ಹುಲಿಗಿ ಜಾತ್ರೆಗೆ ಅಚ್ಚುಕಟ್ಟು ಸಿದ್ಧತೆ ಮಾಡಿ

ಕೊಪ್ಪಳದಲ್ಲಿ ಸೋಮವಾರ ನಡೆದ ಶ್ರೀ ಹುಲಿಗೆಮ್ಮ ದೇವಿ ಜಾತ್ರೆಯ ಪೂರ್ವ ಭಾವಿ ಸಭೆಯಲ್ಲಿ ಡಿಸಿ. ಡಾ. ಸುರೇಶ ಬಿ. ಇಟ್ನಾಳ ಮಾತನಾಡಿದರು. ಎಡಿಸಿ ಸಿದ್ರಾಮೇಶ್ವರ, ಎಎಸ್ಪಿ ಆರ್​. ಹೇಮಂತ್​ ಕುಮಾರ್​ ಇದ್ದರು.
ಕೊಪ್ಪಳದಲ್ಲಿ ಸೋಮವಾರ ನಡೆದ ಶ್ರೀ ಹುಲಿಗೆಮ್ಮ ದೇವಿ ಜಾತ್ರೆಯ ಪೂರ್ವ ಭಾವಿ ಸಭೆಯಲ್ಲಿ ಡಿಸಿ. ಡಾ. ಸುರೇಶ ಬಿ. ಇಟ್ನಾಳ ಮಾತನಾಡಿದರು. ಎಡಿಸಿ ಸಿದ್ರಾಮೇಶ್ವರ, ಎಎಸ್ಪಿ ಆರ್​. ಹೇಮಂತ್​ ಕುಮಾರ್​ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಡಾ.ಸುರೇಶ ಬಿ.ಇಟ್ನಾಳ ಸೂಚನೆ
  • ಹುಲಿಗಿ ಜಾತ್ರೆ ಪೂರ್ವಭಾವಿ ಸಭೆ
ಕೊಪ್ಪಳ : ಜಿಲ್ಲೆಯ ಶ್ರೀ ಕ್ಷೇತ್ರ ಹುಲಿಗಿಯಲ್ಲಿ ಮೇ 10ರಿಂದ 14ರವರೆಗೆ ನಡೆಯಲಿರುವ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಲಕ್ಷಾಂತರ ಭಕ್ತರು ಭಾಗವಹಿಸುವ ಹಿನ್ನೆಲೆಯಲ್ಲಿ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಅಚ್ಚುಕಟ್ಟಾಗಿ ಕಲ್ಪಿಸುವಂತೆ ಜಿಲ್ಲಾಧಿಕಾರಿ ಡಾ. ಸುರೇಶ್​ ಬಿ. ಇಟ್ನಾಳ ಅಧಿಕಾರಿಗಳಿಗೆ ಸೂಚಿಸಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಾತ್ರೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಹುಲಿಗಿಯಲ್ಲಿ 5 ದಿನಗಳ ಕಾಲ ನಡೆಯುವ ಜಾತ್ರೆಗೆ ಅಗತ್ಯ ಸಿದ್ಧತೆ ಮಾಡಿ. ಪ್ರಮುಖವಾಗಿ ಮೇ 11ರಂದು ನಡೆಯುವ ಮಹಾರಥೋತ್ಸವದ ವೇಳೆ ಹೆಚ್ಚಿನ ಜನಸಂದಣಿ ನಿರೀಕ್ಷೆಯಾಗಿರುವುದರಿಂದ ಸ್ವಚ್ಛತೆ, ಸುರಕ್ಷತೆ ಮತ್ತು ಕುಡಿಯುವ ನೀರಿನ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಗ್ರಾಮದಲ್ಲಿ ರಸ್ತೆ, ದೇವಾಲಯದ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛಗೊಳಿಸಿ, ಮೊಬೈಲ್​ ಶೌಚಾಲಯ, ವಿಶ್ರಾಂತಿ ಗೃಹ ಹಾಗೂ ತಂಗುದಾಣ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.
ವಿದ್ಯುತ್​ ದೀಪಾಲಂಕಾರ, ಮಾರ್ಗ ಸೂಚಕ ಫಲಕಗಳ ಅಳವಡಿಕೆ, ವಾಹನ ನಿಲುಗಡೆ ವ್ಯವಸ್ಥೆ ಹಾಗೂ ಕಟ್ಟುನಿಟ್ಟಿನ ಪೊಲೀಸ್​ ಬಂದೋಬಸ್ತ್​ ಒದಗಿಸಿ. ಜಾತ್ರೆ ಅವಧಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ, ಪ್ರಾಣಿ ಬಲಿ ಸಂಪೂರ್ಣ ನಿಷೇಧ ಜಾರಿಗೊಳಿಸಬೇಕು ಎಂದರು. ದೇವಸ್ಥಾನದ ಆವರಣ ಮತ್ತು ಗ್ರಾಮದ ರಸ್ತೆಗಳಲ್ಲಿನ ಒತ್ತುವರಿ ಕಟ್ಟಡ, ವ್ಯಾಪಾರ ಮಳಿಗೆಗಳನ್ನು ಯಾವುದೇ ಹಿಂಜರಿಕೆ ಇಲ್ಲದೆ ನಿಯಮಾನುಸಾರ ತೆರವುಗೊಳಿಸಬೇಕು ಎಂದು ಇಲಾಖಾ ಅಧಿಕಾರಿಗಳಿಗೆ ಅವರು ತಿಳಿಸಿದರು.
ಆರೋಗ್ಯ ಇಲಾಖೆಯಿಂದ ತಾತ್ಕಾಲಿಕ ಆರೋಗ್ಯ ಕೇಂದ್ರ, ಅಂಬುಲೆನ್ಸ್​, ತಜ್ಞ ವೈದ್ಯರ ವ್ಯವಸ್ಥೆ ಮಾಡಬೇಕು. ಬೇಸಿಗೆಯ ಹಿನ್ನೆಲೆಯಲ್ಲಿ ಶುದ್ಧ ಕುಡಿಯುವ ನೀರು, ಒಆರ್​ಎಸ್​ ಪೂರೈಕೆ ಹಾಗೂ ನೀರಿನ ಗುಣಮಟ್ಟ ಪರಿಶೀಲನೆ ಕಡ್ಡಾಯಗೊಳಿಸಿ. ಸ್ಥಳದಲ್ಲಿ ಅಗ್ನಿಶಾಮಕ ವಾಹನ ಸಿದ್ಧವಾಗಿರಬೇಕು. ನದಿ ತೀರದಲ್ಲಿ ಭಕ್ತರ ಸುರಕ್ಷತೆಗೆ ಕ್ರಮ ಕೈಗೊಂಡು ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು. ದೇವಸ್ಥಾನದ ಪ್ರಸಾದದ ಗುಣಮಟ್ಟ ಪರೀಕ್ಷೆ ನಂತರ ಮಾತ್ರ ವಿತರಿಸಬೇಕು ಎಂದರು.
ಎಡಿಸಿ ಸಿದ್ರಾಮೇಶ್ವರ, ಎಎಸ್ಪಿ ಆರ್​. ಹೇಮಂತ್​ ಕುಮಾರ್​, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ, ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭೀವೃದೀ ಪ್ರಾಧಿಕಾರದ ಕಾರ್ಯದರ್ಶಿ ಎಂ.ಎಚ್​ ಪ್ರಕಾಶ್​ರಾವ್​, ಡಿಎಚ್​ಒ ಡಾ.ಲಿಂಗರಾಜು ಟಿ., ಕೊಪ್ಪಳ ತಸೀಲ್ದಾರ ಬಸವರಾಜ ತೆನ್ನಳ್ಳಿ, ತಾ.ಪಂ. ಇಒ ದುಂಡಪ್ಪ ತುರಾದಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net