ಕಾಮಗಾರಿ ಗುಣಮಟ್ಟದಿಂದ ಕೂಡಿಲಿ

ಯಲಬುರ್ಗಾ ತೋಟಗಾರಿಕೆ ಕಚೇರಿಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಸುಧೀರ್ ಕೊರ್ಲಳ್ಳಿ ಭೂಮಿಪೂಜೆ ನೆರವೇರಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆರಿಬಸಪ್ಪ ನಿಡಗುಂದಿ, ಜಿಲ್ಲಾ ಗ್ಯಾರಂಟಿ ಸಮಿತಿ ಸದಸ್ಯ ಮಲ್ಲಿಕಾರ್ಜುನ ಜಕ್ಕಲಿ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ನಿಂಗನಗೌಡ ಪಾಟೀಲ್ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಗುಣಮಟ್ಟ

ಕಾಮಗಾರಿ ಗುಣಮಟ್ಟದಿಂದ ಕೂಡಿಲಿ

ಯಲಬುರ್ಗಾ: ಕ್ಷೇತ್ರದಲ್ಲಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಅಭಿವೃದ್ಧಿ ಕಾರ್ಯಕ್ಕೆ ವಿಶೇಷ ಆದ್ಯತೆ ನೀಡಿದ್ದಾರೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಸುಧೀರ್ ಕೊರ್ಲಳ್ಳಿ ಹೇಳಿದರು.
ಪಟ್ಟಣದ ತೋಟಗಾರಿಕೆ ಕಚೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಬುಧವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. 1.82 ಕೋಟಿ ರೂ. ವೆಚ್ಚದ ತೋಟಗಾರಿಕೆ ಇಲಾಖೆ ಕಟ್ಟಡ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು ಎಂದು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ಕೆಎಂಎಫ್ ನಿರ್ದೇಶಕ ಹಂಪಯ್ಯಸ್ವಾಮಿ ಹಿರೇಮಠ ಮಾತನಾಡಿ, ಶಾಸಕ ಬಸವರಾಜ ರಾಯರಡ್ಡಿ ಅವರು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಕಳೆದ ಎರಡೂವರೆ ವರ್ಷದಲ್ಲಿ ದೊಡ್ಡ ಮುಟ್ಟದ ಪ್ರಗತಿ ಕಾರ್ಯಗಳು ಕ್ಷೇತ್ರದಲ್ಲಿ ನಡೆಯುತ್ತಿವೆ ಎಂದರು. ಜಿಲ್ಲಾ ಗ್ಯಾರಂಟಿ ಸಮಿತಿ ಸದಸ್ಯ ಮಲ್ಲಿಕಾರ್ಜುನ ಜಕ್ಕಲಿ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ನಿಂಗನಗೌಡ ಪಾಟೀಲ್, ರೇವಣಪ್ಪ ಬಂಡ್ರಿ, ಮುತ್ತು ಪಟ್ಟೇದ, ಸಿಬ್ಬಂದಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net