ನೀಟ್ ಪರೀಕ್ಷೆ ಜವಾಬ್ದಾರಿ ಆಯಾ ರಾಜ್ಯಕ್ಕೆ ನೀಡಲಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷೆ ರದ್ದು ವಿರೋಧಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಕಾರಟಗಿಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಪ್ರಮುಖರಾದ ರೆಡ್ಡಿ ಶ್ರೀನಿವಾಸ, ಶರಣೇಗೌಡ ಮಾ.ಪಾ., ದೇವರಾಜ ಕಟ್ಟಿಮನಿ ಇತರರಿದ್ದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷೆ ರದ್ದು ವಿರೋಧಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಕಾರಟಗಿಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಪ್ರಮುಖರಾದ ರೆಡ್ಡಿ ಶ್ರೀನಿವಾಸ, ಶರಣೇಗೌಡ ಮಾ.ಪಾ., ದೇವರಾಜ ಕಟ್ಟಿಮನಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಎನ್‌ಎಸ್‌ಯುಐ ಕಾರ್ಯಕರ್ತರ ಆಗ್ರಹ
ಕಾರಟಗಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷೆ ರದ್ದು ವಿರೋಧಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಪಟ್ಟಣದಲ್ಲಿ ಬುಧವಾರ ಸಂಜೆ ಪ್ರತಿಭಟನೆ ನಡೆಸಿದರು.
ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ವೃತ್ತದಿಂದ ನೂತನ ಬಸ್ ನಿಲ್ದಾಣದವರೆಗೆ ರ‌್ಯಾಲಿ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಜಿಲ್ಲಾಧ್ಯಕ್ಷ ಶಿವಕುಮಾರ ತೆಕ್ಕಲಕೋಟೆ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣೇಗೌಡ ಮಾಲಿ ಪಾಟೀಲ್ ಸೇರಿದಂತೆ ಸಂಘಟನೆಯ ಹಲವು ಪದಾಧಿಕಾರಿಗಳು, ಪಕ್ಷದ ಮುಖಂಡರು, ವಿದ್ಯಾರ್ಥಿಗಳು ಭಾಗಿಯಾಗಿ ನೀಟ್ ಅಕ್ರಮನ್ನು ಖಂಡಿಸಿ, ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ ಮಾತನಾಡಿ, ಭವಿಷ್ಯದ ಕನಸುಗಳನ್ನು ಕಟ್ಟಿಕೊಂಡು ಸಾಕಷ್ಟು ಸವಾಲುಗಳ ನಡುವೆ ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸಿ ಪರೀಕ್ಷೆ ಬರೆಯುವುದರ ಹಿಂದೆ ಮಕ್ಕಳು ಸಾಕಷ್ಟು ಶ್ರಮಿಸಿರುತ್ತಾರೆ. ಆದರೆ, ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯಲ್ಲಿ ನಿರ್ವಹಣೆ ಮಾಡಲಾಗದೆ ಎಡವಿದ್ದು, ವಿದ್ಯಾರ್ಥಿಗಳ ಕನಸುಗಳಿಗೆ ಕೊಳ್ಳಿ ಇಟ್ಟಂತಾಗಿದೆ. ಇದರ ಸಂಪೂರ್ಣ ಹೊಣೆಯನ್ನು ಕೇಂದ್ರ ಸರ್ಕಾರವೇ ಹೊರಬೇಕಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ ಮಾನವ ಸಂಪನ್ಮೂಲ ಸಚಿವ ಧಮೇರ್ಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಬಳಿಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣೇಗೌಡ ಮಾಲಿಪಾಟೀಲ್, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಶಿವಕುಮಾರ ತೆಕ್ಕಲಕೋಟೆ ಮಾತನಾಡಿ, ಈ ವರ್ಷ ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆದಿದ್ದರು. ನೀಟ್ ರದ್ದುಗೊಳಿಸಿರುವುದರಿಂದ ಈ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ನೀಟ್ ಪರೀಕ್ಷೆಯಲ್ಲಿ ಪದೇ ಪದೇ ಅಕ್ರಮಗಳಾಗುತ್ತಿದ್ದು ಪಾರದರ್ಶಕತೆ ಇಲ್ಲದಂತಾಗಿದೆ. ಅಕ್ರಮಗಳಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದ್ದು ನೀಟ್ ಪರೀಕ್ಷೆ ರದ್ದುಮಾಡಿ ಮೊದಲಿನಂತೆ ಆಯಾ ರಾಜ್ಯಗಳಿಗೆ ವೈದ್ಯಕೀಯ ಕೋರ್ಸ್‌ಗಳ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಸದಸ್ಯ ಸೋಮನಾಥ ದೊಡ್ಡಮನೆ, ಎನ್‌ಎಸ್‌ಯುಐ ಜಿಲ್ಲಾ ಕಾರ್ಯದರ್ಶಿ ಮಹೇಶ್ ಭೋವಿ, ತಾಲೂಕಾಧ್ಯಕ್ಷ ಅಂಕಿತ್ ರೆಡ್ಡಿ, ಕನಕಗಿರಿ ಯುವ ಕಾಂಗ್ರೆಸ್ ಅಧ್ಯಕ್ಷ ದೇವರಾಜ ಕಟ್ಟಿಮನಿ, ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ ಚಂದ್ರಶೇಖರ ಉಪ್ಪಾರ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net