ಸಮಾಜ ಕಲ್ಯಾಣ ಇಲಾಖೆ ಉನ್ನತ ಅಧಿಕಾರಿಯಾಗಿದ್ದ ಕಲ್ಲೇಶ ಎಸ್ಟಿ ನಿಗಮ ಅವ್ಯವಹಾರ ಪ್ರಕರಣದಲ್ಲಿ ಸುದ್ದಿಯಾಗಿದ್ದರು. ಇಡಿ ತನಿಖೆಯನ್ನೂ ಎದುರಿಸಿದ್ದರು. ಬಳಿಕ ಕಿಮ್ಸ್ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಹಲವು ವರ್ಷಗಳ ಹಿಂದೆ ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಜಿಪಂ ಕಚೇರಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಭಾಗ್ಯನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ನವಚೇತನಾ ಪಿಯು ಕಾಲೇಜು ಒಂದಾಗಿದೆ. ಕಲ್ಲೇಶ ಒಡೆತನದ ಸಂಸ್ಥೆಯಾಗಿದ್ದು, ಅವರ ಪತ್ನಿ ನಡೆಸಿಕೊಂಡು ಹೋಗುತ್ತಿದ್ದಾರೆ. ಇತ್ತೀಚೆಗೆ ಪದವಿ ಕಾಲೇಜು ಆರಂಭಿಸಿದ್ದು ಜಿಲ್ಲೆಯಲ್ಲಿಯೇ ಅಧಿಕಾರಿಯಾಗಿ ಮುಂದುವರೆದಿದ್ದಾರೆ.