ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನವನ್ನು ವಿಶ್ವ ಮಾನವ ದಿನವಾಗಿ ಆಚರಿಸಲಾಗುವುದು. ಕುವೆಂಪು ತಮ್ಮ ಸಾಹಿತ್ಯದ ಮೂಲಕ ಕನ್ನಡ ನಾಡಿನ ಕಂಪನ್ನು ವಿಶ್ವದೆಲ್ಲೆಡೆ ಪಸರಿಸಿದರು. ಕೊಪ್ಪಳದ ಜಿಲ್ಲಾಡಳಿತ ಭವನದಲ್ಲಿ ಡಿ.29ರಂದು ಬೆಳಗ್ಗೆ 10.30 ಗಂಟೆಗೆ ಕಾರ್ಯಕ್ರಮ ಇರಲಿದೆ. ಪದವಿ ವಿದ್ಯಾರ್ಥಿಗಳು ಭಾಗಿಯಾಗುವಂತೆ ಸಂಬಂಧಿಸಿದ ಅಧಿಕಾರಿಗಳು ನೋಡಿಕೊಳ್ಳಿ. ಅರ್ಥಪೂರ್ಣ ಆಚರಣೆಗೆ ಬೇಕಾದ ಸಿದ್ಧತೆ ಮಾಡಿಕೊಳ್ಳಿ. ಕುವೆಂಪು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಕೆ, ವಿಶೇಷ ಉಪನ್ಯಾಸ, ಕುವೆಂಪು ಗೀತ ಗಾಯನ ಆಯೋಜಿಸಲಾಗುವುದು. ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಸಾಹಿತಿಗಳು, ಕನ್ನಡಾಭಿಮಾನಿಗಳು ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.