ಆಸ್ಪತ್ರೆಯಲ್ಲಿ ಸ್ವಚ್ಚತೆ ಕಾಪಾಡಿ

ಕೊಪ್ಪಳದ ಜಿಲ್ಲಾಸ್ಪತ್ರೆಗೆ ಡಿಸಿ ಡಾ.ಸುರೇಶ ಬಿ.ಇಟ್ನಾಳ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ವೈದ್ಯಕಿಯ ಅಧೀಕ್ಷಕ ಡಾ.ಮಂಜುನಾಥ ಸಾಲ್ಮನಿ, ವೈದ್ಯರಿದ್ದರು.
ಕೊಪ್ಪಳದ ಜಿಲ್ಲಾಸ್ಪತ್ರೆಗೆ ಡಿಸಿ ಡಾ.ಸುರೇಶ ಬಿ.ಇಟ್ನಾಳ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ವೈದ್ಯಕಿಯ ಅಧೀಕ್ಷಕ ಡಾ.ಮಂಜುನಾಥ ಸಾಲ್ಮನಿ, ವೈದ್ಯರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಡಿಸಿ ಸುರೇಶ ಇಟ್ನಾಳ ಸೂಚನೆ
ಕೊಪ್ಪಳ: ಜಿಲ್ಲಾ ಆಸ್ಪತ್ರೆಯಲ್ಲಿ ದಿನವಿಡೀ ಸಾವಿರಾರು ಸಂಖ್ಯೆಯಲ್ಲಿ ಜನ ಓಡಾಡುತ್ತಾರೆ. ರೋಗಾಣುಗಳ ಹರಡುವ ಸಾಧ್ಯತೆ ಇರುತ್ತದೆ. ಹಾಗಾಗಿ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ.ಇಟ್ನಾಳ ಸೂಚಿಸಿದರು.
ಜಿಲ್ಲಾ ಆಸ್ಪತ್ರೆಗೆ ಸೋಮವಾರ ದಿಢೀರ್​ ಭೇಟಿ ನೀಡಿ ಆಸ್ಪತ್ರೆ ಸ್ಥಿತಿಗತಿ ಜತೆಗೆ ವೈದ್ಯರ ಮತ್ತು ಸಿಬ್ಬಂದಿಗಳ ಹಾಜರಾತಿ ಪರಿಶೀಲಿಸಿ, ಮಾತನಾಡಿದರು.
ಜನ ಸರತಿ ಸಾಲಿನಲ್ಲಿ ನಿಂತು ಚೀಟಿ ಪಡೆಯುವಾಗ ತೊಂದರೆಯಾಗದಂತೆ ನೋಡಿಕೊಳ್ಳಿ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಕೌಂಟರ್​ಗಳನ್ನು ತೆಗೆದು, ಹೆಚ್ಚು ಸಿಬ್ಬಂದಿಗಳನ್ನು ನಿಯೋಜಿಸಿ. ಬೇಗನೆ ಚೀಟಿ ದೊರೆಯುವಂತೆ ಕ್ರಮ ಕೈಗೊಳ್ಳಿ ಎಂದು ಸಂಬಧಿಸಿದ ಅಧಿಕಾರಿಗಳಿಗೆ ಹೇಳಿದರು. ಸೈಕಿಯಾಟ್ರಿ ವಿಭಾಗದ ರೋಗಿಗಳ ಉಪಚಾರಕ್ಕೆ ಪ್ರತ್ಯೇಕ ವ್ಯವಸ್ಥೆ ಇದೆಯೆ. ಡ್ರಗ್​ ಅಡಿಕ್ಟರ್​ ಗಳ ದುಶ್ಚಟ ಬಿಡಿಸಲು ಸೂಕ್ತ ಕೌನ್ಸಿಲಿಂಗ್​ ಮಾಡಿ. ಜನ ದುಶ್ಚಟಗಳಿಗೆ ಬಲಿಯಾಗದಂತೆ ಹೆಚ್ಚಿನ ಜಾಗೃತಿ ಮೂಡಿಸಲು ಆಸ್ಪತ್ರೆ ವೈದ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದರು.
ವೈದ್ಯಕಿಯ ಅಧೀಕ್ಷಕ ಡಾ.ಮಂಜುನಾಥ ಸಾಲ್ಮನಿ, ವೈದ್ಯರು ಮತ್ತು ಸಿಬ್ಬಂದಿಗಳು ಸೇರಿದಂತೆ ಇತರೆ ಹಲವಾರು ಜನರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net