ಮನುಕುಲದ ಉದ್ಧಾರಕ್ಕೆ ದಾರಿ ದೀಪ

ಕುಕನೂರು ಹಡಪದ ಅಪ್ಪಣ್ಣನವರ ಸಮುದಾಯ ಭವನದಲ್ಲಿ ಜಯಂತಿ ಕಾರ್ಯಕ್ರಮವನ್ನು ತಹಸೀಲ್ದಾರ್ ಬಸವರಾಜ ಬೆಣ್ಣೆಶಿರೂರು ಉದ್ಘಾಟಿಸಿದರು. ಪ್ರಮುಖರಾದ ಈರಣ್ಣ ಯಲಬುರ್ಗಿ, ಶರಣಪ್ಪ ಹಡಪದ, ಸೋಮಣ್ಣ ಹಡಪದ, ಪರಶುರಾಮ ಹಡಪದ, ಮಲ್ಲಪ್ಪ ಚಿಕ್ಕೇನಕೊಪ್ಪ, ಕಳಕಪ್ಪ ಹಡಪದ, ಶೇಖಪ್ಪ ದ್ಯಾಂಪೂರ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಜಾತಿ ವ್ಯವಸ್ಥೆ
  • ಕಂದಾಚಾರ
  • ಮೂಢನಂಬಿಕೆ
ಕುಕನೂರು: ಬಸವಣ್ಣನವರ ಅನುಭವ ಮಂಟಪದಲ್ಲಿ ಕಾಯಕ ನಿಷ್ಠೆಯನ್ನು ಶರಣ ಹಡಪದ ಅಪ್ಪಣ್ಣನವರು ಹೊಂದಿದ್ದರು ಎಂದು ತಹಸೀಲ್ದಾರ್ ಬಸವರಾಜ ಬೆಣ್ಣೆಶಿರೂರು ಹೇಳಿದರು.
ಹಡಪದ ಅಪ್ಪಣ್ಣನವರ ಸಮುದಾಯ ಭವನದಲ್ಲಿ ಹಡಪದ ಅಪ್ಪಣ್ಣನವರ ಜಯಂತಿ ನಿಮಿತ್ತ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
ಅಪ್ಪಣ್ಣನವರು ತಮ್ಮ ವಚನಗಳ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ಶರಣರಾಗಿದ್ದಾರೆ. ಅವರ ವಚನಗಳು ಹಾಗೂ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿ ದೀಪವಾಗಿವೆ. ಸಾಮಾಜಿಕ ಅಸಮಾನತೆ ಜಾತಿ ವ್ಯವಸ್ಥೆ, ಕಂದಾಚಾರ, ಮೂಢನಂಬಿಕೆ ವಿರುದ್ಧ ಹೋರಾಡಿ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ತಮ್ಮ ವಚನಗಳ ಮೂಲಕ ಶ್ರಮಿಸಿರುವುದು ಅವಿಸ್ಮರಣೀಯ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net