ರಾವೇಂದ್ರ ಹಿಟ್ನಾಳಗೆ ಸಚಿವಸ್ಥಾನ ನೀಡುವಂತೆ ಆಗ್ರಹಿಸಿ ನಗರದ ಗೌರಿಶಂಕರ ದೇವಸ್ಥಾನದಿಂದ ಅಶೋಕ ವೃತ್ತದವರೆಗೆ ಮೆರವಣಿಗೆ ನಡೆಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರಾದ ಕಿಶೋರಿ ಭುದಿನೂರ, ಕೆ.ಎಂ.ಸೈಯದ್, ವೀರಪ್ಪ ನವೋದಯ, ಮಲ್ಲು ಪೂಜಾರ, ಭರಮಪ್ಪ ನಗರ, ಅಮ್ಜದ್ ಪಟೇಲ್, ಕಾಟನ್ ಪಾಷಾ, ಮಾನ್ವಿ ಪಾಷಾ, ಕೃಷ್ಣರಡ್ಡಿ ಗಲಬಿ ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಕೊಪ್ಪಳ : ಕ್ಷೇತ್ರದ ಶಾಸಕ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಹಿಟ್ನಾಳ ಅಭಿಮಾನಿಗಳು ಸೋಮವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಗರದ ಗೌರಿಶಂಕರ ದೇವಸ್ಥಾನದಿಂದ ಅಶೋಕ ವೃತ್ತದವರೆಗೆ ಮೆರವಣಿಗೆ ನಡೆಸಿ ಅಶೋಕ ವೃತ್ತದಲ್ಲಿ ದ್ವಿಚಕ್ರ ವಾಹನ ಹಾಗೂ ಟೈರ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು. ಮುಖ್ಯಮಂತ್ರಿ ನೇತೃತ್ವದ ಸಚಿವ ಸಂಪುಟದಲ್ಲಿ ಮೊದಲ ಹಂತದಲ್ಲೇ ರಾಘವೇಂದ್ರ ಹಿಟ್ನಾಳಗೆ ಸಚಿವ ಸ್ಥಾನ ದೊರೆಯಲಿದೆ ಎಂಬ ನಿರೀಕ್ಷೆ ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿತ್ತು. ಆದರೆ ಸಚಿವರ ಪಟ್ಟಿಯಲ್ಲಿ ಹೆಸರು ಪ್ರಕಟವಾಗದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ.
ಕಲ್ಯಾಣ ಕರ್ನಾಟಕ ಭಾಗದ 40 ವಿಧಾನಸಭಾ ಕ್ಷೇತ್ರಗಳಲ್ಲಿ ಕುರುಬ ಸಮುದಾಯದಿಂದ ಆಯ್ಕೆಯಾದ ಏಕೈಕ ಶಾಸಕ ರಾಘವೇಂದ್ರ ಹಿಟ್ನಾಳ. ಸತತ ಮೂರು ಬಾರಿ ಗೆಲುವು ಸಾಧಿಸಿ ಜನಮನ್ನಣೆ ಪಡೆದಿದ್ದಾರೆ. ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಕೊಪ್ಪಳವನ್ನು ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಪ್ರತಿಭಟನಾಕಾರರು ಸರ್ಕಾರದ ಗಮನ ಸೆಳೆಯಲು ಘೋಷಣೆಗಳನ್ನು ಕೂಗಿ ತಮ್ಮ ಒತ್ತಾಯವನ್ನು ವ್ಯಕ್ತಪಡಿಸಿದರು.
ಈ ಹಿಂದೆ ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಹಿಟ್ನಾಳ ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಜಿಲ್ಲೆ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿದ್ದಾರೆ. ಇಂತಹ ಹಿರಿಯ ಹಾಗೂ ಜನಪ್ರಿಯ ನಾಯಕನನ್ನು ಸಚಿವ ಸಂಪುಟದ ಎರಡನೇ ಪಟ್ಟಿಯಲ್ಲಿ ಸೇರಿಸಿ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.