ಇದರಿಂದ ಬಸವರಾಜರೆಡ್ಡಿ ಅ. 15 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆ.16ರಂದು ಹುಬ್ಬಳ್ಳಿಯ ಎಸ್‌ಡಿಎಂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಪೊಲೀಸರು ಹಾಗೂ ಪಪಂ ಅಧಿಕಾರಿಗಳ ನಿರ್ಲಕ್ಷ್ಯವೇ ಬಸವರಾಜರೆಡ್ಡಿ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿ ಸ್ಥಳೀಯ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದರು. ಬಳ್ಳಾರಿ ವಲಯದ ಐಜಿ ಪಿ.ಎಸ್. ಹರ್ಷ, ಕೊಪ್ಪಳ ಎಸ್ಪಿ ಡಾ. ರಾಮ್ ಎಲ್. ಅರಸಿದ್ದಿ, ವಿಜಯನಗರ ಎಸ್ಪಿ ಜಾಹ್ನವಿ ಸ್ಥಳಕ್ಕೆ ಆಗಮಿಸಿದ್ದರು.