ಶ್ರೀ ಮಾರ್ಕಂಡೇಶ್ವರ ರಥೋತ್ಸವ ಅದ್ದೂರಿ

ಶಿವಪುರದಲ್ಲಿ  ಶ್ರೀ ಮಾಕರ್ಂಡೇಶ್ವರ ಸ್ವಾಮಿಯ ರಥೋತ್ಸವ ಸೋಮವಾರ ಸಂಭ್ರಮದಿಂದ ಜರುಗಿತು.
ಶಿವಪುರದಲ್ಲಿ ಶ್ರೀ ಮಾಕರ್ಂಡೇಶ್ವರ ಸ್ವಾಮಿಯ ರಥೋತ್ಸವ ಸೋಮವಾರ ಸಂಭ್ರಮದಿಂದ ಜರುಗಿತು.
Published on
ಮುನಿರಾಬಾದ್: ಸಮೀಪದ ಶಿವಪುರ ಶ್ರೀ ಮಾಕರ್ಂಡೇಶ್ವರ ಸ್ವಾಮಿ ರಥೋತ್ಸವ ಸೋಮವಾರ ಸಂಭ್ರಮದಿಂದ ಜರುಗಿತು.
ಶ್ರೀಸ್ವಾಮಿಗೆ ವಿಶೇಷ ಅಭಿಷೇಕ, ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮಗಳು ನಡೆದವು. ಗ್ರಾಮದ ಪ್ರಮುಖ ಬೀದಿಗಳನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಹರ ಹರ ಮಹಾದೇವ ಘೋಷಣೆಗಳ ನಡುವೆ, ಸಕಲ ವಾದ್ಯಗೋಷ್ಠಿಗಳೊಂದಿಗೆ ಸ್ವಾಮಿಯ ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಲಾಯಿತು.
ಸಂಜೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಭಕ್ತರು ಉತ್ತತ್ತಿ, ಬಾಳೆಹಣ್ಣು ಹಾಗೂ ಹೂವುಗಳನ್ನು ರಥಕ್ಕೆ ಅರ್ಪಿಸಿ ಭಕ್ತಿ ಸಮರ್ಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net