ಮತದಾರರ ದಿನಾಚರಣೆಯಲ್ಲಿ ಭಾಗಿಯಾಗಿ

ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ಶುಕ್ರವಾರ ಅಧಿಕಾರಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಡಿಸಿ ಡಾ.ಸುರೇಶ ಬಿ.ಇಟ್ನಾಳ ಹಾಗೂ ಜಿಪಂ ಸಿಇಒ ವರ್ಣಿತ್​ ನೇಗಿ,  ಎಡಿಸಿ ಸಿದ್ರಾಮೇಶ್ವರ, ಜಿಪಂ ಮುಖ್ಯ ಯೋಜನಾಧಿಕಾರಿ ಮಂಜುನಾಥ ಡಿ. ಇದ್ದರು.
ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ಶುಕ್ರವಾರ ಅಧಿಕಾರಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಡಿಸಿ ಡಾ.ಸುರೇಶ ಬಿ.ಇಟ್ನಾಳ ಹಾಗೂ ಜಿಪಂ ಸಿಇಒ ವರ್ಣಿತ್​ ನೇಗಿ, ಎಡಿಸಿ ಸಿದ್ರಾಮೇಶ್ವರ, ಜಿಪಂ ಮುಖ್ಯ ಯೋಜನಾಧಿಕಾರಿ ಮಂಜುನಾಥ ಡಿ. ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಪಂ ಸಿಇಒ ವರ್ಣಿತ್​ ನೇಗಿ ಸೂಚನೆ
  • ಅಧಿಕಾರಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ
ಕೊಪ್ಪಳ : ಹದಿನಾರನೇ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಎಲ್ಲ ಇಲಾಖೆ ಅಧಿಕಾರಿ, ಸಿಬ್ಬಂದಿ, ಶಿಕ್ಷಕರು, ವಿದ್ಯಾರ್ಥಿಗಳು ಭಾಗಿಯಾಗುವಂತೆ ಜಿಪಂ ಸಿಇಒ ವರ್ಣಿತ್​ ನೇಗಿ ಮನವಿ ಮಾಡಿದರು.
ನಗರದ ಜಿಪಂ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು.
ನನ್ನ ಭಾರತ, ನನ್ನ ಮತ ಎಂಬ ಘೋಷ ವಾಕ್ಯದೊಂದಿಗೆ ದಿನ ಆಚರಿಸಲಾಗುತ್ತಿದೆ. ಜ.25ರಂದು ಬೆಳಗ್ಗೆ 10 ಗಂಟೆಗೆ ಸಾಹಿತ್ಯ ಭವನದಲ್ಲಿ ಕಾರ್ಯಕ್ರಮ ಇರಲಿದೆ. ಪ್ರತಿಜ್ಞಾ ವಿಧಿ ಸ್ವೀಕಾರ, ಉತ್ತಮ ಬಿಎಲ್​ಒ, ಸೂಪರ್​ವೈಜರ್​, ಇಎಲ್​ಸಿ ಸಂಯೋಜಕರು, ಮಕ್ಕಳ ಸಂಸತ್​ ಸ್ಪರ್ಧೆಯಲ್ಲಿ ಸಾಧನೆಗೈದ ಮಕ್ಕಳನ್ನು ಸನ್ಮಾನಿಸಲಾಗುವುದು. ಯುವ ಮತದಾರರು ಹೆಚ್ಚಾಗಿ ಭಾಗಿಯಾಗುವಂತೆ ಅಧಿಕಾರಿಗಳು ನೋಡಿಕೊಳ್ಳಿ. ಹೊಸದಾಗಿ ನೋಂದಣಿಯಾದ ಮತದಾರರಿಗೆ ಗುರುತಿನ ಚೀಟಿ ವಿತರಿಸುವಂತೆ ಸೂಚಿಸಿದರು.
ಜಿಪಂ ಉಪ ಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಡಿಡಿಪಿಯು ಜಗದೀಶ ಜಿ.ಎಚ್​., ಡಿಡಿಪಿಐ ಸೋಮಶೇಖರಗೌಡ ಪಾಟೀಲ್​, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ, ತಾಪಂ ಇಒ ದುಂಡಪ್ಪ ತುರಾದಿ ಇತರ ಅಧಿಕಾರಿಗಳಿದ್ದರು.
ಪ್ರತಿಜ್ಞಾವಿಧಿ ಸ್ವೀಕಾರ
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಡಿಸಿ ಡಾ.ಸುರೇಶ ಬಿ.ಇಟ್ನಾಳ ಹಾಗೂ ಜಿಪಂ ಸಿಇಒ ವರ್ಣಿತ್​ ನೇಗಿ ಅಧ್ಯಕ್ಷತೆಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ ಚುನಾವಣಾ ಆಯೋಗದ ನನ್ನ ಭಾರತ, ನನ್ನ ಮತ ಘೋಷವಾಕ್ಯ ಹಾಗೂ ನೈತಿಕ ಮತ್ತು ಕಡ್ಡಾಯ ಮತದಾನದ ಮಹತ್ವ ಕುರಿತ ಪ್ರತಿಜ್ಞಾ ವಿಧಿ ಬೋಧಿಸಿದರು. ಎಡಿಸಿ ಸಿದ್ರಾಮೇಶ್ವರ, ಜಿಪಂ ಮುಖ್ಯ ಯೋಜನಾಧಿಕಾರಿ ಮಂಜುನಾಥ ಡಿ. ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net