ಸಚಿವ ಶರಣಪ್ರಕಾಶ ಪಾಟೀಲ್ ಜಿಲ್ಲೆಗೆ

ಬಸವರಾಜ ರಾಯರಡ್ಡಿ
ಬಸವರಾಜ ರಾಯರಡ್ಡಿ
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಬಸವರಾಜ ರಾಯರಡ್ಡಿ ಮಾಹಿತಿ
  • ಯಲಬುರ್ಗಾ ಸುದ್ದಿಗಾರರೊಂದಿಗೆ ಮಾತು
ಯಲಬುರ್ಗಾ: ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ್ ಅವರು ಜು.3ರಂದು ಕೊಪ್ಪಳ ಜಿಲ್ಲೆಗೆ ಭೇಟಿ ನೀಡಲಿದ್ದು, ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಪರಿಸ್ಥಿತಿ ಹಾಗೂ ಸಂಭವನೀಯ ಬರ ಪರಿಸ್ಥಿತಿಯ ಕುರಿತು ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಶಾಸಕ ಬಸವರಾಜ ರಾಯರಡ್ಡಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಸಮರ್ಪಕ ಮುಂಗಾರು ಮಳೆಯಾಗದ ಕಾರಣ ರೈತರಲ್ಲಿ ಆತಂಕ ಹೆಚ್ಚಾಗಿದೆ. ಕೃಷಿ ಚಟುವಟಿಕೆಗಳ ಮೇಲೆ ಮಳೆ ಕೊರತೆಯ ಪರಿಣಾಮ, ಕುಡಿಯುವ ನೀರಿನ ಲಭ್ಯತೆ, ಜಾನುವಾರುಗಳಿಗೆ ಮೇವು ಹಾಗೂ ಬರ ಪರಿಸ್ಥಿತಿಯನ್ನು ಎದುರಿಸಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ ಎಂದು ತಿಳಿಸಿದರು.
ತಪ್ಪಾಗಿ ಅರ್ಥೈಸಿ ವೈರಲ್: ಮುನಿರಾಬಾದ್‌ನಲ್ಲಿ ಇತ್ತೀಚೆಗೆ ಕ್ರಸ್ಟ್ ಗೇಟ್ ಉದ್ಘಾಟನೆ ಕಾರ್ಯಕ್ರಮದ ವೇಳೆ ಸಿಎಂ ಡಿ.ಕೆ.ಶಿವಕುಮಾರ್ ತಮ್ಮಿಂದ ನೀಡಲಾದ ಹೂವಿನ ಹಾರವನ್ನು ತಿರಸ್ಕರಿಸಿದ್ದಾರೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಕುರಿತು ಪ್ರತಿಕ್ರಿಯಿಸಿ, ‘ಸಿಎಂ ನಾನು ನೀಡಿದ ಹೂವಿನ ಹಾರವನ್ನು ತಿರಸ್ಕರಿಸಿಲ್ಲ. ಕೇಂದ್ರ ಸಚಿವರಿಗೆ ಹಾರ ಹಾಕಲು ಸೂಚಿಸಿದ್ದರು. ಆ ಸಂದರ್ಭದ ವಿಡಿಯೋವನ್ನು ತಪ್ಪಾಗಿ ಅರ್ಥೈಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗಿದೆ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಸತ್ಯಾಸತ್ಯತೆ ಪರಿಶೀಲಿಸದೆ ಸುಳ್ಳು ಮಾಹಿತಿ ಹರಡುವುದು ಸರಿಯಲ್ಲ. ಸಾರ್ವಜನಿಕರು ಇಂತಹ ವದಂತಿಗಳಿಗೆ ಕಿವಿಗೊಡಬಾರದು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net