ಹಂದ್ರಾಳ ಗ್ರಾಮದ ಸಹಿಪ್ರಾ ಶಾಲೆಯಲ್ಲಿ ಜಿಲ್ಲಾ ಆಡಳಿತ, ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣ ಘಟಕ, ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ರಾಷ್ಟ್ರೀಯ ಹಾವು ಕಡಿತ ತಡೆಗಟ್ಟುವಿಕೆ ಹಾಗೂ ನಿಯಂತ್ರಣ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾತ್ರಿ ವೇಳೆ ಹೊರಗೆ ತೆರಳುವಾಗ ಟಾರ್ಚ್ ಬಳಸುವುದು, ಮನೆಯ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಕಸ, ಕಲ್ಲು, ಪೊದೆಗಳನ್ನು ತೆರವುಗೊಳಿಸಿ ಹಾವು ಕಡಿತದ ಅಪಾಯವನ್ನು ಕಡಿಮೆ ಮಾಡಬಹುದು.