ಸಮರ್ಪಕ ವೇತನ ಸೇವಾ ಭದ್ರತೆ ನೀಡಲಿ

ಕೊಪ್ಪಳದಲ್ಲಿ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇಲಾಖೆ ಕಲ್ಯಾಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಸಮಿತಿ ಜಿಲ್ಲಾ ಅಧ್ಯಕ್ಷ ಗ್ಯಾನೇಶ ಕಡಗದ, ಉಪಾಧ್ಯಕ್ಷ ಮಹ್ಮದ ರಫೀಕ್, ಖಜಾಂಜಿ ಪಕೀರಪ್ಪ, ಪ್ರಧಾನ ಕಾರ್ಯದರ್ಶಿ ದಾವಲಸಾಬ, ಪದಾಧಿಕಾರಿಗಳಾದ ಬಸವರಾಜ, ಬಾಳೇಶ ಅಂಗಡಿ, ಹನುಮಂತ, ಗಂಗೇಶ, ಶೇಖರಪ್ಪ, ಹನುಮೇಶ ಮುಕ್ಕುಂಪಿ, ದಸಾಂತಮ್ಮ, ಪಾರ್ವತಿ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಸಮಿತಿಯಿಂದ
  • ಜಿಲ್ಲಾಡಳಿತ
  • ಭವನದ
ಕೊಪ್ಪಳ: ಹೊರಗುತ್ತಿಗೆ ನೌಕರರ ಕನಿಷ್ಠ ವೇತನ ಜಾರಿ, ಸೇವಾಭದ್ರತೆ ಹಾಗೂ ಕಾಯಂ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂ ಜಿಲ್ಲಾ ಸಮಿತಿಯಿಂದ ಬುಧವಾರ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಲಾಯಿತು.
ಹಿಂದುಳಿದ ವರ್ಗಗಳ ಇಲಾಖೆ, ಸವಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ಹಾಸ್ಟೆಲ್ ಮತ್ತು ವಸತಿ ನಿಲಯಗಳಲ್ಲಿ ಅಡುಗೆಯವರು, ಸಹಾಯಕರು, ಸ್ವಚ್ಛತಾಗಾರರು, ಕಾವಲುಗಾರರು, ನರ್ಸ್‌ಗಳು ಸೇರಿದಂತೆ ಹಲವಾರು ಹುದ್ದೆಗಳಲ್ಲಿ ಕಳೆದ 15ರಿಂದ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಸಮರ್ಪಕ ವೇತನ ಮತ್ತು ಸೇವಾ ಭದ್ರತೆ ಇಲ್ಲದಿರುವುದನ್ನು ಹಾಸ್ಟೆಲ್ ಹೊರಗುತ್ತಿಗೆ ನೌಕರರು ಖಂಡಿಸಿ ಪ್ರತಿಭಟನೆ ನಡೆಸಿದರು.
ತಿಂಗಳಿಗೆ 10ರಿಂದ 14 ಸಾವಿರ ರೂ. ವೇತನದಲ್ಲಿ ಕುಟುಂಬ ನಿರ್ವಹಣೆ ಕಷ್ಟಕರವಾಗಿದ್ದು, ಕೆಲಸದ ಅವಧಿಯೂ ನಿಗದಿಯಾಗಿಲ್ಲ ಎಂದು ನೌಕರರು ಆಕ್ರೋಶ ವ್ಯಕ್ತಪಡಿಸಿದರು. 2025ರ ಏ.11ರಂದು ಕಾರ್ಮಿಕ ಇಲಾಖೆ ಹೊರಡಿಸಿದ ಕನಿಷ್ಠ ವೇತನದ ಕರಡು ಅಧಿಸೂಚನೆ ಇನ್ನೂ ಜಾರಿಯಾಗದಿರುವುದನ್ನು ವಿರೋಧಿಸಿದರು.
ಹೊಸ ಹಾಸ್ಟೆಲ್‌ಗಳಲ್ಲಿ ಅಧಿಕಾರಿಗಳು ತಮ್ಮ ಸಂಬಂಧಿಕರಿಗೆ ಉದ್ಯೋಗ ನೀಡುವುದು, ಹಳೆಯ ನೌಕರರನ್ನು ಕೆಲಸದಿಂದ ತೆಗೆದುಹಾಕುವುದು ಹಾಗೂ ಏಪ್ರಿಲ್‌ಮೇನಲ್ಲಿ ಸಿಬ್ಬಂದಿಯನ್ನು ಕೆಲಸದಿಂದ ಬಿಡಿಸುವ ಕ್ರಮಗಳನ್ನು ನಿಲ್ಲಿಸುವಂತೆ ಒತ್ತಾಯಿಸಿದರು.
ಕನಿಷ್ಠ ವೇತನ ಜಾರಿ, ಪಿಎಫ್-ಇಎಸ್‌ಐ ಸೌಲಭ್ಯ, ಆರೋಗ್ಯ ಕಾರ್ಡ್ ಹಾಗೂ ಸೇವಾಭದ್ರತೆ ನೀಡುವಂತೆ ಆಗ್ರಹಿಸಿ ಜಿಪಂ ಡಿಎಸ್ ಟಿ. ಕೃಷ್ಣಮೂರ್ತಿ, ಹಿಂದುಳಿದ ವರ್ಗಗಳ ಇಲಾಖೆ ಡಿಡಿ ನಾಗಮಣಿ ಹೊಸಮನಿ, ಸವಾಜ ಕಲ್ಯಾಣ ಇಲಾಖೆ ಡಿಡಿ ಅಜ್ಜಪ್ಪ ಸೋಗಲದ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಡಿಡಿ ಅಜ್ಮೀರ ಅಲಿ ಅವರಿಗೆ ಮನವಿ ಸಲ್ಲಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net