ಅಳವಂಡಿ ಗ್ರಾಪಂ ಸಭಾಭವನದಲ್ಲಿ ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿ ಸಭೆ ನಡೆಯಿತು. ಗ್ರಾಪಂ ಅಧ್ಯಕ್ಷೆ ಶಂಕ್ರಮ್ಮ ಜೋಗಿನ, ಪಿಡಿಒ ಕೊಟ್ರಪ್ಪ ಅಂಗಡಿ, ಅಂಗನವಾಡಿ ಮೇಲ್ವಿಚಾರಕಿ ರೆಹಮತ್ ಬೀ, ಆರೋಗ್ಯ ನಿರೀಕ್ಷಣಾಧಿಕಾರಿ ರವೀಂದ್ರ ಕಮ್ಮಾರ, ಸಿಆರ್‌ಪಿ ವಿಜಯಕುಮಾರ ಟಿಕಾರೆ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಮಕ್ಕಳ ರಕ್ಷಣೆ
ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿ ಸಭೆ
ಮಹಿಳೆ-ಮಕ್ಕಳ ರಕ್ಷಣೆ ಎಲ್ಲರ ಹೊಣೆ
ಅಳವಂಡಿ: ಮಹಿಳೆಯರು ಮತ್ತು ಮಕ್ಕಳ ಸುರಕ್ಷಿತ ಜೀವನಕ್ಕಾಗಿ ಸರ್ಕಾರ ಪ್ರತಿ ಗ್ರಾಪಂ ಮಟ್ಟದಲ್ಲಿ ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿ ರಚಿಸಿದೆ ಎಂದು ಪಿಡಿಒ ಕೊಟ್ರಪ್ಪ ಅಂಗಡಿ ತಿಳಿಸಿದರು.
ಗ್ರಾಮದ ಗ್ರಾಪಂ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿ ಸಭೆಯಲ್ಲಿ ಮಂಗಳವಾರ ಮಾತನಾಡಿದರು.
ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿಯಂಥ ಶೋಷಣೆ ತಡೆಗಟ್ಟಿ ಮಹಿಳೆಯರು ಹಾಗೂ ಮಕ್ಕಳ ಸ್ನೇಹಿ ವಾತಾವರಣ ನಿರ್ಮಿಸಬೇಕು. ಅವರ ರಕ್ಷಣೆ ಎಲ್ಲರ ಹೊಣೆ ಎಂದರು.
ಅಂಗನವಾಡಿ ಮೇಲ್ವಿಚಾರಕಿ ರೆಹಮತ್ ಬೀ ಮಾತನಾಡಿ, ಬಾಲ್ಯ ವಿವಾಹ ಅನಿಷ್ಟ ಪದ್ಧತಿಯಾಗಿದ್ದು, ಅದನ್ನು ನಿರ್ಮೂಲನೆ ಮಾಡುವುದು ಎಲ್ಲರ ಕರ್ತವ್ಯ. ಮಕ್ಕಳ ಹಕ್ಕುಗಳನ್ನು ರಕ್ಷಿಸಿ, ಮಕ್ಕಳ ಸಾಗಣಿಕೆ ತಡೆಗಟ್ಟಬೇಕು. ಇಂತಹ ಘಟನೆಗಳು ಕಂಡುಬಂದರೆ ಗ್ರಾಪಂ, ಪೊಲೀಸ್ ಠಾಣೆ ಅಥವಾ ಮಕ್ಕಳ ಸಹಾಯವಾಣಿ 1098ಗೆ ದೂರು ನೀಡಬೇಕು ಎಂದು ತಿಳಿಸಿದರು.