ಅಳವಂಡಿ ಶ್ರೀ ಸಿದ್ಧೇಶ್ವರ ಪದವಿ ಪೂರ್ವ ಕಾಲೇಜನಲ್ಲಿ ದ್ವಿತೀ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತಾ ಪೂರ್ವ ತಯಾರಿ ಕಾರ್ಯಾಗಾರವನ್ನು ಸಸಿಗೆ ನೀರು ಹಾಕಿ ಚಾಲನೆ ನೀಡಲಾಯಿತು. ಪ್ರಮುಖರಾದ ಪ್ರಕಾಶ ಸ್ವಾಮಿ ಇನಾಮದಾರ, ಡಿ.ಜಿ.ಲಕ್ಕನಗೌಡರ, ಗುರುರಾಜ ಹಂಚಿನಾಳ, ಪೀರ ಸಾಹೇಬ ತಪ್ಪಡಿ ಇತರರಿದ್ದರು.
ಅಳವಂಡಿ: ವಿದ್ಯಾರ್ಥಿಗಳು ಪರೀಕ್ಷಾ ಭಯ ಹೋಗಲಾಡಿಸಿ, ಆತ್ಮವಿಶ್ವಾಸದಿಂದ ಪಾಠಗಳನ್ನು ಮನನ ಮಾಡಿ ಪರೀಕ್ಷೆಯಲ್ಲಿ ಯಶಸ್ಸುಗಳಿಸಬೇಕು ಎಂದು ಕರ್ನಾಟಕ ವಿದ್ಯಾವರ್ಧಕ ಸಮಿತಿ ವ್ಯವಸ್ಥಾಪಕ ಪ್ರಕಾಶ ಸ್ವಾಮಿ ಇನಾಮದಾರ್ ಹೇಳಿದರು.
ಗ್ರಾಮದ ಶ್ರೀ ಸಿದ್ಧೇಶ್ವರ ಪದವಿ ಪೂರ್ವ ಕಾಲೇಜನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತಾ ಪೂರ್ವ ತಯಾರಿ ಕಾರ್ಯಾಗಾರವನ್ನು ಸಸಿಗೆ ನೀರು ಹಾಕಿ ಚಾಲನೆ ನೀಡಿ ಭಾನುವಾರ ಮಾತನಾಡಿದರು.
ಕಠಿಣ ವಿಷಯಗಳಿಗೆ ಹೆಚ್ಚು ಸಮಯ ನೀಡಿ. ಅವುಗಳಲ್ಲಿ ಉತ್ತಮ ಅಂಕ ಗಳಿಸಲು ಪ್ರಯತ್ನಿಸಿ. ಹಿಂದಿನ ಪ್ರಶ್ನೆ ಪತ್ರಿಕೆಗಳ ಅಭ್ಯಾಸ ಮಾಡಿ. ವಿಷಯದ ತಯಾರಿಗೆ ಪಠ್ಯಕ್ರಮವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಬೇಕು ಹಾಗೂ ಏಕಾಗ್ರತೆಯಿಂದ ಅಭ್ಯಾಸ ಮಾಡಬೇಕು. ನಿರ್ದಿಷ್ಟ ವೇಳಾಪಟ್ಟಿ ತಯಾರಿಸಿ, ಪ್ರತಿಯೊಂದು ವಿಷಯಕ್ಕೂ ಸಮಯ ನಿಗದಿಪಡಿಸಿ ಅಭ್ಯಾಸ ಮಾಡಿ ಪರೀಕ್ಷೆಯಲ್ಲಿ ಯಶಸ್ಸುಗಳಿಸಿ ಎಂದರು.
ಉಪನ್ಯಾಸಕರಾದ ಗುರುರಾಜ ಹಂಚಿನಾಳ ಹಾಗೂ ಪೀರ್ ಸಾಹೇಬ್ ತಪ್ಪಡಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ಸಿದ್ಧತೆ ಕುರಿತು ಮಾಹಿತಿ ನೀಡಿದರು.