ಸಚಿವ ಹರ್ಷಾ ಮಲ್ಹೋತ್ರಾ ಅಂಜನಾದ್ರಿಗೆ ಭೇಟಿ

ಗಂಗಾವತಿ ತಾಲೂಕಿನ ಹನುಮನಹಳ್ಳಿಯ ಐತಿಹಾಸಿಕ ಪ್ರಸಿದ್ಧ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ ಕೇಂದ್ರದ ರಸ್ತೆ ಸಾರಿಗೆ, ಹೆದ್ದಾರಿ ಮತ್ತು ಕಾರ್ಪೋರೇಟ್ ವ್ಯವಹಾರಗಳ ರಾಜ್ಯ ಸಚಿವ ಹರ್ಷಾ ಮಲ್ಹೋತ್ರಾ ಅವರನ್ನು ಸ್ಥಳೀಯ ಮುಖಂಡರು ಸನ್ಮಾನಿಸಿದರು. ಡಿವೈಎಸ್ಪಿ ಜೆ.ಎಸ್.ನ್ಯಾಮಗೌಡರ್, ಪ್ರಮುಖರಾದ ಸಂತೋಷ ಕೆಲೋಜಿ, ಎಚ್.ಎಂ.ಸಿದ್ರಾಮಯ್ಯಸ್ವಾಮಿ ಇತರರಿದ್ದರು.

Published on
ಗಂಗಾವತಿ: ತಾಲೂಕಿನ ಹನುಮನಹಳ್ಳಿಯ ಐತಿಹಾಸಿಕ ಪ್ರಸಿದ್ಧ ಅಂಜನಾದ್ರಿ ಬೆಟ್ಟಕ್ಕೆ ಕೇಂದ್ರ ರಸ್ತೆ ಸಾರಿಗೆ, ಹೆದ್ದಾರಿ ಮತ್ತು ಕಾರ್ಪೋರೇಟ್ ವ್ಯವಹಾರಗಳ ರಾಜ್ಯ ಸಚಿವ ಹರ್ಷಾ ಮಲ್ಹೋತ್ರಾ ಶನಿವಾರ ಭೇಟಿ ನೀಡಿ ಆಂಜನೇಯನ ದರ್ಶನ ಪಡೆದರು.
ಹೊಸಪೇಟೆ ಮೂಲಕ ಅಂಜನಾದ್ರಿಗೆ ಆಗಮಿಸಿದ ಸಚಿವ, ಸ್ಥಳೀಯ ಪೊಲೀಸರು ಮತ್ತು ಬಿಜೆಪಿ ಬೆಂಬಲಿಗರ ನೆರವಿನೊಂದಿಗೆ ಬೆಟ್ಟ ಹತ್ತಿದರು. ಮೂರ್ತಿ ಮುಂದೆ ಕೆಲಕಾಲ ಧ್ಯಾನ ಮಾಡಿ ಬೆಟ್ಟದ ಮೇಲಿಂದ ಸುತ್ತಲಿನ ಪರಿಸರ ವೀಕ್ಷಿಸಿದರು. ಬೆಟ್ಟದ ಐತಿಹ್ಯ ಮತ್ತು ಪರಿಸರ ಕುರಿತು ಡಿವೈಎಸ್ಪಿ ಜೆ.ಎಸ್.ನ್ಯಾಮಗೌಡ ವಿವರಿಸಿದರು. ನಂತರ ಬಿಜೆಪಿ ಮುಖಂಡರು ಹಾಗೂ ಸಚಿವರನ್ನು ಭೇಟಿ ಮಾಡಿ ಅಂಜನಾದ್ರಿ ಬೆಟ್ಟದ ವ್ಯಾಪ್ತಿಯಲ್ಲಿ ಹೆದ್ದಾರಿ ನಿರ್ಮಾಣದ ಪ್ರಸ್ತಾವನೆ ಚರ್ಚಿಸಿ ಅನುದಾನ ನೀಡುವಂತೆ ಮನವಿ ಮಾಡಿದರು. ಮನವಿಗೆ ಸಚಿವ ಸಕರಾತ್ಮಕವಾಗಿ ಸ್ಪಂದಿಸಿದ್ದು, ಪ್ರಸ್ತಾವನೆ ಪರಿಶೀಲಿಸುವ ಭರವಸೆ ನೀಡಿದರು.
ಸಚಿವ ಹರ್ಷಾ ಮಲ್ಹೋತ್ರಾ ಅವರನ್ನು ಸ್ಥಳೀಯ ಮುಖಂಡರು ಸನ್ಮಾನಿಸಿದರು.ಗ್ರೇಡ್-2 ತಹಸೀಲ್ದಾರ್ ಮಹಾಂತಗೌಡ ಗೌಡರ್, ಪ್ರಮುಖರಾದ ಸಂತೋಷ ಕೆಲೋಜಿ, ಎಚ್.ಎಂ.ಸಿದ್ರಾಮಯ್ಯಸ್ವಾಮಿ, ಚಿದಾನಂದ ನಾಯ್ಕ, ಬಸವರಾಜಸ್ವಾಮಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net