆ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಸದೃಢತೆ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದರು. ಕ್ಷೇತ್ರ ಸಮನ್ವಯ ಅಧಿಕಾರಿ ಮೆಹಬೂಬ್ ಹುಸೇನ್ ಮಾತನಾಡಿ, ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಕ್ರೀಡೆಗಳ ಮಹತ್ವ ಪ್ರಮುಖವಾಗಿದೆ ಎಂದರು.
ಸಿ ಆರ್‌ಪಿ ವಿಜಯಕುಮಾರ, ಎಸ್‌ಡಿಎಂಸಿ ಅಧ್ಯಕ್ಷ ಯಂಕಪ್ಪ ಹಟ್ಟಿ, ಮುಖ್ಯ ಶಿಕ್ಷಕರಾದ ದೇವಪ್ಪ, ಯಲ್ಲಪ್ಪ ಬಂಡಿ, ರುದ್ರಪ್ಪ ಇತರರಿದ್ದರು.