ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಲಿ

ಇಂಧನ ದರ ಏರಿಕೆ ಖಂಡಿಸಿ ಸಿಐಟಿಯು ಜಿಲ್ಲಾ ಸಮಿತಿ ಸದಸ್ಯರು ಗಂಗಾವತಿ ತಾಲೂಕಾಡಳಿತ ಸೌಧದ ಮುಂದೆ ಸೋಮವಾರ ಪ್ರತಿಭಟನೆ ನಡೆಸಿ ಶಿರಸ್ತೇದಾರ್ ರವಿಕುಮಾರ ನಾಯಕ್ವಾಡಿಗೆ ಮನವಿ ಸಲ್ಲಿಸಿದರು. ರಾಜ್ಯ ಕಾರ್ಯದರ್ಶಿ ನಿರುಪಾದಿ ಬೆಣಕಲ್, ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಡಗ್ಗಿ, ಪದಾಧಿಕಾರಿಗಳಾದ ಸೈಯದ್ ಅಮೀನುದ್ದೀನ್, ಶಿವಕುಮಾರ ಇತರರಿದ್ದರು.
ಇಂಧನ ದರ ಏರಿಕೆ ಖಂಡಿಸಿ ಸಿಐಟಿಯು ಜಿಲ್ಲಾ ಸಮಿತಿ ಸದಸ್ಯರು ಗಂಗಾವತಿ ತಾಲೂಕಾಡಳಿತ ಸೌಧದ ಮುಂದೆ ಸೋಮವಾರ ಪ್ರತಿಭಟನೆ ನಡೆಸಿ ಶಿರಸ್ತೇದಾರ್ ರವಿಕುಮಾರ ನಾಯಕ್ವಾಡಿಗೆ ಮನವಿ ಸಲ್ಲಿಸಿದರು. ರಾಜ್ಯ ಕಾರ್ಯದರ್ಶಿ ನಿರುಪಾದಿ ಬೆಣಕಲ್, ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಡಗ್ಗಿ, ಪದಾಧಿಕಾರಿಗಳಾದ ಸೈಯದ್ ಅಮೀನುದ್ದೀನ್, ಶಿವಕುಮಾರ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಿಐಟಿಯು ಜಿಲ್ಲಾ ಸಮಿತಿ ಒತ್ತಾಯ
ಗಂಗಾವತಿ: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಭಾಗವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಒತ್ತಾಯಿಸಿ ಸಿಐಟಿಯು ಜಿಲ್ಲಾ ಸಮಿತಿ ಸದಸ್ಯರು ತಾಲೂಕಾಡಳಿತ ಸೌಧದ ಮುಂದೆ ಸೋಮವಾರ ಮಹಾತ್ಮಗಾಂಧಿ ಆಟೋಚಾಲಕರ ಸಂಘದ ಸದಸ್ಯರೊಂದಿಗೆ ಪ್ರತಿಭಟನೆ ನಡೆಸಿ ಶಿರಸ್ತೇದಾರ್ ರವಿಕುಮಾರ ನಾಯಕ್ವಾಡಿಗೆ ಮನವಿ ಸಲ್ಲಿಸಿದರು.
ಸಮಿತಿ ರಾಜ್ಯ ಕಾರ್ಯದರ್ಶಿ ನಿರುಪಾದಿ ಬೆಣಕಲ್ ಮಾತನಾಡಿ, ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದ್ದು, ಹಲವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಗರಣದ ತನಿಖೆ ಮತ್ತು ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹದಲ್ಲಿ ಹೋರಾಟ ಸೋನಂ ವಾಂಗ್ಚುಕ್‌ರನ್ನು ಬಲವಂತವಾಗಿ ಬಂಧಿಸಿದ್ದು, ಸಂವಿಧಾನ ವಿರೋಧಿಯಾಗಿದೆ. ಹೋರಾಟ ಹತ್ತಿಕ್ಕಲು ಕೇಂದ್ರ ಸರ್ಕಾರ ಸಂಚು ನಡೆಸಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಶಿಕ್ಷಣ ವ್ಯವಸ್ಥೆ ಪಾರದರ್ಶಕತೆ ಕಾಪಾಡುವಲ್ಲಿ ವಿಲವಾದ ಎನ್‌ಟಿಎ ಸಂಸ್ಥೆಯನ್ನು ರದ್ದುಪಡಿಸಬೇಕು.
ಇಂಧನ ಬೆಲೆ ಹೆಚ್ಚಳದಿಂದ ವಾಹನ ಚಾಲಕ ಮತ್ತು ಮಾಲೀಕರ ಮೇಲೆ ಪರಿಣಾಮ ಬೀರುತ್ತಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಕಚ್ಚಾವಸ್ತುಗಳ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಡಿಮೆಯಿದ್ದರೂ, ರಾಜ್ಯ ಮತ್ತು ಕೇಂದ್ರ ಸರ್ಕಾರ ಅನಗತ್ಯ ತೆರಿಗೆ ಹಾಕುವ ಮೂಲಕ ಬೆಲೆ ಏರಿಕೆಗೆ ಕಾರಣವಾಗಿವೆ. ಇಂಧನ ಬೆಲೆ ಏರಿಕೆ ನಿಯಂತ್ರಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಡಗ್ಗಿ, ವಿವಿಧ ಸಂಘಟನೆ ಪದಾಧಿಕಾರಿಗಳಾದ ಕೃಷ್ಣಪ್ಪ, ಮುತ್ತಣ್ಣ, ಶಂಕರ, ಶಿವಕುಮಾರ, ಕನಕರಾಯ, ಈರಣ್ಣ, ಸೈಯದ್ ಅಮೀನುದ್ದೀನ್, ಮಂಜುನಾಥ, ದುರಗಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net