ಮಾದರಿ ಗ್ರಾಮ ರೂಪಿಸಲು ಜನರ ಅಗತ್ಯ

ಯಲಬುರ್ಗಾ ತಾಲೂಕಿನ ಮಾರನಾಳದಲ್ಲಿ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಸದ ಕೆ.ರಾಜಶೇಖರ ಹಿಟ್ನಾಳ ಚಾಲನೆ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆರಿಬಸಪ್ಪ ನಿಡಗುಂದಿ, ಕೆಎಂಎಫ್ ನಿರ್ದೇಶಕ ಹಂಪಯ್ಯಸ್ವಾಮಿ ಹಿರೇಮಠ, ಪಿಡಿಒ ರವಿಕುಮಾರ್ ಲಿಂಗಣ್ಣವರ್ ಇತರರಿದ್ದರು.
ಯಲಬುರ್ಗಾ ತಾಲೂಕಿನ ಮಾರನಾಳದಲ್ಲಿ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಸದ ಕೆ.ರಾಜಶೇಖರ ಹಿಟ್ನಾಳ ಚಾಲನೆ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆರಿಬಸಪ್ಪ ನಿಡಗುಂದಿ, ಕೆಎಂಎಫ್ ನಿರ್ದೇಶಕ ಹಂಪಯ್ಯಸ್ವಾಮಿ ಹಿರೇಮಠ, ಪಿಡಿಒ ರವಿಕುಮಾರ್ ಲಿಂಗಣ್ಣವರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಒಳಚರಂಡಿ ವ್ಯವಸ್ಥೆ

ಮಾದರಿ ಗ್ರಾಮ ರೂಪಿಸಲು ಜನರ ಅಗತ್ಯ

ಯಲಬುರ್ಗಾ: ಗ್ರಾಮಗಳ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿದರೆ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆ ಉದ್ದೇಶ ಸಾರ್ಥಕವಾಗುತ್ತದೆ ಎಂದು ಸಂಸದ ಕೆ.ರಾಜಶೇಖರ ಹಿಟ್ನಾಳ ಹೇಳಿದರು.
ತಾಲೂಕಿನ ಮಾರನಾಳ, ತಲ್ಲೂರು ಹಾಗೂ ಚಿಕ್ಕಬನ್ನಿಗೋಳ ಗ್ರಾಮಗಳಲ್ಲಿ ಮಂಗಳವಾರ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. ಈ ಯೋಜನೆ ಗ್ರಾಮೀಣ ಅಭಿವೃದ್ಧಿಗೆ ಹೊಸ ದಿಕ್ಕು ನೀಡುವುದಾಗಿದೆ. ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಪ್ರಮುಖ ಹೆಜ್ಜೆಯಾಗಿದೆ.
ಮಾದರಿ ಗ್ರಾಮ ರೂಪಿಸುವ ಉದ್ದೇಶದಿಂದ ಈ ಯೋಜನೆ ಜಾರಿಯಾಗಿದ್ದು, ರಸ್ತೆ, ಕುಡಿವ ನೀರು, ಸ್ವಚ್ಛತೆ, ಒಳಚರಂಡಿ ವ್ಯವಸ್ಥೆ, ವಿದ್ಯುತ್, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಗ್ರಾಮೀಣರ ಜೀವನಮಟ್ಟ ಸುಧಾರಿಸುವಲ್ಲಿ ಈ ಯೋಜನೆ ಮಹತ್ವದ ಪಾತ್ರ ವಹಿಸಲಿದೆ ಎಂದರು.
ಗ್ರಾಮಸ್ಥರು ಸ್ವಚ್ಛತೆ, ಆರೋಗ್ಯ ಹಾಗೂ ಶಿಕ್ಷಣದ ಬಗ್ಗೆ ಜಾಗೃತರಾಗಬೇಕು. ಗ್ರಾಮಗಳ ಶಾಶ್ವತ ಅಭಿವೃದ್ಧಿಗೆ ಜನರ ಒಗ್ಗಟ್ಟು ಮತ್ತು ಜವಾಬ್ದಾರಿ ಅಗತ್ಯ. ಯುವಕರು, ಮಹಿಳೆಯರು ಯೋಜನೆ ಸದ್ಬಳಕೆ ಮಾಡಿಕೊಂಡು ಸ್ವಾವಲಂಬಿಯಾಗಬೇಕು. ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರು ಆರ್ಥಿಕವಾಗಿ ಬಲಿಷ್ಠರಾಗಬೇಕು.
ರೈತರು ಆಧುನಿಕ ಕೃಷಿ ತಂತ್ರಜ್ಞಾನಗಳಿಂದ ಉತ್ಪಾದನೆ ಹೆಚ್ಚಿಸಿ ಆದಾಯ ವೃದ್ಧಿಸಿಕೊಳ್ಳಬೇಕು. ಕಾಮಗಾರಿ ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು. ಅಧಿಕಾರಿಗಳು ಸಾರ್ವಜನಿಕರಿಗೆ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆರಿಬಸಪ್ಪ ನಿಡಗುಂದಿ, ಕೆಎಂಎಫ್ ನಿರ್ದೇಶಕ ಹಂಪಯ್ಯಸ್ವಾಮಿ ಹಿರೇಮಠ, ಪಿಡಿಒ ರವಿಕುಮಾರ್ ಲಿಂಗಣ್ಣವರ್, ಕೆಆರ್‌ಐಡಿಎಲ್ ಎಇಇ ಇರ್ಪಾನ್ ನಾಡಗೌಡ್ರು, ಪ್ರಮುಖರಾದ ಶರಣಪ್ಪ ಗಾಂಜಿ, ಡಾ.ಶಿವನಗೌಡ ದಾನರಡ್ಡಿ, ಭೀಮಣ್ಣ ಜರಕುಂಟಿ, ಸಂಗಪ್ಪ ನಿಡಗುಂದಿ, ಪರಸಪ್ಪ ಪೂಜಾರ, ಮಂಜುನಾಥ ಹುಂಡಿ, ಶರಣಗೌಡ ಬಸಾಪೂರ, ಶಂಕರಗೌಡ ಪಾಟೀಲ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net