ಯುವತಿಗೆ ವಂಚಿಸಿದ ಶಿಕ್ಷಕ ಬಸವರಾಜ ಕಟ್ಟಿಮನಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್‌ಎ್ಐ ತಾಲೂಕು ಸಮಿತಿ ಸದಸ್ಯರು ಗಂಗಾವತಿ ನಗರ ಪಿಐ ಪ್ರಕಾಶ ಮಾಳಿಗೆ ಮಂಗಳವಾರ ಮನವಿ ಸಲ್ಲಿಸಿದರು. ಸಮಿತಿ ಜಿಲ್ಲಾಧ್ಯಕ್ಷ ಶಿವಕುಮಾರ ಈಚನಾಳ್, ವಿವಿಧ ಸಂಘಟನೆ ಪದಾಧಿಕಾರಿಗಳಾದ ಬಿ.ಗ್ಯಾನೇಶ ಕಡಗದ್, ಎಂ.ಬಸವರಾಜ, ಬಾಳಪ್ಪ ಹುಲಿಹೈದರ್, ಮುತ್ತಣ್ಣ, ನಿರುಪಾದಿ ಬೆಣಕಲ್, ಮಂಜುನಾಥ ಡಗ್ಗಿ ಇತರರಿದ್ದರು.
ಗಂಗಾವತಿ: ಮದುವೆಯಾಗುವುದಾಗಿ ಯುವತಿಗೆ ವಂಚಿಸಿದ ಶಿಕ್ಷಕ ಬಸವರಾಜ ಕಟ್ಟಿಮನಿ ಇತರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಎಸ್‌ಎ್ಐ ತಾಲೂಕು ಸಮಿತಿ ಸದಸ್ಯರು ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ ನಗರ ಪಿಐ ಪ್ರಕಾಶ ಮಾಳಿಗೆ ಮನವಿ ಸಲ್ಲಿಸಿದರು.
ಸಮಿತಿ ಜಿಲ್ಲಾಧ್ಯಕ್ಷ ಶಿವಕುಮಾರ ಈಚನಾಳ್ ಮಾತನಾಡಿ, ಕನಕಗಿರಿ ತಾಲೂಕಿನ ಗ್ರಾಮವೊಂದರ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿದ ಬಸವರಾಜ ಕಟ್ಟಿಮನಿ, ಹಲವು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಶಿಕ್ಷಕ ಹುದ್ದೆ ದೊರೆತ ನಂತರ ಯುವತಿಯನ್ನು ದೂರ ಮಾಡಿದ್ದು, ಹಿರಿಯ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಸಿದರೂ ಇನ್ನೊಬ್ಬರೊಂದಿಗೆ ಮದುವೆಯಾಗಿ ನೋಂದಣಿ ಮಾಡಿಸಿದ್ದಾರೆ. ಯುವತಿ ಕುಟುಂಬದವರು ವಿಚಾರಿಸಲು ಹೋದರೆ ಯುವತಿಗೆ ಸಂಬಂಧಿಸಿದ ಸಂಭಾಷಣೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಬಗ್ಗೆ ಬೆದರಿಕೆ ಹಾಕುತ್ತಿದ್ದಾನೆ. ಈಗಾಗಲೇ ಕನಕಗಿರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಇದುವರೆಗೆ ಯಾರನ್ನೂ ಬಂಧಿಸಿಲ್ಲ. ಬಸವರಾಜ ಕಟ್ಟಿಮನಿ ಮತ್ತು ಸಹಕರಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.