ಅಪ್ರಾಪ್ತ ಹೆಣ್ಣುಮಕ್ಕಳ ನಾಪತ್ತೆ ಬಗ್ಗೆ ಜಾಗೃತಿ ಮೂಡಿಸಿ

ಕೊಪ್ಪಳದಲ್ಲಿ ಮಂಗಳವಾರ ಆಯೋಜಿಸಿದ್ದ ಕಾಣೆಯಾದ ಮಕ್ಕಳ ಪತ್ತೆಗಾಗಿ ರಚನೆಯಾದ ವಿಶೇಷ ಕಾರ್ಯಪಡೆಯ ಸಭೆಯಲ್ಲಿ ಎಸ್ಪಿ ಡಾ. ರಾಮ್​. ಎಲ್​. ಅರಸಿದ್ದಿ ಮಾತನಾಡಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ದರಗದ, ಎಎಸ್ಪಿ ಆರ್​. ಹೇಮಂತಕುಮಾರ, ಡಿವೈಎಸ್ಪಿ ಮುತ್ತಣ್ಣ ಸವರಗೋಳ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧು ಅಂಗಡಿ ಇದ್ದರು.
ಕೊಪ್ಪಳದಲ್ಲಿ ಮಂಗಳವಾರ ಆಯೋಜಿಸಿದ್ದ ಕಾಣೆಯಾದ ಮಕ್ಕಳ ಪತ್ತೆಗಾಗಿ ರಚನೆಯಾದ ವಿಶೇಷ ಕಾರ್ಯಪಡೆಯ ಸಭೆಯಲ್ಲಿ ಎಸ್ಪಿ ಡಾ. ರಾಮ್​. ಎಲ್​. ಅರಸಿದ್ದಿ ಮಾತನಾಡಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ದರಗದ, ಎಎಸ್ಪಿ ಆರ್​. ಹೇಮಂತಕುಮಾರ, ಡಿವೈಎಸ್ಪಿ ಮುತ್ತಣ್ಣ ಸವರಗೋಳ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧು ಅಂಗಡಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಎಸ್ಪಿ ಡಾ. ರಾಮ್​ ಎಲ್​. ಅರಸಿದ್ದಿ ಸೂಚನೆ
  • ಮಕ್ಕಳ ಪತ್ತೆಗಾಗಿ ರಚನೆಯಾದ ವಿಶೇಷ ಕಾರ್ಯಪಡೆ
ಕೊಪ್ಪಳ: ಜಿಲ್ಲೆಯಲ್ಲಿ ಅಪಹರಣಕ್ಕೊಳಗಾದ ಹಾಗೂ ಕಾಣೆಯಾದ ಮಕ್ಕಳ ಪ್ರಕರಣಗಳನ್ನು ವಿಶ್ಲೇಷಿಸಿದಾಗ ಹೆಚ್ಚಿನ ಪ್ರಮಾಣದಲ್ಲಿ ಅಪ್ರಾಪ್ತ ಹೆಣ್ಣುಮಕ್ಕಳೇ ಬಾಧಿತರಾಗಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಶಾಲಾ-&ಕಾಲೇಜುಗಳಲ್ಲಿ ಮಕ್ಕಳ ಹಕ್ಕುಗಳು ಹಾಗೂ ಕಾನೂನುಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಎಸ್ಪಿ ಡಾ.ರಾಮ್​ ಎಲ್​.ಅರಸಿದ್ದಿ ಹೇಳಿದರು.
ನಗರದ ಎಸ್ಪಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಕಾಣೆಯಾದ ಮಕ್ಕಳ ಪತ್ತೆಗಾಗಿ ರಚನೆಯಾದ ವಿಶೇಷ ಕಾರ್ಯಪಡೆಯ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ದಾಖಲಾಗಿರುವ ಬಹುತೇಕ ಅಪಹರಣ ಪ್ರಕರಣಗಳಲ್ಲಿ 16 ರಿಂದ 18 ವರ್ಷದೊಳಗಿನ ಹೆಣ್ಣುಮಕ್ಕಳೇ ಹೆಚ್ಚಿದ್ದಾರೆ. ಇವರೆಲ್ಲರೂ ಹೆಚ್ಚಾಗಿ ಪ್ರೀತಿ-&ಪ್ರೇಮದ ಹೆಸರಿನಲ್ಲಿ ಪಾಲಕರನ್ನು ಮತ್ತು ಮನೆಯನ್ನು ತೊರೆದು ಹೋದ ಪ್ರಕರಣಗಳಾಗಿವೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-&2012ರ ಅಡಿಯಲ್ಲಿ ಅಪ್ರಾಪ್ತ ಮಕ್ಕಳೊಂದಿಗಿನ ಸಮ್ಮತ ಲೈಂಗಿಕ ಚಟುವಟಿಕೆಯೂ ಅಪರಾಧವಾಗಿದೆ. ತಿಳಿಯದೇ ಮಾಡುವ ಇಂತಹ ತಪ್ಪುಗಳಿಂದ ಕಠಿಣ ಶಿಕ್ಷೆಯಾಗುವುದಲ್ಲದೆ, ಕುಟುಂಬಗಳು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಂಕಷ್ಟಕ್ಕೊಳಗಾಗುತ್ತಿವೆ. ಆದ್ದರಿಂದ ಪಾಲಕರು ಮಕ್ಕಳ ಪೋಷಣೆೆ ಮತ್ತು ರಕ್ಷಣೆಯ ಜವಾಬ್ದಾರಿಯನ್ನು ಅರಿತು ಅವರಿಗೆ ಸೂಕ್ತ ತಿಳುವಳಿಕೆ ನೀಡಬೇಕು ಎಂದರು.
ಸವೋರ್ಚ್ಚ ನ್ಯಾಯಾಲಯದ ಆದೇಶದಂತೆ ಮಕ್ಕಳ ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುತ್ತಿದೆ. ಶಾಲೆ, ಕಾಲೇಜು ಮತ್ತು ವಸತಿ ನಿಲಯಗಳಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ಎಸ್​. ದರಗದ, ಎಎಸ್ಪಿ ಆರ್​. ಹೇಮಂತಕುಮಾರ, ಡಿವೈಎಸ್ಪಿ ಮುತ್ತಣ್ಣ ಸವರಗೋಳ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧು ಅಂಗಡಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಪ್ರಕಾಶ ಕಡಗದ, ಬಾಲ ನ್ಯಾಯ ಮಂಡಳಿಯ ಸದಸ್ಯರಾದ ನೇತ್ರಾ ಪಾಟೀಲ್​, ಪ್ರತಿಭಾ ಕಾಶೀಮಠ ಹಾಗೂ ವಿಸ್ತಾರ ಮತ್ತು ಕಲ್ವಾರಿ ಚಾಪೆಲ್​ ಸಂಸ್ಥೆಗಳ ಅಧಿಕಾರಿಗಳಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net