ಜಿಲ್ಲಾ ಪ್ರಗತಿಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ವಿವಿಧ ಇಲಾಖೆಗಳಿಂದ ಡಿಸಿ ಡಾ. ಸುರೇಶ ಬಿ. ಇಟ್ನಾಳ ಮಾಹಿತಿ ಪಡೆದುಕೊಂಡರು. ಜಿಪಂ ಸಿಇಒ ವರ್ಣಿತ್ ನೇಗಿ, ಡಿಎಫ್ಒ ನಿರ್ಮಲಾ, ಎಡಿಸಿ ಸಿದ್ರಾಮೇಶ್ವರ, ಜಿಪಂ ಉಪಕಾರ್ಯದರ್ಶಿ ಟಿ. ಕೃಫ್ಣಿಮೂರ್ತಿ ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಡಿಸಿ ಡಾ. ಸುರೇಶ ಇಟ್ನಾಳ ಸೂಚನೆ
ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ
ಕೊಪ್ಪಳ : ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿಕೊಂಡಿರುವ ಹಿನ್ನೆಲೆಯಲ್ಲಿ ಕೃಷಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಸೂಚಿಸಿದರು.
ಜೂನ್ 13ರಂದು ಮುಖ್ಯಮಂತ್ರಿ ಅವರೊಂದಿಗೆ ನಡೆಯಲಿರುವ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಹಿನ್ನೆಲೆಯಲ್ಲಿ ಗುರುವಾರ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ವಿವಿಧ ಇಲಾಖೆಗಳ ಪ್ರಗತಿ ಕುರಿತು ಮಾಹಿತಿ ಪಡೆದುಕೊಂಡರು.
ಮುಂಗಾರು ಆರಂಭವಾದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಿತ್ತನೆ ಪ್ರಮಾಣ, ರಸಗೊಬ್ಬರ ಪೂರೈಕೆ, ಬೀಜ ವಿತರಣೆ ಹಾಗೂ ಇತರ ಕೃಷಿ ಚಟುವಟಿಕೆಗಳ ಮಾಹಿತಿ ಪಡೆದು. 2026-&27ನೇ ಸಾಲಿನ ಮೊದಲ ತೆಮಾಸಿಕ ಅವಧಿ ಅಂತ್ಯದ ಹಂತದಲ್ಲಿರುವುದರಿಂದ ಎಲ್ಲ ಇಲಾಖೆಗಳು ತಮ್ಮ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಗಮನ ಹರಿಸಬೇಕು. ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಮರ್ಪಕವಾಗಿ ಪೂರೈಸಿ. ಕಳಪೆ ಬೀಜ ಹಾಗೂ ರಸಗೊಬ್ಬರ ಮಾರಾಟವಾಗದಂತೆ ನಿಗಾವಹಿಸಿ. ಹೆಚ್ಚಿನ ದರ ವಸೂಲಾತಿಗೆ ಅವಕಾಶ ನೀಡಬೇಡಿ. ಮಳೆ ಅವಡಗಳ ಬಗ್ಗೆ ಎಚ್ಚರವಿರಲಿ. ಅಂಗನವಾಡಿ, ಶಾಲೆ&ಕಾಲೇಜು ಕಟ್ಟಡಗಳ ಸ್ಥಿತಿ ಪರಿಶೀಲಿಸಿ. ತುರ್ತು ಪರಿಸ್ಥಿತಿ ಎದುರಿಸಲು ಸಿದ್ಧರಾಗಿರುವಂತೆ ನಿರ್ದೇಶಿಸಿದರು.
ಜಿಪಂ ಸಿಇಒ ವರ್ಣಿತ್ ನೇಗಿ ಮಾತನಾಡಿ, ಶಾಲೆ ಆರಂಭವಾಗಿದ್ದು, ಪಠ್ಯಪುಸ್ತಕ, ಸಮವಸ್ತ್ರ ಹಾಗೂ ಶೂ-&ಸಾಕ್ಸ್ ವಿತರಿಸಿ. ಜಿಲ್ಲೆಯ ವಸತಿ ನಿಲಯಗಳ ಸಂಖ್ಯೆ, ವಿದ್ಯಾರ್ಥಿಗಳ ವಿವರ, ಸ್ವಂತ ಹಾಗೂ ಬಾಡಿಗೆ ಕಟ್ಟಡಗಳ ಮಾಹಿತಿ ಮತ್ತು ನಿವೇಶನ ಅಗತ್ಯಗಳ ಕುರಿತು ಸಮಗ್ರ ಮಾಹಿತಿ ಒದಗಿಸುವಂತೆ ಸಂಬಂಧಿತ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಜಂಟಿ ಕೃಷಿ ನಿರ್ದೇಶಕ ಜೆ.ಡಿ.ಕೃಷ್ಣಮೂರ್ತಿ ಮಾತನಾಡಿ, ಜೂ.10ವರೆಗೆ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.41ರಷ್ಟು ಅಧಿಕ ಮಳೆಯಾಗಿದೆ. ಈಗಾಗಲೇ 1.32 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಪೂರ್ಣಗೊಂಡಿದ್ದು, ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಈ ವರ್ಷ ಸುಮಾರು 1.22 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ, 32 ಸಾವಿರ ಹೆಕ್ಟೇರ್ನಲ್ಲಿ ಸಜ್ಜೆ, 44 ಸಾವಿರ ಹೆಕ್ಟೇರ್ನಲ್ಲಿ ಹೆಸರು ಹಾಗೂ 40 ಸಾವಿರ ಹೆಕ್ಟೇರ್ನಲ್ಲಿ ತೊಗರಿ ಬೆಳೆ ಬಿತ್ತನೆಗೆ ರೈತರು ಮುಂದಾಗಿದ್ದಾರೆ ಎಂದು ಹೇಳಿದರು.
ಡಿಎಫ್ಒ ನಿರ್ಮಲಾ, ಎಡಿಸಿ ಸಿದ್ರಾಮೇಶ್ವರ, ಜಿಪಂ ಉಪಕಾರ್ಯದರ್ಶಿ ಟಿ. ಕೃಫ್ಣಿಮೂರ್ತಿ, ನಗಾರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ, ಜಂಟಿ ತೋಟಗಾರಿಕೆ ನಿರ್ದೇಶಕ ಕೃಫ್ಣಿ ಉಕ್ಕುಂದ, ಡಿಡಿಪಿಐ ಸೋಮಶೇಖರಗೌಡ ಪಾಟೀಲ್, ಡಿಡಿಪಿಯು ಜಗದೀಶ ಇತರರಿದ್ದರು.