ಶ್ರೀ ಹೇಮರೆಡ್ಡಿ ಮಲ್ಲಮ್ಮ ಜಯಂತಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ

ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಸಂಬಂಧ ಶುಕ್ರವಾರ ಕೊಪ್ಪಳದಲ್ಲಿ ಎಡಿಸಿ ಸಿದ್ರಾಮೇಶ್ವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣ ಕುಮಾರ್​, ಸಮಾಜದ ಮುಖಂಡರಾದ ವಿರುಪಣ್ಣ ನವೋದಯ, ಹನಮರಡ್ಡಿ ಹಂಗನಕಟ್ಟಿ, ಕಾಶೀನಾಥರೆಡ್ಡಿ, ಹನಮರೆಡ್ಡಿ ಇದ್ದರು.
ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಸಂಬಂಧ ಶುಕ್ರವಾರ ಕೊಪ್ಪಳದಲ್ಲಿ ಎಡಿಸಿ ಸಿದ್ರಾಮೇಶ್ವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣ ಕುಮಾರ್​, ಸಮಾಜದ ಮುಖಂಡರಾದ ವಿರುಪಣ್ಣ ನವೋದಯ, ಹನಮರಡ್ಡಿ ಹಂಗನಕಟ್ಟಿ, ಕಾಶೀನಾಥರೆಡ್ಡಿ, ಹನಮರೆಡ್ಡಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಿದ್ರಾಮೇಶ್ವರ ಹೇಳಿಕೆ
  • ಪೂರ್ವಭಾವಿ ಸಭೆ
ಕೊಪ್ಪಳ : ಶ್ರೀ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಅದ್ದೂರಿಯಾಗಿ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ತಿಳಿಸಿದರು.
ಶ್ರೀ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಕುರಿತು ಜಿಲ್ಲಾಡಳಿತ ಭವನದ ಕೆಸ್ವಾನ್​-2ರ ಸಭಾಂಗಣದಲ್ಲಿ ಶುಕ್ರವಾರ ಕರೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಜಯಂತಿಯನ್ನು ಮೇ 10ರಂದು ಬೆಳಗ್ಗೆ 10.30ಕ್ಕೆ ನಗರದ ಕಿನ್ನಾಳ ರಸ್ತೆಯ ಶ್ರೀ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಆಚರಣೆ ಮಾಡಲಾಗುವುದು. ಈ ಕಾರ್ಯಕ್ರಮದಲ್ಲಿ ಪೂಜೆ, ಶ್ರೀ ಹೇಮರೆಡ್ಡಿ ಮಲ್ಲಮ್ಮ ರವರ ಕುರಿತು ವಿಶೇಫಿ ಉಪನ್ಯಾಸ ಹಾಗೂ ಇತರೆ ಕಾರ್ಯಕ್ರಮಗಳು ನಡೆಯಲಿದೆ. ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಜಯಂತಿ ಆಚರಣೆಗೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಬೇಕು. ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಸಮಾಜದ ಬಂಧುಗಳ ಸಹಕಾರವೂ ಅಗತ್ಯವಿದ್ದು, ಜಿಲ್ಲಾಡಳಿತದೊಂದಿಗೆ ಸಹಕರಿಸಿ ವ್ಯವಸ್ಥಿತ ಜಯಂತಿ ಆಚರಣೆಗೆ ಎಲ್ಲಾ ಸಮಾಜದವರು ಅನುಕೂಲ ಮಾಡಿಕೊಡಬೇಕು ಎಂದು ಹೇಳಿದರು.
ಜಯಂತಿ ದಿನದಂದು ಎಲ್ಲಾ ಸರ್ಕಾರಿ ಕಛೇರಿಗಳು, ಗ್ರಾಮ ಪಂಚಾಯತಗಳಲ್ಲಿ, ಶಾಲಾ-ಕಾಲೇಜು ಹಾಗೂ ವಸತಿ ನಿಲಯಗಳಲ್ಲಿ ಶ್ರೀ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಕಡ್ಡಾಯವಾಗಿ ಆಚರಣೆ ಮಾಡಬೇಕು ಎಂದು ತಿಳಿಸಿದರು.
ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣ ಕುಮಾರ್​, ಸಮಾಜದ ಮುಖಂಡರಾದ ವಿರುಪಣ್ಣ ನವೋದಯ, ಹನಮರಡ್ಡಿ ಹಂಗನಕಟ್ಟಿ, ಕಾಶೀನಾಥರೆಡ್ಡಿ, ಹನಮರೆಡ್ಡಿ, ಹೇಮರೆಡ್ಡಿ, ಸಂಜೀವರೆಡ್ಡಿ ಛಪ್ಪರದ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net