ಇದರೊಂದಿಗೆ ವೇದಿಕೆ ನಿಮಾರ್ಣ, ಕುಳಿತುಕೊಳ್ಳುವ ವ್ಯವಸ್ಥೆ, ಕುಡಿಯುವ ನೀರು, ವಿದ್ಯುತ್, ವಾಹನ ನಿಲುಗಡೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕಾರ್ಯವೂ ಪ್ರಗತಿಯಲ್ಲಿದೆ. ಗ್ರಾಮದ ಪ್ರಮುಖ ರಸ್ತೆಗಳನ್ನು ಸ್ವಚ್ಛಗೊಳಿಸುವುದರ ಜತೆಗೆ ಸಮ್ಮೇಳನ ನಡೆಯುವ ಸ್ಥಳದಲ್ಲಿ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.