ಹಿಟ್ನಾಳ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಆರ್.ವಿ. ಚಾಲೆಂಜರ್ಸ್ ತಂಡಕ್ಕೆ ಬಹುಮಾನ ವಿತರಿಸಲಾಯಿತು. ಪ್ರಮುಖರಾದ ಬಸವರಾಜ್, ರಾಜೇಶ್ ಬಂಡಿಹಾಳ, ಮಂಜುನಾಥ ಇಜರಾದರ್, ಮಂಜುನಾಥ ಸಿಂಧೋಗಿ, ಯಲ್ಲಪ್ಪ ಬಿಲಂಕರ್ ಇತರರಿದ್ದರು.
ಮುನಿರಾಬಾದ್: ಯುವಕರು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಮಾನಸಿಕ ಹಾಗೂ ದೈಹಿಕ ಸದೃಢತೆ ಹೊಂದಬೇಕು ಎಂದು ಗ್ರಾಪಂ ಮಾಜಿ ಸದಸ್ಯ ರಾಜಣ್ಣ ಬಂಡಿಹಾಳ ಹೇಳಿದರು.
ಸಮೀಪದ ಹಿಟ್ನಾಳ ಗ್ರಾಮದಲ್ಲಿ ಸೋಮವಾರ ಆಯೋಜಿಸಿದ್ದ ಹಿಟ್ನಾಳ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಯುವಪೀಳಿಗೆ ದುಶ್ಚಟಕ್ಕೆ ದಾಸರಾಗುತ್ತಿರುವುದು ಆತಂಕಕಾರಿ ವಿಷಯ. ಕೇವಲ ಕ್ರಿಕೆಟ್‌ಗೆ ಸೀಮಿತವಾಗದೇ ಕಬಡ್ಡಿ, ವಾಲಿಬಾಲ್, ಖೋ-ಖೋ, ಶಟಲ್ ಬ್ಯಾಡ್ಮಿಂಟನ್ ಹಾಗೂ ಗ್ರಾಮೀಣ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು. ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಶಿಸ್ತು ಮತ್ತು ಏಕಾಗ್ರತೆ ಬೆಳೆಯುತ್ತದೆ ಎಂದರು.