ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಬಂಧನ ಖಂಡಿಸಿ ಎಸ್‌ಎ್ಐ ತಾಲೂಕು ಸಮಿತಿ ಸದಸ್ಯರು ಗಂಗಾವತಿ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ ಶಿರಸ್ತೇದಾರ್ ಪ್ರಕಾಶನಾಯ್ಕಗೆ ಮನವಿ ಸಲ್ಲಿಸಿದರು. ಸಮಿತಿ ಜಿಲ್ಲಾ ಕಾರ್ಯದರ್ಶಿ ಬಾಲಾಜಿ ಚಳ್ಳಾರಿ, ತಾಲೂಕಾಧ್ಯಕ್ಷ ಯು.ನಾಗರಾಜ್, ಪದಾಧಿಕಾರಿಗಳಾದ ಎಂ.ಪಿ.ಶರ್ೀ, ದರ್ಶನ ಹೊಸ್ಕೇರಾ, ಸದಸ್ಯರಾದ ಉಷಾ, ಪಾರ್ವತಿ, ನಂದಿತಾ ಇತರರಿದ್ದರು.
ಗಂಗಾವತಿ: ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸಿರುವ ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಬಂಧನ ಖಂಡಿಸಿ ಎಸ್‌ಎ್ಐ ತಾಲೂಕು ಸಮಿತಿ ಸದಸ್ಯರು ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಮಂಗಳವಾರ ಲಯನ್ಸ್ ಪಿಯು ಕಾಲೇಜು ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ನಡೆಸಿ ಶಿರಸ್ತೇದಾರ್ ಪ್ರಕಾಶನಾಯ್ಕಗೆ ಮನವಿ ಸಲ್ಲಿಸಿದರು.
ಸಮಿತಿ ಜಿಲ್ಲಾ ಕಾರ್ಯದರ್ಶಿ ಬಾಲಾಜಿ ಚಳ್ಳಾರಿ ಮಾತನಾಡಿ, ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದ್ದು, ಅವ್ಯವಹಾರಕ್ಕೆ ಕಾರಣವಾಗಿರುವ ಎನ್‌ಟಿಎ ಸಂಸ್ಥೆ ರದ್ದುಗೊಳಿಸಬೇಕು. ನೈತಿಕ ಹೊಣೆಹೊತ್ತು ಕೇಂದ್ರದ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ಹಕ್ಕೋತ್ತಾಯಗಳಿಗಾಗಿ ಉಪವಾಸ ಸತ್ಯಾಗ್ರಹ ಕೈಗೊಂಡ ತಜ್ಞ ಸೋನಂ ವಾಗ್ಚುಂಕ್‌ರನ್ನು ಕೇಂದ್ರ ಸರ್ಕಾರ ಬಲವಂತವಾಗಿ ಬಂಧಿಸಿತ್ತಲ್ಲದೇ, ಹೋರಾಟದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳ ಮೇಲೆ ಅಮಾನವೀಯ ರೀತಿಯಲ್ಲಿ ಲಾಠಿ ಚಾರ್ಜ್ ಮಾಡಿಸಿದೆ ಎಂದು ದೂರಿದರು.
ಶಾಂತಿಯುತ ಧರಣಿ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಬಲವಂತವಾಗಿ ವಶಕ್ಕೆ ಪಡೆದಿದ್ದು ಸಂವಿಧಾನ ವಿರೋಧಿಯಾಗಿದೆ. ಸರ್ಕಾರವು ಶಾಂತಿಯುತ ಪ್ರತಿಭಟನೆಗಳಿಗೆ ಸಂವಾದ ಮತ್ತು ಹೊಣೆಗಾರಿಕೆಯ ಮೂಲಕ ಸ್ಪಂದಿಸಬೇಕೆ ವಿನಃ ಬಲಪ್ರಯೋಗ ಮತ್ತು ಬೆದರಿಕೆಯ ಮೂಲಕವಲ್ಲ. ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಕೋಟಿ ರೂ. ಪರಿಹಾರ, ಎನ್‌ಟಿಎ ಸಂಸ್ಥೆ ರದ್ದುಪಡಿಸುವುದು, ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡುವುದು ಮತ್ತು ನೀಟ್ ಹಗರಣವನ್ನು ನ್ಯಾಯಾಂಗ ತನಿಖೆಗೊಳಪಡಿಸುವಂತೆ ಒತ್ತಾಯಿಸಿದರು.
ಸಮಿತಿ ತಾಲೂಕಾಧ್ಯಕ್ಷ ಯು.ನಾಗರಾಜ್, ಪದಾಧಿಕಾರಿಗಳಾದ ಎಂ.ಪಿ.ಶರ್ೀ, ದರ್ಶನ ಹೊಸ್ಕೇರಾ, ಸದಸ್ಯರಾದ ಉಷಾ, ಪಾರ್ವತಿ, ನಂದಿತಾ, ಸಿಂಧೂ, ರಂಜನ್, ಸುಮಂತ, ನಂದೀಶ, ರಾಜಾಭಕ್ಷಿ, ವಿನೋದ ಇತರರಿದ್ದರು.