ಕೊಪ್ಪಳ ಜಿಲ್ಲಾಡಳಿತ ಭವನದ ಕೇಸ್ವಾನ್ ಸಭಾಂಗಣದಲ್ಲಿ ಬಸವ ಜಯಂತಿ ಹಾಗೂ ಶಂಕರಾಚಾರ್ಯರ ಜಯಂತಿ ನಿಮಿತ್ತ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಎಡಿಸಿ ಸಿದ್ರಾಮೇಶ್ವರ ವಾತನಾಡಿದರು. ಆಹಾರ ಇಲಾಖೆ ಡಿಡಿ ವಿಶ್ವನಾಥಗೌಡ ಎಂ.ಎನ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಡಿ ಕರ್ಣಕುವಾರ, ಡಿಸಿಎಫ್ ಕಚೇರಿ ಮಲ್ಲಿಕಾರ್ಜುನ ಗೌಡರ್ ಇತರರಿದ್ದರು.
ಕೊಪ್ಪಳ: ಜಿಲ್ಲಾ ಕೇಂದ್ರದಲ್ಲಿ ಏ.20ರಂದು ಬಸವ ಜಯಂತಿ ಹಾಗೂ 21ಕ್ಕೆ ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ಅದ್ದೂರಿಯಿಂದ ಆಚರಿಸಲಾಗುತ್ತಿದ್ದು, ಅಗತ್ಯ ಸಿದ್ಧತೆಗಳನ್ನು ವಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಸೂಚಿಸಿದರು.
ನಗರದ ಜಿಲ್ಲಾಡಳಿತ ಭವನದ ಕೇಸ್ವಾನ್ ಸಭಾಂಗಣದಲ್ಲಿ ಬುಧವಾರ ಮಹನೀಯರ ಜಯಂತಿ ಅಂಗವಾಗಿ ಕರೆದ ಪೂರ್ವಭಾವಿ ಸಭೆಯಲ್ಲಿ ವಾತನಾಡಿದರು. ಏ.20ರ ಬೆಳಗ್ಗೆ 8ಗಂಟೆಗೆ ಅಂಬಿಗರ ಚೌಡಯ್ಯ ಉದ್ಯಾನದ ಬಸವೇಶ್ವರ ಪುತ್ಥಳಿಗೆ ಹಾಗೂ ಬೆಳಗ್ಗೆ 9ಗಂಟೆಗೆ ಗಂಜ್ ಸರ್ಕಲ್‌ನಲ್ಲಿರುವ ಬಸವೇಶ್ವರ ಮೂರ್ತಿಗೆ ವಾಲಾರ್ಪಣೆ ವಾಡಲಾಗುವುದು. ಸಂಜೆ 4 ಗಂಟೆಗೆ ಗಡಿಯಾರ ಕಂಬದ ಬಳಿ ಮಹೇಶ್ವರ ದೇವಸ್ಥಾನದಿಂದ ಗವಿಮಠದವರೆಗೆ ಬಸವೇಶ್ವರ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು. ಅಂದು ಸಂಜೆ 6ಕ್ಕೆ ಗವಿಮಠದ ತೇರು ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.
ಏ.21ರ ಸಂಜೆ 4 ಗಂಟೆಗೆ ಶ್ರೀ ಶಂಕರ ಸಾಂಸ್ಕೃತಿಕ ಭವನದಿಂದ ಶ್ರೀ ಶಂಕರಾಚಾರ್ಯರ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ಸಂಜೆ 6ಕ್ಕೆ ನಗರದ ಕೋಟೆ ಪ್ರದೇಶದಲ್ಲಿರುವ ಶ್ರೀ ಶಂಕರ ಸಾಂಸ್ಕೃತಿಕ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಎರಡೂ ಜಯಂತಿಗಳ ದಿನದಂದು ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಶುದ್ಧ ಕುಡಿವ ನೀರು ಹಾಗೂ ಅಗತ್ಯ ಸಿದ್ಧತೆಗಳನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಸವಾಜದ ಬಾಂಧವರ ಸಹಕಾರದೊಂದಿಗೆ ಅರ್ಥಪೂರ್ಣವಾಗಿ ಜಯಂತಿ ಆಚರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ., ಎಎಸ್‌ಐ ವೀರಭದ್ರಪ್ಪ, ಎರಡೂ ಸಮುದಾಯದ ಪ್ರಮುಖರಾದ ಬಸವರಾಜ ಬಳ್ಳೊಳ್ಳಿ, ಗವಿಸಿದ್ದಪ್ಪ, ಈಶ್ವರಪ್ಪ ತೋಟಪ್ಪ ದಿನ್ನಿ, ಡಿ.ವಿ.ಜೋಶಿ, ರಮೇಶ ಪದಕಿ, ಅಶೋಕ ಪದಕಿ, ರವಿ ಪುರೋಹಿತ, ಬಾಳಂಭಟ್ ಜೋಶಿ ಇದ್ದರು.