ಗವಿಶ್ರೀ ಜಾತ್ರೆಗೆ ಸಿದ್ಧತೆ ಮಾಡಿಕೊಳ್ಳಿ, ಡಿಸಿ ಡಾ.ಸುರೇಶ ಇಟ್ನಾಳ ಸೂಚನೆ

ಗವಿಸಿದ್ಧೇಶ್ವರ ಜಾತ್ರೆ ಅಂಗವಾಗಿ ಗುರುವಾರ ಕೊಪ್ಪಳದಲ್ಲಿ ಡಿಸಿ ಡಾ.ಸುರೇಶ ಬಿ.ಇಟ್ನಾಳ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಜಿಪಂ ಸಿಇಒ ವರ್ಣಿತ್​ ನೇಗಿ, ಎಸ್ಪಿ ಡಾ.ರಾಮ್​ ಎಲ್​.ಅರಸಿದ್ದಿ, ಎಡಿಸಿ ಸಿದ್ರಾಮೇಶ್ವರ, ಎಸಿ ಕ್ಯಾ.ಮಹೇಶ ಮಾಲಗಿತ್ತಿ ಇದ್ದರು.
ಗವಿಸಿದ್ಧೇಶ್ವರ ಜಾತ್ರೆ ಅಂಗವಾಗಿ ಗುರುವಾರ ಕೊಪ್ಪಳದಲ್ಲಿ ಡಿಸಿ ಡಾ.ಸುರೇಶ ಬಿ.ಇಟ್ನಾಳ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಜಿಪಂ ಸಿಇಒ ವರ್ಣಿತ್​ ನೇಗಿ, ಎಸ್ಪಿ ಡಾ.ರಾಮ್​ ಎಲ್​.ಅರಸಿದ್ದಿ, ಎಡಿಸಿ ಸಿದ್ರಾಮೇಶ್ವರ, ಎಸಿ ಕ್ಯಾ.ಮಹೇಶ ಮಾಲಗಿತ್ತಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಡಿಸಿ ಡಾ.ಸುರೇಶ ಇಟ್ನಾಳ ಸೂಚನೆ
  • ಜಾತ್ರೆ ಪೂರ್ವಸಿದ್ಧತಾ ಸಭೆ
ಕೊಪ್ಪಳ: ಗವಿಸಿದ್ಧೇಶ್ವರ ಜಾತ್ರೋತ್ಸವ 2026ರ ಜನೆವರಿ 5ರಿಂದ ನಡೆಯಲಿದ್ದು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ ಅಧಿಕಾರಿಗಳಿಗೆ ಸೂಚಿಸಿದರು.
ಜಾತ್ರೆ ಅಂಗವಾಗಿ ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಗುರುವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ದಕ್ಷಿಣ ಭಾರತದ ಕುಂಭ ಮೇಳ ಎಂದೇ ಪ್ರಸಿದ್ಧವಾದ ಜಾತ್ರೆಗೆ ವಿವಿಧೆಡೆಯಿಂದ ಲಾಂತರ ಭಕ್ತರು ಬರುತ್ತಾರೆ. ಕುಡಿವ ನೀರು, ಪಾರ್ಕಿಂಗ್​, ವಿದ್ಯುತ್​ ಸೇರಿ ಇತರ ಮೂಲ ಸೌಕರ್ಯ ಕಲ್ಪಿಸಿ. ಜಾತ್ರೆ ಶಾಂತಿ ಹಾಗೂ ವ್ಯವಸ್ಥಿತವಾಗಿ ನಡೆಯಬೇಕು. ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ನೀಡಲಾಗುವುದು. ವಿವಿಧ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿ ಜವಾಬ್ದಾರಿ ಹಂಚಿಕೆ ಮಾಡಲಾಗುವುದು ಎಂದರು.
ರಥೋತ್ಸವ ಹಾಗೂ ಬಾಕಿ ದಿನಗಳಲ್ಲಿಯೂ ನಿತ್ಯ ಲಾಂತರ ಮಂದಿ ಬರುತ್ತಾರೆ. ಭದ್ರತೆಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿ. ತುರ್ತು ಸೇವೆಗೆ ಮಠದ ಆವರಣದಲ್ಲಿ ಆ್ಯಂಬುಲೆನ್ಸ್​, ಅಗ್ನಿ ಶಾಮಕ ವಾಹನಗಳನ್ನು ಕಾಯ್ದಿರಿಸಿ. ಸಾರಿಗೆಗೆ ಅನುಕೂಲವಾಗುವಂತೆ ಬ್ಯಾರಿಕೇಡ್​ ಅಳವಡಿಸಿ. ನಿರಂತರ ದಾಸೋಹ, ಸಾಂಸತಿಕ ಕಾರ್ಯಕ್ರಮ ನಡೆವ ಕಾರಣ ನಗರಸಭೆಯಿಂದ ಪೌರ ಕಾರ್ಮಿಕರನ್ನು ನಿಯೋಜಿಸಿ. ಈಗಿನಿಂದಲೇ ಮೂಲ ಸೌಕರ್ಯ ಕಲ್ಪಿಸಲು ಮುಂದಾಗಿ. ವಿದ್ಯುತ್​ ಅವಡಗಳಾಗದಂತೆ ಜೆಸ್ಕಾಂ ಅಧಿಕಾರಿಗಳು ಎಚ್ಚರವಹಿಸುವಂತೆ ತಾಕೀತು ಮಾಡಿದರು.
ಜಿಪಂ ಸಿಇಒ ವರ್ಣಿತ್​ ನೇಗಿ ಮಾತನಾಡಿ, ಆರೋಗ್ಯ ಹಾಗೂ ಆಹಾರ ಸುರಕ್ಷಾ ಅಧಿಕಾರಿಗಳು ಗವಿಮಠದ ಅಡುಗೆ ಸಿಬ್ಬಂದಿ ಜತೆಗೆ ವಿಶೇಷ ಸಭೆ ನಡೆಸಿ. ಆಹಾರ ಸುರಾ ಕ್ರಮಗಳ ಬಗ್ಗೆ ವಿವರಿಸಿ. ತುರ್ತು ಆರೋಗ್ಯ ಘಟಕ ಸ್ಥಾಪಿಸಿ ವೈದ್ಯರನ್ನು ನಿಯೋಜಿಸಿ. ಮಹಾದಾಸೋಹ ಸಂಪರ್ಕ ರಸ್ತೆ, ಜಾತ್ರೆ ಅಂಗಡಿ, ತೇರು ಸಾಗುವ ಆವರಣ, ವಾಹನ ಪಾರ್ಕಿಂಗ್​ ಸ್ಥಳಗಳಲ್ಲಿ ಕಸ ವಿಲೇವಾರಿ ಮಾಡಿ ಧೂಳು ಬಾರದಂತೆ ಕ್ರವಹಿಸಲು ನಿರ್ದೇಶಿಸಿದರು.
ಎಸ್ಪಿ ಡಾ.ರಾಮ್​ ಎಲ್​.ಅರಸಿದ್ದಿ ಮಾತನಾಡಿ, ಜಾತ್ರೆ ದೊಡ್ಡ ಪ್ರಮಾಣದಲ್ಲಿ ನಡೆವ ಕಾರಣ ಅಗತ್ಯ ಭದ್ರತೆ ಕಲ್ಪಿಸಲಾಗುವುದು. ಪೊಲೀಸರನ್ನು ನಿಯೋಜಿಸಿ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುತ್ತೇವೆ. ವಾಹನಗಳ ಪಾರ್ಕಿಂಗ್​ ನಿರ್ಮಿಸಿ ಟ್ರಾಫಿಕ್​ ಸಮಸ್ಯೆ ಆಗದಂತೆ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಸಹಾಯಕ ಆಯುಕ್ತ ಮಹೇಶ್​ ಮಾಲಗಿತ್ತಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರು, ಡಿಎಚ್​ಒ ಡಾ.ಟಿ.ಲಿಂಗರಾಜು, ಡಿಡಿಪಿಐ ಸೋಮಶೇಖರಗೌಡ ಪಾಟೀಲ್​, ಡಿಡಿಪಿಯು ಜಗದೀಶ ಜಿ.ಎಚ್​., ತಹಸೀಲ್ದಾರ್​ ವಿಠ್ಠಲ್​ ಚೌಗಲಾ, ನಗರಸಭೆ ಪೌರಾಯುಕ್ತ ವೆಂಕಟೇಶ ನಾಗನೂರು ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net