ಬರ ತಾಲೂಕು ಘೋಷಣೆಗೆ ವಾರ ಗಡುವು

ಕುಷ್ಟಗಿಯ ತಾಲೂಕು ಕಾರ್ಯಾಲಯದಲ್ಲಿ ಶಾಸಕ ದೊಡ್ಡನಗೌಡ ಪಾಟೀಲ್, ತಹಸೀಲ್ದಾರ್ ಅಶೋಕ ಶಿಗ್ಗಾವಿಗೆ ರೈತ ಪರ ಹೋರಾಟ ಸಂಘದ ಪದಾಧಿಕಾರಿಗಳು ಮನವಿ ಮಾಡಿದರು.ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ದೋಟಿಹಾಳ, ಪ್ರ.ಕಾರ್ಯದರ್ಶಿ ಹನುಮೇಶ ಶಾಖಾಪುರ, ಜಿಲ್ಲಾ ಅಧ್ಯಕ್ಷ ಹೊನ್ನಪ್ಪ ಎಚ್. ತಳವಾರ, ತಾಲೂಕು ಅಧ್ಯಕ್ಷ ಶರಣಪ್ಪ ಮೇಗೂರು ಇದ್ದರು.

Published on

ಕುಷ್ಟಗಿ: ತೀವ್ರ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವಾಗಲೂ ಕುಷ್ಟಗಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸದ ಸರ್ಕಾರದ ಕ್ರಮ ಖಂಡಿಸಿ ರೈತ ಪರ ಹೋರಾಟ ಸಂಘದ ಪದಾಧಿಕಾರಿಗಳು ಶನಿವಾರ ಶಾಸಕ ದೊಡ್ಡನಗೌಡ ಪಾಟೀಲ್ ಹಾಗೂ ತಹಸೀಲ್ದಾರ್ ಅಶೋಕ ಶಿಗ್ಗಾವಿಗೆ ಮನವಿ ಸಲ್ಲಿಸಿದರು.

ತಾಲೂಕಿನಲ್ಲಿ ಮಳೆ ಇಲ್ಲದೆ ಬೆಳೆಗಳು ಒಣಗಿ ನಾಶವಾಗಿವೆ. ಕೃಷಿ ಚಟುವಟಿಕೆ ಕುಂಠಿತದಿಂದ ರೈತರು ಆರ್ಥಿಕವಾಗಿ ನಷ್ಟ ಅನುಭವಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲೂ ಸರ್ಕಾರ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಕುಷ್ಟಗಿ ಸೇರ್ಪಡೆ ಮಾಡದಿರುವುದು ರೈತರಿಗೆ ಮಾಡಿರುವ ಅನ್ಯಾಯವಾಗಿದೆ. 
ಕುಷ್ಟಗಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಸೂಕ್ತ ಪರಿಹಾರಧನ ಒದಗಿಸಬೇಕು. ಬೆಳೆ ನಷ್ಟಕ್ಕೆ ಅನುಗುಣವಾಗಿ ಬೆಳೆ ವಿಮೆ ಪರಿಹಾರವನ್ನು ಶೀಘ್ರ ವಿತರಿಸಬೇಕು. ಇನ್ನೊಂದು ವಾರದಲ್ಲಿ ಬರಪಟ್ಟಿಯಲ್ಲಿ ತಾಲೂಕನ್ನು ಸೇರಿಸಬೇಕು. ಇಲ್ಲದಿದ್ದರೆ ಕುಷ್ಟಗಿ ಬಂದ್‌ಗೆ ಕರೆ ನೀಡಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. 
ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ದೋಟಿಹಾಳ, ಪ್ರ.ಕಾರ್ಯದರ್ಶಿ ಹನುಮೇಶ ಶಾಖಾಪುರ, ಜಿಲ್ಲಾ ಅಧ್ಯಕ್ಷ ಹೊನ್ನಪ್ಪ ಎಚ್. ತಳವಾರ, ತಾಲೂಕು ಅಧ್ಯಕ್ಷ ಶರಣಪ್ಪ ಮೇಗೂರು ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net