ಹೊರಗುತ್ತಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆ

ಕೊಪ್ಪಳದಲ್ಲಿ ಸರ್ಕಾರಿ ಹಾಸ್ಟೇಲ್​ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮೂರು ಇಲಾಖೆಗಳ ಕಲ್ಯಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಗ್ಯಾನೇಶ ಕಡಗದ, ಮಹ್ಮದ ರಪೀಕ್​, ಪಕೀರಪ್ಪ, ದಾವಲಸಾಬ, ಬಸವರಾಜ, ಬಾಳೇಶ ಅಂಗಡಿ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳಿಗೆ ಮನವಿ ಸಲ್ಲಿಕೆ
ಕೊಪ್ಪಳ : ಹೊರಗುತ್ತಿಗೆ ನೌಕರರ ಕನಿಷ್ಠ ವೇತನ ಜಾರಿ, ಸೇವಾಭದ್ರತೆ ಹಾಗೂ ಖಾಯಂ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೇಲ್​ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಜಿಲ್ಲಾ ಸಮಿತಿ ವತಿಯಿಂದ ಬುಧವಾರ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ಧರಣಿ ನಡೆಸಲಾಯಿತು.
ಹಿಂದುಳಿದ ವರ್ಗಗಳ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುವ ಹಾಸ್ಟೇಲ್​ ಮತ್ತು ವಸತಿ ನಿಲಯಗಳಲ್ಲಿ ಅಡುಗೆಯವರು, ಸಹಾಯಕರು, ಸ್ವಚ್ಛತಾಗಾರರು, ಕಾವಲುಗಾರರು, ನರ್ಸ್​ಗಳು ಸೇರಿದಂತೆ ಹಲವಾರು ಹುದ್ದೆಗಳಲ್ಲಿ ಕಳೆದ 15ರಿಂದ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಸಮರ್ಪಕ ವೇತನ ಮತ್ತು ಸೇವಾ ಭದ್ರತೆ ಇಲ್ಲದಿರುವುದನ್ನು ಹಾಸ್ಟೆಲ್​ ಹೊರಗುತ್ತಿಗೆ ನೌಕರರು ಖಂಡಿಸಿ ಪ್ರತಿಭಟನೆ ನಡೆಸಿದರು.
ಪ್ರಸ್ತುತ ತಿಂಗಳಿಗೆ 10ರಿಂದ 14 ಸಾವಿರ ರೂ. ವೇತನದಲ್ಲಿ ಕುಟುಂಬ ನಿರ್ವಹಣೆ ಕಷ್ಟಕರವಾಗಿದ್ದು, ಕೆಲಸದ ಅವಧಿಯೂ ನಿಗದಿಯಾಗಿಲ್ಲ ಎಂದು ನೌಕರರು ಆಕ್ರೋಶ ವ್ಯಕ್ತಪಡಿಸಿದರು. 2025ರ ಏಪ್ರಿಲ್​ 11ರಂದು ಕಾರ್ಮಿಕ ಇಲಾಖೆ ಹೊರಡಿಸಿದ ಕನಿಷ್ಠ ವೇತನದ ಕರಡು ಅಧಿಸೂಚನೆ ಇನ್ನೂ ಜಾರಿಯಾಗದಿರುವುದನ್ನು ವಿರೋಧಿಸಿದರು.
ಹೊಸ ಹಾಸ್ಟೇಲ್​ಗಳಲ್ಲಿ ಅಧಿಕಾರಿಗಳು ತಮ್ಮ ಸಂಬಂಧಿಕರಿಗೆ ಉದ್ಯೋಗ ನೀಡುವುದು, ಹಳೆಯ ನೌಕರರನ್ನು ಕೆಲಸದಿಂದ ತೆಗೆದುಹಾಕುವುದು ಹಾಗೂ ಏಪ್ರಿಲ್​-ಮೇ ತಿಂಗಳಲ್ಲಿ ಸಿಬ್ಬಂದಿಯನ್ನು ಕೆಲಸದಿಂದ ಬಿಡಿಸುವ ಕ್ರಮಗಳನ್ನು ನಿಲ್ಲಿಸುವಂತೆ ಒತ್ತಾಯಿಸಿದರು. ಕನಿಷ್ಠ ವೇತನ ಜಾರಿ, ಪಿಎಫ್​&-ಇಎಸ್​ಐ ಸೌಲಭ್ಯ, ಆರೋಗ್ಯ ಕಾರ್ಡ್​ ಹಾಗೂ ಸೇವಾಭದ್ರತೆ ನೀಡುವಂತೆ ಆಗ್ರಹಿಸಿ ಜಿಪಂ ಡಿಎಸ್​ ಟಿ. ಕೃಷ್ಣಮೂರ್ತಿ, ಹಿಂದುಳಿದ ವರ್ಗಗಳ ಇಲಾಖೆ ಡಿಡಿ ನಾಗಮಣಿ ಹೊಸಮನಿ, ಸಮಾಜ ಕಲ್ಯಾಣ ಇಲಾಖೆ ಡಿಡಿ ಅಜ್ಜಪ್ಪ ಸೋಗಲದ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಡಿಡಿ ಅಜ್ಮೀರ ಅಲಿ ಅವರಿಗೆ ಮನವಿ ಸಲ್ಲಿಸಲಾಯಿತು.
ಗ್ಯಾನೇಶ ಕಡಗದ, ಮಹ್ಮದ ರಪೀಕ್​, ಪಕೀರಪ್ಪ, ದಾವಲಸಾಬ, ಬಸವರಾಜ, ಬಾಳೇಶ, ಹನುಮಂತ, ಗಂಗೇಶ, ಶೇಖರಪ್ಪ, ಹನುಮೇಶ ಮುಕ್ಕುಂಪಿ, ದಸಾಂತಮ್ಮ, ಪಾರ್ವತಿ ಇತರರಿದ್ದರು.
ಕೊಪ್ಪಳದಲ್ಲಿ ಸರ್ಕಾರಿ ಹಾಸ್ಟೇಲ್​ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮೂರು ಇಲಾಖೆಗಳ ಕಲ್ಯಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಗ್ಯಾನೇಶ ಕಡಗದ, ಮಹ್ಮದ ರಪೀಕ್​, ಪಕೀರಪ್ಪ, ದಾವಲಸಾಬ, ಬಸವರಾಜ, ಬಾಳೇಶ ಅಂಗಡಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net