ಹೋರಾಟದಲ್ಲಿ ಪಕ್ಷಾತೀತವಾಗಿ ಭಾಗಿಯಾಗಿ

ವಿಜಯನಗರ ಕಾಲುವೆಗೆ ನೀರು ಹರಿಸುವ ನಿಟ್ಟಿನಲ್ಲಿ ಬಿಜೆಪಿ ರೈತ ಮೋರ್ಚಾದಿಂದ  ಹಮ್ಮಿಕೊಂಡ ಬೃಹತ್ ಪ್ರತಿಭಟನೆ ರ‌್ಯಾಲಿ ಕುರಿತು ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡ  ಪೂರ್ವಭಾವಿ ಸಭೆಯಲ್ಲಿ ಮಾಜಿ ಶಾಸಕ ಪರಣ್ಣಮುನವಳ್ಳಿ ಮಾತನಾಡಿದರು.  ರಾಜ್ಯ ಸಮಿತಿ ಸದಸ್ಯ ಡಾ.ಬಸವರಾಜ ಕ್ಯಾವಟರ್, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ, ಉಪಾಧ್ಯಕ್ಷ ಮನೋಹರಗೌಡ ಹೇರೂರು ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳ
  • ಇಚ್ಛಾಶಕ್ತಿ
  • ಕೊರತೆ
ಗಂಗಾವತಿ: ವಿಜಯನಗರ ಕಾಲುವೆಗೆ ನೀರು ಹರಿಸುವಿಕೆ ನಿಟ್ಟಿನಲ್ಲಿ ರೈತರ ಶಕ್ತಿ ಸಾಬೀತಾಗಬೇಕಿದ್ದು, ನಿರೀಕ್ಷೆಗೂ ಮೀರಿ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಮಾಜಿ ಶಾಸಕ ಪರಣ್ಣಮುನವಳ್ಳಿ ಹೇಳಿದರು.
ವಿಜಯನಗರ ಕಾಲುವೆ ನೀರು ಹರಿಸುವ ನಿಟ್ಟಿನಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಹಮ್ಮಿಕೊಂಡ ಬೃಹತ್ ಪ್ರತಿಭಟನೆ ರ‌್ಯಾಲಿ ಕುರಿತು ಬಿಜೆಪಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಬಚಾವತ್ ತೀರ್ಪಿನಂತೆ 11ತಿಂಗಳ ನೀರು ಸಿಗಬೇಕಿದ್ದು, ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ಈಡೇರುತ್ತಿಲ್ಲ. ಜಲಾಶಯದಲ್ಲಿ ನೀರಿದ್ದರೂ, ವಿಜಯನಗರ ಕಾಲುವೆ ನೀರು ಹರಿಸಲು ಅಧಿಕಾರಿಗಳು ಮೀನಮೇಷ ಮಾಡುತ್ತಿದ್ದು, ಹೋರಾಟದ ಮೂಲಕ ನೀರು ಪಡೆಯಬೇಕಿದೆ. ಜು.31ರಂದು ಬಿಜೆಪಿಯಿಂದ ಹಮ್ಮಿಕೊಂಡ ಹೋರಾಟದಲ್ಲಿ ಪಕ್ಷಾತೀತವಾಗಿ ರೈತರು ಭಾಗವಹಿಸಬೇಕಿದ್ದು, ನೀರಿನ ಹಕ್ಕನ್ನು ಪ್ರತಿಭಟನೆ ಮೂಲಕ ಪಡೆಯೋಣ ಎಂದರು.
ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ ಮಾತನಾಡಿ, ವಿಜಯನಗರ ಕಾಲುವೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮಗಳಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸಂವಹನ ನಡೆಸಲಿದ್ದು, ಹೆಚ್ಚಿನ ಪ್ರಮಾಣದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನೀರು ಹರಿಸುವವರೆಗೂ ಹೋರಾಟ ಮುಂದುವರಿಯಲಿದೆ ಎಂದರು.
ಹೋರಾಟದ ರೂಪುರೇಷೆ, ಪ್ರಚಾರ, ಪ್ರತಿಭಟನೆ ಸ್ವರೂಪ ಮತ್ತು ರೈತರನ್ನು ಒಗ್ಗೂಡಿಸುವಿಕೆ ಕುರಿತು ಚರ್ಚಿಸಲಾಯಿತು.
ನಗರ ಮಂಡಲ ಅಧ್ಯಕ್ಷ ಚಂದ್ರು ಹಿರೂರು, ಗ್ರಾಮೀಣ ಮಂಡಲ ಅಧ್ಯಕ್ಷ ಡಿ.ಕೆ.ಆಗೋಲಿ, ಟಿಎಪಿಸಿಎಂಎಸ್ ಅಧ್ಯಕ್ಷ ಚನ್ನಪ್ಪ ಮಳಗಿ, ವಿವಿಧ ಮೋರ್ಚಾದ ಪದಾಧಿಕಾರಿಗಳಾದ ದೀಪಕ್ ಬಾಂಠಿಯಾ, ವೀರೇಶ ಬಲ್ಕುಂದಿ, ಮಹಾಂತೇಶ ಸ್ವಾಮಿ, ಮಲ್ಲಿಕಾರ್ಜುನ ಸ್ವಾಮಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net