ಅಭಿವೃದ್ಧಿಗೆ ಹೊಸ ಆಯಾಮ

ಕಾರಟಗಿ: ಹನ್ನೆರಡು ಎಕರೆ ಸರ್ಕಾರಿ ಭೂಮಿಯಲ್ಲಿ ಮೂರು ಎಕರೆಯಲ್ಲಿ ಪ್ರಜಾಸೌಧ, ಐದು ಎಕರೆಯಲ್ಲಿ ಕ್ರೀಡಾಂಗಣ ಹಾಗೂ ನಾಲ್ಕು ಎಕರೆಯಲ್ಲಿ ನ್ಯಾಯಾಲಯ ಸಂಕೀರ್ಣ ನಿರ್ಮಾಣವಾಗುವುದರಿಂದ ವಿಶಾಲವಾದ ರಸ್ತೆ ನಿರ್ಮಿಸಲಾಗುತ್ತಿದ್ದು, ಇದರಿಂದ ಈ ಪ್ರದೇಶದ ಅಭಿವೃದ್ಧಿಗೆ ಹೊಸ ಆಯಾಮ ಸಿಗಲಿದೆ ಎಂದು ಶಾಸಕ ಶಿವರಾಜ ತಂಗಡಗಿ ತಿಳಿಸಿದರು. ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗಾಗಿ 5 ಕೋಟಿ ರೂ. ಅನುದಾನದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಶಿವರಾಜ ತಂಗಡಗಿ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಯೋಜನೆ ಅನುಷ್ಠಾನದಲ್ಲಿ ನಡೆದ ದೋಷಗಳಿಂದ ಈ ಮೊದಲು ಉದ್ದೇಶಿಸಿದ ಪಟ್ಟಣದ ಕೆರೆ ಪ್ರದೇಶದಲ್ಲಿ ಕಾಮಗಾರಿ ಕೈಗೊಳ್ಳಲು ಸಾಧ್ಯವಾಗಲಿಲ್ಲ. ಪ್ರಜಾಸೌಧ ಮತ್ತು ಆಸ್ಪತ್ರೆ ಕಾಮಗಾರಿಗಳನ್ನು ಶೀಘ್ರ ಆರಂಭಿಸಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ. ಅಲ್ಲದೆ, ಬೂದುಗುಂಪ ರಸ್ತೆಯ ಸರ್ಕಾರಿ ಜಾಗದಲ್ಲಿ ವಿದ್ಯಾರ್ಥಿಗಳಿಗಾಗಿ ದೊಡ್ಡ ವಸತಿ ನಿಲಯ ನಿರ್ಮಿಸುವ ಉದ್ದೇಶವಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು. ಅಮೃತ-2 ಯೋಜನೆಯಡಿ ಕಾರಟಗಿ ಮತ್ತು ಕನಕಗಿರಿ ತಾಲೂಕುಗಳ ಸಮಗ್ರ ಅಭಿವೃದ್ಧಿಗಾಗಿ ಮೊದಲ ಹಂತದಲ್ಲಿ 124 ಕೋಟಿ ರೂ.ಗಳ ಮೊತ್ತದ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ ಎರಡನೇ ಹಂತದಲ್ಲಿ 94 ಕೋಟಿ ಮೊತ್ತದ ಮತ್ತೊಂದು ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು. ಸಚಿವ ಸ್ಥಾನ ಸಿಗುವ ವಿಶ್ವಾಸ : ಪಕ್ಷದ ವರಿಷ್ಠರು, ನಾನು ಇದುವರೆಗೆ ಮಾಡಿರುವ ಕೆಲಸಗಳು, ಇಲಾಖೆಗಳ ಪ್ರಗತಿ ಹಾಗೂ ಪಕ್ಷ ಸಂಘಟನೆ ಗುರುತಿಸಿ ಮತ್ತೊಮ್ಮೆ ಸಚಿವ ಸ್ಥಾನ ನೀಡುವ ವಿಶ್ವಾಸವಿದೆ ಎಂದು ಹೇಳಿದರು.  ವಿವಿಧ ಕಾಮಗಾರಿಗಳು: ಜೂರಟಗಿ ಬಳಿ ನಿರ್ಮಿಸಲಾಗುತ್ತಿರುವ ಪ್ರಜಾಸೌಧಕ್ಕೆ ಆರ್.ಜಿ.ರಾಜ್ಯಹೆದ್ದಾರಿಯಿಂದ ಸಂಪರ್ಕ ಕಲ್ಪಿಸಲು 2.42ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ, ಗುಡೂರು ಹಾಗೂ ಹುಳ್ಕಿಹಾಳ ಗ್ರಾಮಗಳ ಎಸ್ಟಿ ಕಾಲನಿಗಳಲ್ಲಿ ತಲಾ 1 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ, ಮೈಲಾಪುರ ಗ್ರಾಮದ ಎಸ್ಸಿ ಕಾಲನಿಯಲ್ಲಿ ಸಿಸಿ ರಸ್ತೆಗೆ 25 ಲಕ್ಷ ರೂ., ಬೇವಿನಾಳ ಗ್ರಾಮದಲ್ಲಿ ಮುಖ್ಯರಸ್ತೆಯಿಂದ ಅಗಸಿವರೆಗೆ 32 ಲಕ್ಷ  ರೂ. ವೆಚ್ಚದ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಪುರಸಭೆ ಅಧ್ಯಕ್ಷ ಮಂಜುನಾಥ ಮೇಗೂರು, ಸ್ಥಾಯಿಸಮಿತಿ ಅಧ್ಯಕ್ಷ ದೊಡ್ಡಬಸವರಾಜ ಬೂದಿ, ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ ನಾಗರಾಜ ಅರಳಿ, ಸದಸ್ಯ ಸೋಮನಾಥ ದೊಡ್ಡಮನಿ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಶಿವರಾಜ ತಂಗಡಗಿ ಹೇಳಿಕೆ
  • ಕಾರಟಗಿ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ
ಕಾರಟಗಿ: ಹನ್ನೆರಡು ಎಕರೆ ಸರ್ಕಾರಿ ಭೂಮಿಯಲ್ಲಿ ಮೂರು ಎಕರೆಯಲ್ಲಿ ಪ್ರಜಾಸೌಧ, ಐದು ಎಕರೆಯಲ್ಲಿ ಕ್ರೀಡಾಂಗಣ ಹಾಗೂ ನಾಲ್ಕು ಎಕರೆಯಲ್ಲಿ ನ್ಯಾಯಾಲಯ ಸಂಕೀರ್ಣ ನಿರ್ಮಾಣವಾಗುವುದರಿಂದ ವಿಶಾಲವಾದ ರಸ್ತೆ ನಿರ್ಮಿಸಲಾಗುತ್ತಿದ್ದು, ಇದರಿಂದ ಈ ಪ್ರದೇಶದ ಅಭಿವೃದ್ಧಿಗೆ ಹೊಸ ಆಯಾಮ ಸಿಗಲಿದೆ ಎಂದು ಶಾಸಕ ಶಿವರಾಜ ತಂಗಡಗಿ ತಿಳಿಸಿದರು.
ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗಾಗಿ 5 ಕೋಟಿ ರೂ. ಅನುದಾನದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಶಿವರಾಜ ತಂಗಡಗಿ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಯೋಜನೆ ಅನುಷ್ಠಾನದಲ್ಲಿ ನಡೆದ ದೋಷಗಳಿಂದ ಈ ಮೊದಲು ಉದ್ದೇಶಿಸಿದ ಪಟ್ಟಣದ ಕೆರೆ ಪ್ರದೇಶದಲ್ಲಿ ಕಾಮಗಾರಿ ಕೈಗೊಳ್ಳಲು ಸಾಧ್ಯವಾಗಲಿಲ್ಲ. ಪ್ರಜಾಸೌಧ ಮತ್ತು ಆಸ್ಪತ್ರೆ ಕಾಮಗಾರಿಗಳನ್ನು ಶೀಘ್ರ ಆರಂಭಿಸಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ. ಅಲ್ಲದೆ, ಬೂದುಗುಂಪ ರಸ್ತೆಯ ಸರ್ಕಾರಿ ಜಾಗದಲ್ಲಿ ವಿದ್ಯಾರ್ಥಿಗಳಿಗಾಗಿ ದೊಡ್ಡ ವಸತಿ ನಿಲಯ ನಿರ್ಮಿಸುವ ಉದ್ದೇಶವಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.
ಅಮೃತ-2 ಯೋಜನೆಯಡಿ ಕಾರಟಗಿ ಮತ್ತು ಕನಕಗಿರಿ ತಾಲೂಕುಗಳ ಸಮಗ್ರ ಅಭಿವೃದ್ಧಿಗಾಗಿ ಮೊದಲ ಹಂತದಲ್ಲಿ 124 ಕೋಟಿ ರೂ.ಗಳ ಮೊತ್ತದ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ ಎರಡನೇ ಹಂತದಲ್ಲಿ 94 ಕೋಟಿ ಮೊತ್ತದ ಮತ್ತೊಂದು ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಚಿವ ಸ್ಥಾನ ಸಿಗುವ ವಿಶ್ವಾಸ : ಪಕ್ಷದ ವರಿಷ್ಠರು, ನಾನು ಇದುವರೆಗೆ ಮಾಡಿರುವ ಕೆಲಸಗಳು, ಇಲಾಖೆಗಳ ಪ್ರಗತಿ ಹಾಗೂ ಪಕ್ಷ ಸಂಘಟನೆ ಗುರುತಿಸಿ ಮತ್ತೊಮ್ಮೆ ಸಚಿವ ಸ್ಥಾನ ನೀಡುವ ವಿಶ್ವಾಸವಿದೆ ಎಂದು ಹೇಳಿದರು.
ವಿವಿಧ ಕಾಮಗಾರಿಗಳು: ಜೂರಟಗಿ ಬಳಿ ನಿರ್ಮಿಸಲಾಗುತ್ತಿರುವ ಪ್ರಜಾಸೌಧಕ್ಕೆ ಆರ್.ಜಿ.ರಾಜ್ಯಹೆದ್ದಾರಿಯಿಂದ ಸಂಪರ್ಕ ಕಲ್ಪಿಸಲು 2.42ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ, ಗುಡೂರು ಹಾಗೂ ಹುಳ್ಕಿಹಾಳ ಗ್ರಾಮಗಳ ಎಸ್ಟಿ ಕಾಲನಿಗಳಲ್ಲಿ ತಲಾ 1 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ, ಮೈಲಾಪುರ ಗ್ರಾಮದ ಎಸ್ಸಿ ಕಾಲನಿಯಲ್ಲಿ ಸಿಸಿ ರಸ್ತೆಗೆ 25 ಲಕ್ಷ ರೂ., ಬೇವಿನಾಳ ಗ್ರಾಮದಲ್ಲಿ ಮುಖ್ಯರಸ್ತೆಯಿಂದ ಅಗಸಿವರೆಗೆ 32 ಲಕ್ಷ ರೂ. ವೆಚ್ಚದ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.
ಪುರಸಭೆ ಅಧ್ಯಕ್ಷ ಮಂಜುನಾಥ ಮೇಗೂರು, ಸ್ಥಾಯಿಸಮಿತಿ ಅಧ್ಯಕ್ಷ ದೊಡ್ಡಬಸವರಾಜ ಬೂದಿ, ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ ನಾಗರಾಜ ಅರಳಿ, ಸದಸ್ಯ ಸೋಮನಾಥ ದೊಡ್ಡಮನಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net