ಹಂತಹಂತವಾಗಿ ಸರ್ಕಾರಿ ಕಚೇರಿಗಳ ನಿರ್ಮಾಣ

ಕಾರಟಗಿ ಹೊರವಲಯದ ಚಳ್ಳೂರು ರಸ್ತೆಯಲ್ಲಿ 100 ಹಾಸಿಗೆಗಳ ತಾಲೂಕು ಆಸ್ಪತ್ರೆ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಭೂಮಿಪೂಜೆ ನೆರವೇರಿಸಿದರು. ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್, ತಾಲೂಕು ಸಮಿತಿ ಅಧ್ಯಕ್ಷ ದೇವಪ್ಪ ಬಾವಿಕಟ್ಟಿ, ಪುರಸಭೆ ಅಧ್ಯಕ್ಷೆ ರೇಖಾ ಆನೆಹೊಸೂರು, ಉಪಾಧ್ಯಕ್ಷೆ ದೇವಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಈಶಪ್ಪ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಸರ್ಕಾರಿ
  • ಕಚೇರಿ
  • ನಿರ್ಮಿಸಲು
ಕಾರಟಗಿ: ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸಲು ಹಾಗೂ ಆಡಳಿತಾತ್ಮಕ ಅನುಕೂಲಗಳಿಗಾಗಿ ಕಾರಟಗಿ ಮತ್ತು ಕನಕಗಿರಿ ತಾಲೂಕುಗಳಲ್ಲಿ ಎಲ್ಲ ಸರ್ಕಾರಿ ಕಚೇರಿಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಪಟ್ಟಣದಲ್ಲಿ 100 ಹಾಸಿಗೆಗಳ ತಾಲೂಕು ಆಸ್ಪತ್ರೆ, ಪ್ರಜಾಸೌಧ ಹಾಗೂ ಬಸ್‌ಡಿಪೋ ಕಟ್ಟಡ ಕಾಮಗಾರಿಗಳಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಕೆಕೆಆರ್‌ಡಿಬಿ ಹಾಗೂ ಸರ್ಕಾರದ ವಿಶೇಷ ಅನುದಾನದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. 42 ಕೋಟಿ ರೂ.ವೆಚ್ಚದಿಂದ 6 ಎಕರೆಯಲ್ಲಿ 100 ಹಾಸಿಗೆ ತಾಲೂಕು ಆಸ್ಪತ್ರೆ, ಪಟ್ಟಣದ ಹೊರಹೊಲಯದ 12ಎಕರೆ ಸರ್ಕಾರಿ ಭೂಮಿಯಲ್ಲಿ 6ಎಕರೆ ಕ್ರೀಡಾಂಗಣಕ್ಕೆ ಹಾಗೂ 2 ಎಕರೆ ಕೋರ್ಟ್ ನಿರ್ಮಾಣಕ್ಕೆ ಮೀಸಲಿರಿಸಿದ್ದು, 2 ಎಕರೆಯಲ್ಲಿ 6.52 ಕೋಟಿ ರೂ. ವೆಚ್ಚದಲ್ಲಿ ಪ್ರಜಾಸೌಧ ನಿರ್ಮಿಸಲಾಗುತ್ತಿದೆ. ನಿರುಪಯುಕ್ತ ಹಳೆಯ ಬಸ್ ನಿಲ್ದಾಣ ಬಳಿ 6 ಕೋಟಿ ರೂ.ಗಳಲ್ಲಿ 2ಎಕರೆ ಪ್ರದೇಶದಲ್ಲಿ ಬಸ್ ಡಿಪೋ ನಿರ್ಮಾಣ ಮಾಡಲಾಗುತ್ತಿದೆ. ಪಟ್ಟಣದಲ್ಲಿ ಸರ್ಕಾರಿ ಜಮೀನಿನ ಕೊರತೆಯಿದ್ದು, ಹಂತಹಂತವಾಗಿ ಎಲ್ಲ ಸರ್ಕಾರಿ ಕಚೇರಿಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.
ಪುರಸಭೆ ಸದಸ್ಯರಾದ ಹಿರೇಬಸಪ್ಪ ಸಜ್ಜನ್, ಪದ್ಮಾವತಿ, ಆಸ್ಪತ್ರೆಯ ಭೂ ದಾನಿಗಳಾದ ಕೆ.ಸಣ್ಣಸೂಗಪ್ಪ, ಕೆ.ನಾಗಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣೇಗೌಡ ಮಾಲಿಪಾಟೀಲ್, ಪ್ರಮುಖರಾದ ಕೆ.ಎನ್.ಪಾಟೀಲ್, ಶಿವರೆಡ್ಡಿ ನಾಯಕ, ಶರಣಪ್ಪ ಪರಕಿ, ಬೂದಿ ಗಿರಿಯಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net