ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್ ಕಳೆದ ವರ್ಷ ಕಳಚಿ ಬಿದ್ದು, ಅಪಾರ ಪ್ರಮಾಣದ ನೀರು ಪೋಲಾಗಿತ್ತು. ಇದರಿಂದ ಎಚ್ಚೆತ್ತ ಸರ್ಕಾರ ಎಲ್ಲ 33 ಕ್ರಸ್ಟ್‌ಗೇಟ್‌ಗಳನ್ನು ತೆರವುಗೊಳಿಸಿ ಹೊಸದಾಗಿ ಅಳವಡಿಸಿದೆ. ಇದೀಗ ಅವುಗಳ ಲೋಕಾರ್ಪಣೆಗೆ ಜೂ.25 ದಿನ ನಿಗದಿ ಮಾಡಿದ್ದು, ಈ ಸಮಾರಂಭ ಅದ್ದೂರಿಯಾಗಿ ನೆರವೇರಲಿದೆ. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಸೇರಿದಂತೆ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.