ರೈಲು ನಿಲ್ದಾಣಕ್ಕೆ ಮೂಲಸೌಕರ್ಯ ಕಲ್ಪಿಸಿ

ಕುಷ್ಟಗಿ ರೈಲು ನಿಲ್ದಾಣಕ್ಕೆ ಅಗತ್ಯ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ರೈಲ್ವೆ ಹೋರಾಟ ಸಮಿತಿ ಪದಾಧಿಕಾರಿಗಳು ಹುಬ್ಬಳ್ಳಿ ವಿಭಾಗೀಯ ವ್ಯವಸ್ಥಾಪಕಿ ಭೇಲಾ ಮೀನಾಗೆ ಮನವಿ ಸಲ್ಲಿಸಿದರು. ಸಮಿತಿ ಪ್ರಧಾನ ಕಾರ್ಯದರ್ಶಿ ವೀರೇಶ್ ಬಂಗಾರಶೆಟ್ಟರ್, ಪದಾಧಿಕಾರಿಗಳಾದ ಮಂಜುನಾಥ, ಶ್ರೀಧರ್ ಘೋರ್ಪಡೆ, ಬಸವರಾಜ್ ಸಾಲಿಮಠ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಹುಬ್ಬಳ್ಳಿ ವಿಭಾಗೀಯ ವ್ಯವಸ್ಥಾಪಕಿ ಭೇಲಾ ಮೀನಾಗೆ ಹೋರಾಟ ಸಮಿತಿ ಮನವಿ
  • ರೈಲ್ವೆ ಹೋರಾಟ ಸಮಿತಿ ಒತ್ತಾಯ
ಕುಷ್ಟಗಿ: ಪಟ್ಟಣದ ರೈಲು ನಿಲ್ದಾಣಕ್ಕೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ರೈಲ್ವೆ ಹೋರಾಟ ಸಮಿತಿ ಪದಾಧಿಕಾರಿಗಳು ಹುಬ್ಬಳ್ಳಿ ವಿಭಾಗೀಯ ವ್ಯವಸ್ಥಾಪಕಿ ಭೇಲಾ ಮೀನಾಗೆ ಮಂಗಳವಾರ ಮನವಿ ಸಲ್ಲಿಸಿದರು.
ಸಮಿತಿ ಪ್ರಧಾನ ಕಾರ್ಯದರ್ಶಿ ವೀರೇಶ್ ಬಂಗಾರಶೆಟ್ಟರ್ ಮಾತನಾಡಿ, ಕುಷ್ಟಗಿ ಒಂದು ವರ್ಷದಿಂದ ರೈಲ್ವೆ ಸಂಪರ್ಕ ಹೊಂದಿದ್ದು, ನಗರದ ನಿಲ್ದಾಣದಲ್ಲಿ ಮೂಲ ಸೌಕರ್ಯಗಳಿಲ್ಲದೆ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಈಗಾಗಲೇ ಹಲವು ಭಾರಿ ಸ್ಥಳೀಯ ರೆಲ್ವೆ ಸ್ಟೇಷನ್ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಕುಷ್ಟಗಿಯಿಂದ ಗದಗ-ಹುಬ್ಬಳ್ಳಿ ಮಾರ್ಗವಾಗಿ ಬೆಂಗಳೂರಿಗೆ ತೆರಳುವ ಸಾರ್ವಜನಿಕರಿಗೆ ಅನುಕೂಲ ಒದಗಿಸಬೇಕು ಎಂದರು.
ಹುಬ್ಬಳ್ಳಿ ವಿಭಾಗೀಯ ವ್ಯವಸ್ಥಾಪಕಿ ಭೇಲಾ ಮೀನಾ ಪ್ರತಿಕ್ರಿಯಿಸಿ, ಕೊಪ್ಪಳ ಸಂಸದರು ಈ ಬಗ್ಗೆ ಸಚಿವರ ಗಮನಕ್ಕೆ ತಂದಿದ್ದಾರೆ. ಸಭೆ ಕರೆದು ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಹೋರಾಟ ಸಮಿತಿ ಪದಾಧಿಕಾರಿಗಳಾದ ಮಂಜುನಾಥ ಮಹಾಲಿಂಗಪೂರ, ಶ್ರೀಧರ್ ಘೋರ್ಪಡೆ, ಬಸವರಾಜ್ ಸಾಲಿಮಠ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net