ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸೋಮವಾರ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಂಸ್ಥಾಪಕ ದಿನಾಚರಣೆಯನ್ನು ಆಚರಿಸಲಾಯಿತು. ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಹುಲಿಗೆಮ್ಮ, ವಾಣಿಜ್ಯಶಾಸ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಮಿತ್ರಾ, ದೈಹಿಕ ಶಿಕ್ಷಣ ಶಿಕ್ಷಕ ಡಾ. ಪ್ರದೀಪ್ ಕುವಾರ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ನರಸಿಂಹ, ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಮಯ್ಯ ಇತರರಿದ್ದರು.
ಕೊಪ್ಪಳ: ಜಗತ್ತಿನ ಎಲ್ಲ ಧರ್ಮಗಳು ಪ್ರೀತಿ ಮತ್ತು ಶಾಂತಿಯನ್ನು ಸಾರುತ್ತವೆ. ಪ್ರತಿ ಧರ್ಮದ ಸಾರ ಶಾಂತಿ ಮತ್ತು ಪ್ರೀತಿಯೇ ಆಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಾಣಿಜ್ಯಶಾಸ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಮಿತ್ರಾ ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಂಸ್ಥಾಪಕ ದಿನಾಚರಣೆ ಮತ್ತು ಸರ್ವ ಧರ್ಮ ಪ್ರಾರ್ಥನೆ ಸವಾರಂಭದಲ್ಲಿ ವಾತನಾಡಿದರು.
ಧರ್ಮಗಳಲ್ಲಿರುವ ಒಳ್ಳೆಯ ವಿಚಾರಗಳನ್ನು ಮತ್ತು ನೀತಿಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ನಮ್ಮ ಧರ್ಮ ಮತ್ತು ಸಂಸ್ಕೃತಿಯನ್ನು ಗೌರವಿಸಬೇಕು. ಎಲ್ಲರೂ ಉನ್ನತ ಶಿಕ್ಷಣ ಪಡೆಯಬೇಕು. ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು. ಇದರಿಂದ ಜೀವನದಲ್ಲಿ ನೆಮ್ಮದಿಯಿಂದ ಜೀವನ ವಾಡಬಹುದು ಎಂದರು.
ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಹುಲಿಗೆಮ್ಮ ವಾತನಾಡಿ, ಧರ್ಮಗಳ ಆಚರಣೆ ಮನಸಿಗೆ ತೃಪ್ತಿ ನೀಡುತ್ತವೆ. ಧರ್ಮಗಳಿಂದ ಸಂಹಿಷ್ಣತೆ ಬೆಳೆಯುತ್ತದೆ. ನಾವೆಲ್ಲರೂ ಧರ್ಮ ಸ್ಥಾಪಕರನ್ನು ನೆನೆಯಬೇಕು ಎಂದರು.
ದೈಹಿಕ ಶಿಕ್ಷಕ ಡಾ. ಪ್ರದೀಪ್ ಕುವಾರ ವಾತನಾಡಿ, ಸ್ಕೌಟ್ಸ್ ಆ್ಯಂಡ್ ಗೈಡ್ಸ್ ವಿದ್ಯಾರ್ಥಿಗಳು ಶಿಸ್ತು ಮತ್ತು ಒಳ್ಳೆಯ ವ್ಯಕ್ತಿತ್ವವನ್ನು ಬೆಳಿಸಿಕೊಳ್ಳಬೇಕು. ಅವಕಾಶಗಳನ್ನು ಉಪಯೋಗ ವಾಡಿಕೊಂಡು ಜೀವನದಲ್ಲಿ ಯಶಸ್ವಿಯಾಗಬೇಕು. ಯಾವಾಗಲೂ ಧನಾತ್ಮಕವಾಗಿ ಆಲೋಚನೆ ವಾಡಬೇಕು ಎಂದರು.