ರೈತ ಸಂಘದ ಪದಾಧಿಕಾರಿಗಳ ಪದಗ್ರಹಣ

sharanappa marali
sharanappa marali
Published on

ಪ್ರಮುಖ ಮುಖ್ಯಾಂಶಗಳು

  • ರೈತರ ಜಾಗೃತಿ ಕಾರ್ಯಕ್ರಮ
ಕೊಪ್ಪಳ: ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೊಪ್ಪಳ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಶಾಲುದೀಕ್ಷಾ ರೈತ ಜಾಗೃತಿ ಕಾರ್ಯಕ್ರಮವನ್ನು ಮಾ.22ರಂದು ಬೆಳಗ್ಗೆ 10 ಗಂಟೆಗೆ ನಗರದ ಎ.ಆರ್​. ಮೇಘರಾಜ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣಪ್ಪ ಮರಳಿ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕಾರ್ಯಕ್ರಮವನ್ನು ಇಂಚಗೇರಿ ಮಠದ ಯುವ ಸನ್ಯಾಸಿ ಹಾಗೂ ರಾಜ್ಯ ಗೌರವಾಧ್ಯಕ್ಷರಾದ ಪ.ಪೂ. ಶಶಿಕಾಂತ ಪಡಸಲಗಿ ಉದ್ಘಾಟಿಸಲಿದ್ದಾರೆ. ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜೇರಿ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಕಾರ್ಯಾಧ್ಯಕ್ಷ ಮಹೇಶಗೌಡ ಎಂ. ಸುಬೇದಾರ, ಉಪಾಧ್ಯಕ್ಷ ಶಿವಾನಂದ ಮುಗಳಿಹಾಳ, ಕಾರ್ಯದರ್ಶಿ ಕಿಶನ್​ ನಂದಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿರಲಿದ್ದಾರೆ. ಎಂದು ಮಾಹಿತಿ ನೀಡಿದರು.
ಕೊಪ್ಪಳ ಸುತ್ತಮುತ್ತಲಿನ 20ಕ್ಕೂ ಹೆಚ್ಚು ಗ್ರಾಮಗಳ ಜನರು ಕಾರ್ಖಾನೆಗಳ ಧೂಳಿನಿಂದ ಸಂಕಷ್ಟಕ್ಕೀಡಾಗಿದ್ದಾರೆ. ಜಾನುವಾರುಗಳು ಮಾಲಿನ್ಯಭರಿತ ಮೇವು ತಿಂದು ಸಾಯುತ್ತಿವೆ. ಜನ-ಜಾನುವಾರುಗಳಿಗೆ ಕುಡಿಯಲು ಶುದ್ಧ ನೀರಿಲ್ಲದಂತಾಗಿದೆ. ಇಂತಹ ಗಂಭೀರ ಸಮಸ್ಯೆಗಳ ವಿರುದ್ಧ ಹೋರಾಡಲು ಈ ಸಂಘಟನೆಯನ್ನು ಬಲಪಡಿಸಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ದೇಶದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಹಸಿರು ಕ್ರಾಂತಿಗೂ ಮೊದಲು ರೈತರ ಬದುಕು ಸುಗಮವಾಗಿತ್ತು. ಆದರೆ ಇಂದು ದೇಶದಲ್ಲಿ ಪ್ರತಿ ನಾಲ್ಕು ನಿಮಿಷಕ್ಕೆ ಒಬ್ಬ ರೈತ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ. ರೈತರ ಆತ್ಮಹತ್ಯೆಯಲ್ಲಿ ಭಾರತ ಜಗತ್ತಿನಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ರಾಜ್ಯ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ಇದು ಅತ್ಯಂತ ವಿಷಾದನೀಯ ಸಂಗತಿ ಎಂದರು.
ಜಿಲ್ಲಾಧ್ಯಕ್ಷ ಮಹಮ್ಮದ್​ ಇಸ್ಮಾಯಿಲ್​ ನಾಲಬಂದ್​, ಸುಕುಮಿಯಪ್ಪ, ವಿರೇಶ ಅನ್ವಾಳ, ಭೀಮನಗೌಡ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net