ಸರ್ಕಾರದ ಯೋಜನೆ ಸದುಪಯೋಗ ಪಡಿಸಿಕೊಳ್ಳಲಿ

ಗಂಗಾವತಿ ತಾಪಂ ಮಂಥನ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಮತ್ತು ಎನ್‌ಆರ್‌ಎಲ್‌ಎಂ ಸಂಜೀವಿನಿ ಯೋಜನೆಯಡಿ ಹಮ್ಮಿಕೊಂಡ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ತಾಪಂ ಇಒ ರಾಮರೆಡ್ಡಿ ಪಾಟೀಲ್ ಉದ್ಘಾಟಿಸಿದರು. ಸಮಿತಿ ಜಿಲ್ಲಾ ಉಪಾಧ್ಯಕ್ಷ ಎಸ್.ಬಿ.ಖಾದ್ರಿ, ತಾಲೂಕಾಧ್ಯಕ್ಷ ಡಾ.ಕೆ.ವಿ.ಬಾಬು ಇತರರಿದ್ದರು.
ಗಂಗಾವತಿ ತಾಪಂ ಮಂಥನ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಮತ್ತು ಎನ್‌ಆರ್‌ಎಲ್‌ಎಂ ಸಂಜೀವಿನಿ ಯೋಜನೆಯಡಿ ಹಮ್ಮಿಕೊಂಡ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ತಾಪಂ ಇಒ ರಾಮರೆಡ್ಡಿ ಪಾಟೀಲ್ ಉದ್ಘಾಟಿಸಿದರು. ಸಮಿತಿ ಜಿಲ್ಲಾ ಉಪಾಧ್ಯಕ್ಷ ಎಸ್.ಬಿ.ಖಾದ್ರಿ, ತಾಲೂಕಾಧ್ಯಕ್ಷ ಡಾ.ಕೆ.ವಿ.ಬಾಬು ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ತಾಪಂ ಇಒ ರಾಮರೆಡ್ಡಿ ಪಾಟೀಲ್ ಹೇಳಿಕೆ
  • ಗಂಗಾವತಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಗಂಗಾವತಿ: ಮಹಿಳೆಯರು ಶಿಕ್ಷಣದತ್ತ ಹೆಚ್ಚು ಕೇಂದ್ರೀಕರಿಸಬೇಕಿದ್ದು, ಸರ್ಕಾರದ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕೆಂದು ತಾಪಂ ಇಒ ರಾಮರೆಡ್ಡಿ ಪಾಟೀಲ್ ಹೇಳಿದರು.
ನಗರದ ತಾಪಂ ಮಂಥನ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಮತ್ತು ಎನ್‌ಆರ್‌ಎಲ್‌ಎಂ ಸಂಜೀವಿನಿ ಯೋಜನೆಯಡಿ ಭಾನುವಾರ ಹಮ್ಮಿಕೊಂಡ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದರು. ಮಹಿಳಾ ಸಬಲೀಕರಣಕ್ಕೆ ಪೂರಕವಾದ ಹಲವು ಯೋಜನೆಗಳಿದ್ದು, ಸ್ವಾವಲಂಬಿಗಳಾಗಬೇಕಿದೆ. ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಉತ್ತಮ ಸಾಧನೆ ಮಾಡಬೇಕಿದೆ ಎಂದರು.
ಎಸ್‌ಕೆಎನ್‌ಜಿ ಸರ್ಕಾರಿ ಪದವಿ ಕಾಲೇಜು ಪ್ರಾಧ್ಯಾಪಕಿ ಡಾ.ಮುಮ್ತಾಜ್‌ಬೇಗಂ ಮಾತನಾಡಿ, ಪ್ರತಿಯೊಬ್ಬ ಮಹಿಳೆಯೂ ಪ್ರಜ್ಞಾವಂತರಾಗಿ ಕಾನೂನಿನ ತಿಳಿವಳಿಕೆ ಮತ್ತು ಅರಿವು ಹೊಂದಿದರೆ ಮಹಿಳಾ ಸಬಲೀಕರಣಕ್ಕೆ ನಾಂದಿಯಾಗಬಲ್ಲಳು. ಸಾಮಾಜಿಕ, ರಾಜಕೀಯ, ಧಾರ್ಮಿಕ ಹಾಗೂ ಕಾನೂನಿನ ಪ್ರಜ್ಞೆ ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ಎಸ್.ಬಿ.ಖಾದ್ರಿ, ತಾಲೂಕು ಅಧ್ಯಕ್ಷ ಡಾ.ಕೆ.ವಿ.ಬಾಬು ಮಾತನಾಡಿದರು. ಮಹಿಳೆಯರಿಂದ ಕೋಲಾಟ, ಭಕ್ತಿಗೀತೆಗಳ ಗಾಯನ ಸೇರಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ಸಮಿತಿ ಜಿಲ್ಲಾ ಸದಸ್ಯ ಆನಂದ ಹಾಸಲ್ಕರ್, ತಾಲೂಕು ಸಮಿತಿ ಸದಸ್ಯರಾದ ಗಡ್ಡಿ ನಾಗಮ್ಮ, ಮುಸ್ತಫಾ ದಾವಲ್ ಸಾಬ್, ಮಂಜುನಾಥ, ಪರಶುರಾಮಕಿರಿಕಿರಿ, ಸಬ್ಜಾವಲಿ, ಸಿಡಿಪಿಒ ಮೇಲ್ವಿಚಾರಕಿ ವಿದ್ಯಾವತಿ, ವಿಷಯ ನಿರ್ವಾಹಕ ರವೀಂದ್ರ ಕುಲಕರ್ಣಿ, ಒಕ್ಕೂಟದ ಅಧ್ಯಕ್ಷೆ ರಮಜಾನಬೀ, ಎನ್‌ಆರ್‌ಎಲ್‌ಎಂ ವಿಭಾಗದ ಸಂಯೋಜಕರಾದ ಮಲ್ಲಿಕಾರ್ಜುನ, ಮದ್ದಾನೇಶ, ಪಶು, ಕಷಿ ಸಖಿ ಸೇರಿ ಒಕ್ಕೂಟ ಮತ್ತು ಸ್ವಸಹಾಯ ಸಂಘದ ಪದಾಧಿಕಾರಿಗಳಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net